Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರೆಡ್ಮಿ 13C 5G ಫೋನ್‌ ಬೆಲೆಯಲ್ಲಿ ಇಳಿಕೆ!

ಮೊಬೈಲ್‌ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಥಾನ ಪಡೆದಿರುವ ರೆಡ್ಮಿ ಸಂಸ್ಥೆಯು ಕೆಲವು ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಆ ಪೈಕಿ ಸಂಸ್ಥೆಯ ರೆಡ್ಮಿ 13C 5G (Redmi 13C 5G) ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದ್ದು, ಈ ಫೋನ್‌ ಅಗ್ಗದ ವಿಭಾಗದಲ್ಲಿ ಕಾಣಿಸಿಕೊಂಡಿದೆ. ಸದ್ಯ ರೆಡ್ಮಿ 13C 5G (Redmi 13C 5G) ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ನಲ್ಲಿ 10,000ರೂ. ಒಳಗೆ ಲಭ್ಯ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಇದೀಗ ರೆಡ್ಮಿ 13C 5G (Redmi 13C 5G) ಮೊಬೈಲ್‌ ಶೇ. 30% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಫೋನಿನ 4 GB RAM + 128 GB ವೇರಿಯಂಟ್‌ 9,699ರೂ. ಗಳ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಎಕ್ಸ್‌ಚೇಂಜ್ ಆಫರ್‌ ಸಹ ಪಡೆದುಕೊಂಡರೆ, ಈ ಫೋನ್‌ ಅನ್ನು ಮತ್ತಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಸಬಹುದು.

ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರೆಡ್ಮಿ 13C 5G ಫೋನ್‌ ಬೆಲೆಯಲ್ಲಿ ಇಳಿಕೆ!

ಅಂದಹಾಗೆ ಈ ಮೊಬೈಲ್‌ 4G RAM + 128GB ವೇರಿಯಂಟ್‌, 6GB + 128GB ಸ್ಟೋರೇಜ್‌ ವೇರಿಯಂಟ್‌ ಮತ್ತು 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್‌ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ರೆಡ್ಮಿ 13C 5G ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 13C 5G - ಫೀಚರ್ಸ್‌

ರೆಡ್ಮಿ 13 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಇದು 90Hzರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ.

ರೆಡ್ಮಿ 13 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದೆ. ಇದು ಆಂಡ್ರಾಯ್ಡ್‌ 13 ಸಪೋರ್ಟ್‌ ಪಡೆದಿದೆ. ಹಾಗೆಯೇ 6GB RAM + 128 GB ಹಾಗೂ 8GB RAM+ 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗಳು ಇವೆ. ಇದರ ಜೊತೆಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ರೆಡ್ಮಿ 13 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಅಲ್ಲದೇ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ 13 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಸಪೋರ್ಟ್‌ ಹೊಂದಿದೆ.

Best Mobiles in India

English summary
Redmi 13C 5G Gets A Massive Price drop On Flipkart Website. Check offer, Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+