Home
ಸುದ್ದಿಜಾಲ

ರೆಡ್ಮಿ 12C ಫೋನ್‌ ಲಾಂಚ್!..ಮಾರುಕಟ್ಟೆಯಲ್ಲಿ ಈ ಫೋನ್‌ ಕ್ರಾಂತಿ ಮಾಡುತ್ತಾ?

ಜನಪ್ರಿಯ ಶಿಯೋಮಿ ಕಂಪನಿಯು ತನ್ನ ರೆಡ್ಮಿ ಸರಣಿ ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದೆ. ಇದೀಗ ಹೊಸದಾಗಿ ರೆಡ್ಮಿ 12C (Redmi 12C) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಈ ಫೋನ್ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಪಡೆದಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ.

ಚೀನಾದಲ್ಲಿ ರೆಡ್ಮಿ 12C

ಹೌದು, ಶಿಯೋಮಿ ಕಂಪನಿಯು ಚೀನಾದಲ್ಲಿ ರೆಡ್ಮಿ 12C (Redmi 12C) ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಫೋನ್‌ ಬಜೆಟ್‌ ಮಾದರಿಯ ಬೆಲೆಯನ್ನು ಹೊಂದಿದ್ದು, 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್ 4GB + 128GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ 12C ಫೋನ್‌ 1650 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.71 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 20.6:9 ಅನುಪಾತ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು ಟಿನ್ನಿ ಡಿವ್ ಡ್ರಾಪ್‌ ನಾಚ್‌ ರಚನೆ ಹೊಂದಿದ್ದು, ಜೊತೆಗೆ 500 nits ಬ್ರೈಟ್ನೆಸ್‌ ಹೊಂದಿದೆ.

ಪ್ರೊಸೆಸರ್‌ ಪವರ್

ಪ್ರೊಸೆಸರ್‌ ಪವರ್

ರೆಡ್ಮಿ 12C ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್ 12 ಓಎಸ್‌ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 128GB ಮತ್ತು 6GB + 128GB ಆಂತರೀಕ ಸ್ಟೋರೇಜ್ ವೇರಿಯಂಟ್‌ ಸಾಮರ್ಥ್ಯದ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ರೆಡ್ಮಿ 12C ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಎರಡನೇ ಕ್ಯಾಮೆರಾ ಸೆನ್ಸಾರ್‌ ಬಗ್ಗೆ ಮಾಹಿತಿ ತಿಳಿಸಿಲ್ಲ. ಹಾಗೆಯೇ ಈ ಫೋನ್ ತನ್ನ ವರ್ಗದಲ್ಲೇ ಉತ್ತಮ ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರೆಡ್ಮಿ 12C ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹಣೆ ವಿಸ್ತರಣೆಗೆ ಬೆಂಬಲವಿದೆ. ಸಾಧನವು ಹೈಬ್ರಿಡ್ ಸಿಮ್ ಸ್ಲಾಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G/5G VOLTE, ವೈ-ಫೈ, ಬ್ಲೂಟೂತ್ v5.0, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ

ಬೆಲೆ ಎಷ್ಟು ಮತ್ತು ಲಭ್ಯತೆ

ಶಿಯೋಮಿ ಬಿಡುಗಡೆ ಮಾಡಿರುವ ರೆಡ್ಮಿ 12C ಫೋನ್‌ 4GB RAM + 128GB ವೇರಿಯಂಟ್‌ ಬೆಲೆಯು ಚೀನಾದಲ್ಲಿ CNY 699 (ಭಾರತದಲ್ಲಿ ಅಂದಾಜು 8,400ರೂ.) ಎನ್ನಲಾಗಿದೆ. ಅದೇ ರೀತಿ 6GB + 128GB ವೇರಿಯಂಟ್‌ ಬೆಲೆಯು CNY 799 (ಭಾರತದಲ್ಲಿ ಅಂದಾಜು 9,600 ರೂ) ಆಗಿರಲಿದೆ. ಇನ್ನು ಈ ಫೋನ್ ಶಾಡೋ ಬ್ಲ್ಯಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಬಣ್ಣಗಳ ಆಯ್ಕೆ ಪಡೆದಿದೆ. ಭಾರತದಲ್ಲಿ ಯಾವಾಗ ಎಂಟ್ರ ನೀಡಲಿದೆ ಎನ್ನುವ ಬಗ್ಗೆ ಕಂಪನಿಯು ಮಾಹಿತಿ ಹೊರಹಾಕಿಲ್ಲ.

Best Mobiles in India

English summary
Redmi 12C with MediaTek Helio G85 SoC Launched: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+