Just In
- 19 min ago
ಟೆಲಿಗ್ರಾಮ್ನಲ್ಲಿ ವಾಟ್ಸಾಪ್ ಅನ್ನೇ ಮೀರಿಸುವ ಫೀಚರ್ಸ್!; ಬಳಕೆದಾರರಿಗೆ ಸಾಕಷ್ಟು ಅನುಕೂಲ
- 45 min ago
PVRನಿಂದ ಭರ್ಜರಿ ಸಿಹಿಸುದ್ದಿ; ಸಿನಿಮಾ ಪ್ರಿಯರ ಕಣ್ಣಿಗೆ ಹಬ್ಬದ ಸಂಭ್ರಮ!
- 1 hr ago
ಚೀನಾಗೆ ಬಿಗ್ ಶಾಕ್ ನೀಡಿದ ಭಾರತ! 138 ಬೆಟ್ಟಿಂಗ್ ಆ್ಯಪ್ಗಳಿಗೆ ಗೇಟ್ಪಾಸ್!
- 2 hrs ago
ಹೆಚ್ಚಿನ ಡೇಟಾ ಬೇಕು ಅಂದ್ರೆ BSNLನ ಈ ಪ್ಲ್ಯಾನ್ಗಳು ಬೆಸ್ಟ್!
Don't Miss
- News
ಕೆಲವೇ ಕ್ಷಣಗಳಲ್ಲಿ ತುಮಕೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಸಿದ್ಧತೆ ಹೇಗಿದೆ ತಿಳಿಯಿರಿ
- Movies
3ನೇ ಬಾರಿಗೆ ಗ್ರ್ಯಾಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಂಗಳೂರಿನ ಸಂಗೀತ ನಿರ್ದೇಶಕ ರಿಕ್ಕಿ ಕೇಜ್
- Finance
ಅದಾನಿ ಡಾಲರ್ ಬಾಂಡ್ ವಿರುದ್ಧ ಸಾಲ ನೀಡಲು ಸ್ಟಾಡರ್ಡ್ ಚಾರ್ಟೆಡ್ ನಕಾರ: ವರದಿ
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ಭಾರತವನ್ನು ಮಣಿಸಲು ಆಸಿಸ್ ತಂಡಕ್ಕೆ ಮಿಚೆಲ್ ಜಾನ್ಸನ್ ಸಲಹೆ
- Automobiles
ಸೆಲ್ಟೋಸ್ನ ಗೇರ್ಬಾಕ್ಸ್ನಲ್ಲಿ ದೋಷ ಕಂಡು ಬಂದಾಗ ಉಚಿತವಾಗಿ ಬದಲಾಯಿಸಿ ಕೊಟ್ಟ ಕಿಯಾ
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಫೆಬ್ರುವರಿಯಲ್ಲಿ ಅಬ್ಬರ ಶುರು ಮಾಡಲಿದೆ ರೆಡ್ಮಿ 12C ಫೋನ್!.ಇದು ಬಜೆಟ್ ಫೋನ್!
ಶಿಯೋಮಿ ಸಂಸ್ಥೆಯು ಇತ್ತೀಚೆಗೆ ಚೀನಾದಲ್ಲಿ ರೆಡ್ಮಿ 12C (Redmi 12C) ಹೆಸರಿನ ಬಜೆಟ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದ್ದು, ಬಜೆಟ್ ಬೆಲೆಯ ವರ್ಗದಲ್ಲಿ ಹೊಸ ಅಲೆ ಸೃಷ್ಠಿ ಮಾಡಿದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಇದೀಗ ಈ ಫೋನ್ ಭಾರತ ಮಾರುಕಟ್ಟೆಗೆ ಎಂಟ್ರಿ ನೀಡುವ ಲಕ್ಷಣ ಹೊರಹಾಕಿದೆ.

ಹೌದು, ರೆಡ್ಮಿ 12C ಎಂಟ್ರಿ ಲೆವೆಲ್ ಮಾದರಿಯಲ್ಲಿ ಗಮನ ಸೆಳೆದಿದೆ. ಇನ್ನು ಟಿಪ್‌ಸ್ಟರ್ Kacper Skrzypek ವರದಿ ಹಾಗೂ ಮೊಬೈಲ್ಸ್‌ನ ವರದಿ ಪ್ರಕಾರ ರೆಡ್ಮಿ 12C (Redmi 12C) ಫೋನ್ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. 2023ರ ಮೊಬೈಲ್ ವರ್ಲ್ಡ್ ಕಾಂಗ್ರೆಸ್ (MWC) ಕ್ಕಿಂತ ಮೊದಲು ಇದೇ ಫೆಬ್ರವರಿ ತಿಂಗಳಿನಲ್ಲಿ ಲಾಂಚ್ ಆಗಲಿದೆ ಎಂದು ಹೇಳಲಾಗ್ತಿದೆ. ಹಾಗಾದರೆ ರೆಡ್ಮಿ 12C ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ 12C ಫೋನ್ 1650 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.71 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 20.6:9 ಅನುಪಾತ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು ಟಿನ್ನಿ ಡಿವ್ ಡ್ರಾಪ್ ನಾಚ್ ರಚನೆ ಹೊಂದಿದ್ದು, ಜೊತೆಗೆ 500 nits ಬ್ರೈಟ್ನೆಸ್ ಹೊಂದಿದೆ.

ಪ್ರೊಸೆಸರ್ ಪವರ್
ರೆಡ್ಮಿ 12C ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 12 ಓಎಸ್ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 128GB ಮತ್ತು 6GB + 128GB ಆಂತರೀಕ ಸ್ಟೋರೇಜ್ ವೇರಿಯಂಟ್ ಸಾಮರ್ಥ್ಯದ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ರೆಡ್ಮಿ 12C ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಎರಡನೇ ಕ್ಯಾಮೆರಾ ಸೆನ್ಸಾರ್ ಬಗ್ಗೆ ಮಾಹಿತಿ ತಿಳಿಸಿಲ್ಲ. ಹಾಗೆಯೇ ಈ ಫೋನ್ ತನ್ನ ವರ್ಗದಲ್ಲೇ ಉತ್ತಮ ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ರೆಡ್ಮಿ 12C ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹಣೆ ವಿಸ್ತರಣೆಗೆ ಬೆಂಬಲವಿದೆ. ಸಾಧನವು ಹೈಬ್ರಿಡ್ ಸಿಮ್ ಸ್ಲಾಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G/5G VOLTE, ವೈ-ಫೈ, ಬ್ಲೂಟೂತ್ v5.0, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ
ರೆಡ್ಮಿ 12C ಫೋನ್ 4GB RAM + 128GB ವೇರಿಯಂಟ್ ಬೆಲೆಯು ಚೀನಾದಲ್ಲಿ CNY 699 (ಭಾರತದಲ್ಲಿ ಅಂದಾಜು 8,400ರೂ.) ಎನ್ನಲಾಗಿದೆ. ಅದೇ ರೀತಿ 6GB + 128GB ವೇರಿಯಂಟ್ ಬೆಲೆಯು CNY 799 (ಭಾರತದಲ್ಲಿ ಅಂದಾಜು 9,600 ರೂ) ಆಗಿರಲಿದೆ. ಇನ್ನು ಈ ಫೋನ್ ಶಾಡೋ ಬ್ಲ್ಯಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಬಣ್ಣಗಳ ಆಯ್ಕೆ ಪಡೆದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470