ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ಈ ಸ್ಮಾರ್ಟ್‌ಫೋನ್ ಬೆಲೆ ಇದೀಗ ಇನ್ನಷ್ಟು ಕಡಿಮೆ ಆಗಿದೆ!
ಇತ್ತೀಚಿಗಷ್ಟೇ ಬಜೆಟ್ ಬೆಲೆಯಲ್ಲಿ ಎಂಟ್ರಿ ಕೊಟ್ಟು ದೂಳೆಬ್ಬಿಸಿದ್ದ ರೆಡ್ಮಿ 12C ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆಯನ್ನು ಕಂಡಿದೆ. ಶಿಯೋಮಿ ಕಂಪೆನಿ ಸ್ಮಾರ್ಟ್‌ಫೋನ್ ಪ್ರಿಯರಿಗಾಗಿ ರೆಡ್ಮಿ 12C ಸ್ಮಾರ್ಟ್‌ಫೋನ್ ಬೆಲೆಯನ್ನು ಸೀಮಿತ ಅವಧಿಗೆ ಕಡಿತಗೊಳಿಸಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಅನ್ನು ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ.
ಹೌದು, ರೆಡ್ಮಿ 12C ಸ್ಮಾರ್ಟ್‌ಫೋನ್ ಬೆಲೆಯನ್ನು ಸೀಮಿತ ಅವಧಿಯ ತನಕ ಕಡಿತಗೊಳಿಸಲಾಗಿದೆ. ಇದರಿಂದ ಸ್ಮಾರ್ಟ್‌ಫೋನ್ ಪ್ರಿಯರು ಈ ಸ್ಮಾರ್ಟ್‌ಫೋನ್ ಮೇಲೆ ಬೆಲೆ ಕಡಿತದ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಆದರೆ ಈ ಬೆಲೆ ಕಡಿತ ಆಫರ್ ಬೇಸ್ ಮಾಡೆಲ್ 4GB ಆಯ್ಕೆಗೆ ಮಾತ್ರ ಅನ್ವಯಿಸಲಿದೆ. ಹಾಗಾದ್ರೆ ರೆಡ್ಮಿ 12C ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಎಷ್ಟು ಕಡಿತಗೊಳಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ 12C ಸ್ಮಾರ್ಟ್‌ಫೋನ್ ಬೆಲೆ ಕಡಿತ
ರೆಡ್ಮಿ 12C ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಎಂಟ್ರಿ ನೀಡಿದರೂ ಸಹ ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ನ ಪ್ರಾರಂಭಿಕ ಬೆಲೆ 8,999ರೂ. ಆಗಿದೆ. ಆದರೆ ಇತ್ತೀಚಿಗೆ ಶಿಯೋಮಿ ಕಂಪೆನಿ ಈ ಫೋನ್ ಮೇಲೆ 200ರೂ.ರಿಯಾಯಿತಿ ನೀಡಿತ್ತು. ಇದೀಗ ವಿಶೇಷ ಆಫರ್‌ಗಳ ಮೂಲಕ ಸೀಮಿತ ಅವಧಿಗೆ 800ರೂ. ಬೆಲೆಯನ್ನು ಕಡಿತಗೊಳಿಸಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಅನ್ನು ನೀವು ಕೇವಲ 7,999ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ.
ಯಾರಿಗೆಲ್ಲಾ ಆಫರ್ ಲಭ್ಯ!
ಸೀಮಿತ ಅವಧಿಗೆ ಮಾತ್ರ ಲಭ್ಯವಿರುವ ಈ ರಿಯಾಯಿತಿಯನ್ನು ಪಡೆಯಲು, ನೀವು ICICI ಕ್ರೆಡಿಟ್ ಕಾರ್ಡ್, HDFC ಕ್ರೆಡಿಟ್ ಕಾರ್ಡ್ ಅಥವಾ HDFC ಡೆಬಿಟ್ ಕಾರ್ಡ್ ಅನ್ನು ಬಳಸಿಕೊಂಡು Amazon ಮೂಲಕ EMI ನಲ್ಲಿ ಈ ಫೋನ್ ಅನ್ನು ಖರೀದಿಸಬೇಕಾಗುತ್ತದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆ 7,999ರೂ.ಗಳಿಗೆ ಇಳಿಕೆಯಾಗಲಿದೆ. ಅದರಂತೆ ಅಮೆಜಾನ್ ಕ್ರೆಡಿಟ್/ಡೆಬಿಟ್ ಕಾರ್ಡ್ ಆಫರ್ ಪಡೆದುಕೊಳ್ಳಲು ಜೂನ್ 15 ಕೊನೆಯ ದಿನವಾಗಿದೆ. ಆದರೆ UPI ಆಫರ್‌ಗಳಿಗೆ ಲಾಸ್ಟ್ ಡೇಟ್ ನಿಗಧಿಪಡಿಸಿಲ್ಲ.
ರೆಡ್ಮಿ 12C ಸ್ಮಾರ್ಟ್‌ಫೋನ್ ಫೀಚರ್ಸ್ ವಿವರ: ರೆಡ್ಮಿ 12C ಸ್ಮಾರ್ಟ್‌ಫೋನ್ 6.71 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1650 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಹೊಂದಿದ್ದು, 500 ನಿಟ್ ಗರಿಷ್ಠ ಬ್ರೈಟ್‌ನೆಸ್ ನೀಡಲಿದೆ.

ರೆಡ್ಮಿ 12C ಸ್ಮಾರ್ಟ್‌ಫೋನ್ ಪ್ರೊಸೆಸರ್ ಸಾಮರ್ಥ್ಯ: ಇದು ಮೀಡಿಯಾಟೆಕ್ ಹಿಲಿಯೋ G85SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.
ರೆಡ್ಮಿ 12C ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್: ರೆಡ್ಮಿ 12C ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಎರಡನೇ ಕ್ಯಾಮೆರಾ ಸೆನ್ಸಾರ್ ಬಗ್ಗೆ ಮಾಹಿತಿ ತಿಳಿಸಿಲ್ಲ. ಹಾಗೆಯೇ ಈ ಫೋನ್ ತನ್ನ ವರ್ಗದಲ್ಲೇ ಉತ್ತಮ ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ರೆಡ್ಮಿ 12C ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹಣೆ ವಿಸ್ತರಣೆಗೆ ಬೆಂಬಲವಿದೆ.


Click it and Unblock the Notifications








