Home
ಸುದ್ದಿಜಾಲ

ಇಂದು 'ರೆಡ್ಮಿ 13C 5G' ಮಾರಾಟ ಪ್ರಾರಂಭ; ಬಜೆಟ್‌ ಬೆಲೆಗೆ, ಅಚ್ಚರಿಯ ಫೀಚರ್ಸ್‌!

ಭಿನ್ನ ಪ್ರೈಸ್‌ಟ್ಯಾಗ್‌ನ ಸ್ಮಾರ್ಟ್‌ಫೋನ್‌ ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿರುವ ರೆಡ್ಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ರೆಡ್ಮಿ 13C 5G ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ನೂತನ ಸ್ಮಾರ್ಟ್‌ಫೋನ್‌ ಇಂದು (ಡಿಸೆಂಬರ್ 16 ರಂದು) ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ಪ್ರಥಮ ಮಾರಾಟ ಶುರು ಮಾಡಲಿದೆ

ಹೌದು, ರೆಡ್ಮಿ 13C 5G ಮೊಬೈಲ್‌ ಇಂದು ಮೊದಲ ಸೇಲ್‌ ಅನ್ನು ಅಮೆಜಾನ್‌ ಮೂಲಕ ಪ್ರಾರಂಭ ಮಾಡಿದ್ದು, ಗ್ರಾಹಕರಿಗೆ ಆಕರ್ಷಕ ಕೊಡುಗೆ ಕೂಡಾ ಸಿಗಲಿದೆ. ಈ ಫೋನ್‌ 4G RAM+128GB, 6GB RAM + 128GB ಹಾಗೂ 8GB RAM+ 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಗ್ರಾಹಕರು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಥವಾ ಇಎಮ್‌ಐ ವಹಿವಾಟುಗಳನ್ನು ಬಳಿಸಿ ಫೋನ್‌ ಖರೀದಿಸಿದರೆ, 1,000ರೂ. ಗಳ ರಿಯಾಯಿತಿ ಲಭ್ಯ ಆಗಲಿದೆ.

ಇಂದು 'ರೆಡ್ಮಿ 13C 5G' ಮಾರಾಟ ಪ್ರಾರಂಭ; ಬಜೆಟ್‌ ಬೆಲೆಗೆ, ಅಚ್ಚರಿಯ ಫೀಚರ್ಸ್‌!

ಅಂದಹಾಗೆ ರೆಡ್ಮಿ 13C 4G ಫೋನ್‌ 4G RAM+128GB,ವೇರಿಯಂಟ್‌ ಬೆಲೆಯು 10,999ರೂ. ಆಗಿದ್ದು, 6GB + 128GB ಸ್ಟೋರೇಜ್‌ ವೇರಿಯಂಟ್‌ ದರವು 12,499ರೂ. ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 14,499ರೂ. ಆಗಿದೆ. ಇನ್ನು ಈ ಫೋನ್‌ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ 13C 5G ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 13C 5G ಫೋನಿನ ಫೀಚರ್ಸ್‌ ಹೀಗಿವೆ

ರೆಡ್ಮಿ ನೋಟ್‌ 13 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ.

ಇಂದು 'ರೆಡ್ಮಿ 13C 5G' ಮಾರಾಟ ಪ್ರಾರಂಭ; ಬಜೆಟ್‌ ಬೆಲೆಗೆ, ಅಚ್ಚರಿಯ ಫೀಚರ್ಸ್‌!

ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಸಪೋರ್ಟ್‌ ನೊಂದಿಗೆ ರನ್‌ ಆಗಲಿದೆ. ಹಾಗೆಯೇ 6GB RAM + 128GB ಹಾಗೂ 8GB RAM+ 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಹಾಗೆಯೇ ರೆಡ್ಮಿ ನೋಟ್‌ 13 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇಂದು 'ರೆಡ್ಮಿ 13C 5G' ಮಾರಾಟ ಪ್ರಾರಂಭ; ಬಜೆಟ್‌ ಬೆಲೆಗೆ, ಅಚ್ಚರಿಯ ಫೀಚರ್ಸ್‌!

ಇನ್ನು ರೆಡ್ಮಿ ನೋಟ್‌ 13 ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಸಪೋರ್ಟ್‌ ಮಾಡುತ್ತದೆ.

Best Mobiles in India

English summary
Redmi 13C 5G first sale today in india. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+