ರೆಡ್ಮಿ ಸಂಸ್ಥೆಯ ಈ ಸ್ಮಾರ್ಟ್‌ಫೋನ್ ಇದೀಗ 51% ಡಿಸ್ಕೌಂಟ್ ಪಡೆದಿದೆ! ಇಂಥಾ ಆಫರ್ ಮತ್ತೆ ಸಿಗೋದಿಲ್ಲ!
ಬಜೆಟ್ ಬೆಲೆಯಲ್ಲಿ ಎಂಟ್ರಿ ನೀಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ರೆಡ್ಮಿ 12C ಸ್ಮಾರ್ಟ್‌ಫೋನ್ ಇದೀಗ ಭಾರಿ ರಿಯಾಯಿತಿ ಪಡೆದುಕೊಂಡಿದೆ. ಫ್ಲಿಪ್‌ಕಾರ್ಟ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಬಿಗ್ ಡಿಸ್ಕೌಂಟ್ ಪಡೆದುಕೊಂಡಿದ್ದು, ನೀವು ನಿರೀಕ್ಷೆ ಮಾಡದ ಬೆಲೆಯಲ್ಲಿ ನಿಮ್ಮ ಕೈ ಸೇರಲಿದೆ. ಇದು 4GB RAM + 64 GB ಸ್ಟೋರೇಜ್ ಆಯ್ಕೆಗೆ ಅನ್ವಯಿಸಲಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ರೆಡ್ಮಿ 12C ಸ್ಮಾರ್ಟ್‌ಫೋನ್ ಮೇಲೆ ಬಿಗ್ ಆಫರ್ ಸಿಗುತ್ತಿದೆ. ಈ ಸ್ಮಾರ್ಟ್‌ಫೋನ್ ಪಡೆದುಕೊಂಡಿರುವ ರಿಯಾಯಿತಿಯು ಗ್ರಾಹಕರನ್ನು ಅಚ್ಚರಿಪಡುವಂತೆ ಮಾಡುವುದು ಖಂಡಿತ. ಅದು ಸಹ ಬರೋಬ್ಬರಿ 51% ಡಿಸ್ಕೌಂಟ್ ಅನ್ನೋದು ವಿಶೇಷ. ಹಾಗಾದ್ರೆ ರೆಡ್ಮಿ 12C ಸ್ಮಾರ್ಟ್‌ಫೋನ್ ಡಿಸ್ಕೌಂಟ್ ಪಡೆದುಕೊಂಡ ನಂತರದ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಕೌಂಟ್ ನಂತರದ ಬೆಲೆ ಎಷ್ಟು?
ರೆಡ್ಮಿ 12C ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ 13,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್ ಮೇಲೆ 51% ಡಿಸ್ಕೌಂಟ್ ನೀಡಲಾಗ್ತಿದೆ. ಆದರಿಂದ ಈ ಫೋನ್ ನಿಮಗೆ ಕೇವಲ 6,799ರೂ ಬೆಲೆಯಲ್ಲಿ ಲಭ್ಯವಾಗಲಿದೆ. 7,000ರೂ ಒಳಗೆ ಒಂದು ಅತ್ಯುತ್ತಮ ಸ್ಮಾರ್ಟ್‌ಫೋನ್ ಖರೀದಿಸುವುದಾದರೆ ಇದು ನಿಮಗೆ ಉತ್ತಮ ಆಯ್ಕೆಯಾಗಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಬ್ಯಾಂಕ್ ಆಫರ್‌ಗಳು ಸಹ ದೊರೆಯುವುದರಿಂದ ಇದರ ಬೆಲೆ ಇನ್ನಷ್ಟು ಕಡಿಮೆ ಆಗಲಿದೆ.
ರೆಡ್ಮಿ 12C ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿದೆ?
ರೆಡ್ಮಿ 12C ಸ್ಮಾರ್ಟ್‌ಫೋನ್ 6.71 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1650 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇಯು ಟಿನ್ನಿ ಡಿವ್ ಡ್ರಾಪ್ ನಾಚ್ ರಚನೆ ಹೊಂದಿದ್ದು, ಜೊತೆಗೆ 500 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ.

ರೆಡ್ಮಿ 12C ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ರೆಡ್ಮಿ 12C ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಓಎಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 64 GB ಮತ್ತು 6GB + 128GB ಆಂತರೀಕ ಸ್ಟೋರೇಜ್ ವೇರಿಯಂಟ್ ಸಾಮರ್ಥ್ಯದ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.
ರೆಡ್ಮಿ 12C ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ರೆಡ್ಮಿ 12C ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಎರಡನೇ ಕ್ಯಾಮೆರಾವನ್ನು ಎಐ ಕ್ಯಾಮೆರಾ ಎಂದು ಗುರುತಿಸಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ರೆಡ್ಮಿ 12C ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ರೆಡ್ಮಿ 12C ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G/5G VOLTE, ವೈ-ಫೈ, ಬ್ಲೂಟೂತ್ v5.0, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಹೈಬ್ರಿಡ್ ಸಿಮ್ ಸ್ಲಾಟ್, ಅಕ್ಸೆಲೆರೊಮೀಟರ್, ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ನೀಡಲಾಗಿದೆ.


Click it and Unblock the Notifications








