ಇತ್ತೀಚಿಗೆ ಲಾಂಚ್ ಆದ ಈ 5G ಫೋನಿನ ಬೆಲೆಯಲ್ಲಿ ಇಳಿಕೆ!.ಗ್ರಾಹಕರಿಗೆ ಖುಷಿ!
ಜನಪ್ರಿಯ ಶಿಯೋಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ರೆಡ್ಮಿ 13C 5G ಫೋನ್ ಈಗಾಗಲೇ ಗ್ರಾಹಕರನ್ನು ಆಕರ್ಷಣೆ ಮಾಡಿದೆ. ರೆಡ್ಮಿ 13C 5G ಮೊಬೈಲ್ ಅದರ ಡಿಸೈನ್ ಹಾಗೂ ಬಜೆಟ್ ದರದಿಂದಾಗಿ ಮಾರುಕಟ್ಟೆಯಲ್ಲಿ ಮತ್ತಷ್ಟು ಸದ್ದು ಮಾಡುತ್ತಿದೆ. ಆದರೆ ಇದೀಗ ರೆಡ್ಮಿ 13C 5G ಫೋನ್ ಅಮೆಜಾನ್ ತಾಣದಲ್ಲಿ ಸಖತ್ ರಿಯಾಯಿತಿ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಪ್ರಮುಖ ಇ ಕಾಮರ್ಸ್ ದೈತ್ಯ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ರೆಡ್ಮಿ 13C 5G ಫೋನ್ ಶೇ. 21% ರಷ್ಟು ನೇರ ರಿಯಾಯಿತಿ ಹೊಂದಿದೆ. ಈ ಮೊಬೈಲ್ 8GB RAM + 256GB ವೇರಿಯಂಟ್ 13,999ರೂ. ಬೆಲೆ ಪಡೆದಿದ್ದು, ಸದ್ಯ ಅಮೆಜಾನ್ ಆಫರ್‌ನಲ್ಲಿ ಈ ಫೋನ್ 10,999ರೂ. ಗಳಿಗೆ ಗ್ರಾಹಕರು ಖರೀದಿ ಮಾಡಬಹುದಾಗಿದೆ. ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಲಭ್ಯ.

ಅಂದಹಾಗೆ ರೆಡ್ಮಿ 13C 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ ಆಯ್ಕೆ ಅನ್ನು ಹೊಂದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆ ಲ್ ಆಗಿದೆ. ಇದರ ಜೊತೆಗೆ 5,000mAh ಜೊತೆಗೆ ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗಾದರೇ ರೆಡ್ಮಿ 13C 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 13C 5G ಫೋನಿನ ಫೀಚರ್ಸ್ ಹೀಗಿವೆ
ರೆಡ್ಮಿ ನೋಟ್ 13 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.

ರೆಡ್ಮಿ 13C ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಸಪೋರ್ಟ್ ನೊಂದಿಗೆ ರನ್ ಆಗಲಿದೆ. ಹಾಗೆಯೇ 6 GB RAM + 128 GB ಹಾಗೂ 8 GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ಹಾಗೆಯೇ ರೆಡ್ಮಿ 13C ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ 13C ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಈ ಫೋನ್ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್ C ಚಾರ್ಜಿಂಗ್ ಸಪೋರ್ಟ್ ಮಾಡುತ್ತದೆ.


Click it and Unblock the Notifications








