ಇಂದು ರೆಡ್ಮಿ 13 5G ಖರೀದಿಗೆ ಲಭ್ಯ.. 108ಎಂಪಿ ಕ್ಯಾಮೆರಾ!..ಆಫರ್ ಏನಿದೆ?
ಭಿನ್ನ ಮೊಬೈಲ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಥಾನ ಪಡೆದಿರುವ ರೆಡ್ಮಿ ಕಂಪನಿಯು ತನ್ನ ಬಹುನಿರೀಕ್ಷಿತ ರೆಡ್ಮಿ 13 5G (Redmi 13 5G) ಸ್ಮಾರ್ಟ್‌ಫೋನ್ ಅನ್ನು ಇತ್ತೀಚಿಗೆ ಮಾರುಕಟ್ಟೆಗೆ ಪರಿಚಯಿಸಿ ಗಮನ ಸೆಳೆದಿದೆ. ಈ ನೂತನ ಮೊಬೈಲ್ ಇಂದು (ಜುಲೈ 12 ರಂದು) ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಫಸ್ಟ್ ಸೇಲ್ ಪ್ರಾರಂಭ ಮಾಡಲಿದ್ದು, ಅಗ್ಗದ ಬೆಲೆ ಪಡೆದಿದೆ. ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜೆನ್ 2 ಚಿಪ್‌ಸೆಟ್ ಪ್ರೊಸೆಸರ್ ಪಡೆದಿದೆ.
ಹೌದು, ರೆಡ್ಮಿ 13 5G (Redmi 13 5G) ಮೊಬೈಲ್ ಇಂದು ಮೊದಲ ಸೇಲ್ ಅನ್ನು ಅಮೆಜಾನ್ ಮೂಲಕ ಪ್ರಾರಂಭ ಮಾಡಲಿದ್ದು, ಗ್ರಾಹಕರಿಗೆ ಆಕರ್ಷಕ ಕೊಡುಗೆ ಕೂಡಾ ಸಿಗಲಿದೆ. ಈ ಫೋನ್ 6GB RAM + 128GB ಹಾಗೂ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ವಹಿವಾಟು ಮಾಡಿ ಫೋನ್ ಖರೀದಿಸಿದರೆ, 1,000ರೂ. ಗಳ ರಿಯಾಯಿತಿ ಪಡೆಯಬಹುದು.

ಅಂದಹಾಗೆ ರೆಡ್ಮಿ 13 5G ಫೋನ್ 108 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರೊಂದಿಗೆ 5000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಅಲ್ಲದೇ 13 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 12,999ರೂ. ಆಗಿದೆ. ಹಾಗಾದರೆ ರೆಡ್ಮಿ 13 5G ಫೋನಿನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 13 5G ಫೋನಿನ ಫೀಚರ್ಸ್ ಹೀಗಿವೆ
ರೆಡ್ಮಿ 13 5G ಮೊಬೈಲ್ 6.79 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 450 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.
ರೆಡ್ಮಿ 13 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜೆನ್ 2 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 OS ಸಪೋರ್ಟ್ ನೊಂದಿಗೆ ರನ್ ಆಗಲಿದೆ. ಹಾಗೆಯೇ 6GB RAM + 128GB ಹಾಗೂ 8GB RAM + 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ರೆಡ್ಮಿ 13 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ 13 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ 5G SIM ಸಪೋರ್ಟ್, 3.5mm ಹೆಡ್‌ಫೋನ್ ಜ್ಯಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು USB ಟೈಪ್-C ಪೋರ್ಟ್ ಪಡೆದಿದೆ.


Click it and Unblock the Notifications








