Redmi ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ; ಈ ಆಫರ್ ಮಿಸ್ ಮಾಡ್ಕೋಬೇಡಿ!
ಗಣೇಶ ಹಬ್ಬದ ಪ್ರಯುಕ್ತ ದೈತ್ಯ ಇ ಕಾಮರ್ಸ್ ವೆಬ್‌ಸೈಟ್ ಅಮೆಜಾನ್ ಪ್ಲಾಟ್‌ಫಾರ್ಮ್ 'ಎಲೆಕ್ಟ್ರಾನಿಕ್ಸ್ ಫೆಸ್ಟಿವಲ್ ಸೇಲ್ 2024' (Amazon Electronics Festival Sale 2024) ಆಯೋಜಿಸುವ ಮೂಲಕ ಖರೀದಿದಾರರಿಗೆ ಸಖತ್ ಖುಷಿ ನೀಡಿದೆ. ಈ ವಿಶೇಷ ಮಾರಾಟ ಈಗಾಗಲೇ ಲೈವ್ ಇದ್ದು, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ಸೇರಿದಂತೆ ಸ್ಮಾರ್ಟ್‌ಫೊನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದೆ. ಈ ಮಾರಾಟದಲ್ಲಿ ಶಿಯೋಮಿ ಸಂಸ್ಥೆಯ ರೆಡ್ಮಿ 13C 5G ಫೋನ್ ಸಹ ಡಿಸ್ಕೌಂಟ್ ಪಡೆದಿದೆ.
ಹೌದು, ಅಮೆಜಾನ್ ವೆಬ್‌ಸೈಟ್‌ನಲ್ಲಿ ಎಲೆಕ್ಟ್ರಾನಿಕ್ಸ್ ಫೆಸ್ಟಿವಲ್ ಸೇಲ್ 2024 (Amazon Electronics Festival Sale 2024) ಸೇಲ್ ಶುರುವಾಗಿದೆ. ಈ ಮಾರಾಟದಲ್ಲಿ ರೆಡ್ಮಿ 13C 5G (Redmi 13C 5G) ಸ್ಮಾರ್ಟ್‌ಫೋನ್ ಶೇ. 25% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 4GB RAM + 128GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 10,498ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಅಂದಹಾಗೆ ಈ ಮಾರಾಟವು ಇದೇ ಸೆಪ್ಟೆಂಬರ್ 10 ರ ವರೆಗೆ ಚಾಲ್ತಿ ಇರಲಿದೆ.

ಅಂದಹಾಗೆ ರೆಡ್ಮಿ 13C 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಬಲ ಪಡೆದುಕೊಂಡಿದ್ದು, ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗಾದರೇ ರೆಡ್ಮಿ ನೋಟ್ 13 5G ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ರೆಡ್ಮಿ 13C 5G - ಫೀಚರ್ಸ್ ಹೀಗಿವೆ
ರೆಡ್ಮಿ ನೋಟ್ 13 ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ರೆಡ್ಮಿ ನೋಟ್ 13 ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಸಪೋರ್ಟ್ ನೊಂದಿಗೆ ರನ್ ಆಗಲಿದೆ. ಹಾಗೆಯೇ 6GB RAM + 128GB ಹಾಗೂ 8GB RAM+ 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ರೆಡ್ಮಿ ನೋಟ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ ನೋಟ್ 13 ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್ ಸಪೋರ್ಟ್ ಮಾಡುತ್ತದೆ.


Click it and Unblock the Notifications








