Home
ಸುದ್ದಿಜಾಲ

Redmi: ರೆಡ್ಮಿ 13C 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ರಿಯಾಯಿತಿ! 50MP ಕ್ಯಾಮೆರಾ

ಸ್ಮಾರ್ಟ್‌ಫೋನ್‌ಗಳನ್ನು ಖರೀದಿ ಮಾಡಬೇಕು ಎಂದುಕೊಂಡಿದ್ದರೆ ಅದರಲ್ಲೂ ಬಜೆಟ್‌ ಬೆಲೆಯ ಫೋನ್‌ ಅನ್ನು ಆಫರ್ ಬೆಲೆಗೆ ಖರೀದಿ ಮಾಡಬೇಕು ಎಂದುಕೊಂಡಿದ್ದರೆ ನಿಮಗೆ ಇದು ಉತ್ತಮ ಸಮಯ. ಯಾಕೆಂದರೆ ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ ರೆಡ್ಮಿ 13C 5G ಸ್ಮಾರ್ಟ್‌ಫೋನ್‌ಗೆ (Redmi 13C 5G smartphone) ಆಫರ್ ಘೋಷಣೆ ಮಾಡಲಾಗಿದೆ.

ಹೌದು, ರೆಡ್ಮಿ 13C 5G ಸ್ಮಾರ್ಟ್‌ಫೋನ್‌ ಅನ್ನು ಇದೀಗ ಭಾರೀ ಆಫರ್ ಬೆಲೆಯೊಂದಿಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ 128 GB ಇಂಟರ್‌ ಸ್ಟೋರೇಜ್‌ ಆಯ್ಕೆ ಪಡೆದಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ಗೆ ಇರುವ ಆಫರ್ ಏನು?, ಇದರ ಪ್ರಮುಖ ಫೀಚರ್ಸ್ ಏನು ಎಂಬಿತ್ಯಾದಿ ಮಾಹಿತಿಯನ್ನು ಇಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ರೆಡ್ಮಿ 13C 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ರಿಯಾಯಿತಿ! 50MP ಕ್ಯಾಮೆರಾ

ರೆಡ್ಮಿ 13C 5G ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 13,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 10,499 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್ ಈ ಫೋನ್ ಮೇಲೆ ಬರೋಬ್ಬರಿ 25% ರಿಯಾಯಿತಿ ಘೋಷಣೆ ಮಾಡಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್‌ ಆಫರ್ ಬಳಕೆ ಮಾಡಿಕೊಳ್ಳುವ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್‌ ನಿಮ್ಮದಾಗಿಸಿಕೊಳ್ಳಬಹುದಾಗಿದೆ.

ಫ್ಲಿಪ್‌ಕಾರ್ಟ್ ಯುಪಿಐ ವ್ಯವಹಾರದಲ್ಲಿ ತ್ವರಿತ ರಿಯಾಯಿತಿ, ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಂಕ್‌ ಕಾರ್ಡ್‌ನಲ್ಲಿ 5% ಕ್ಯಾಶ್‌ಬ್ಯಾಕ್, ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್‌ ಲೇಟರ್‌ ಪೇ ಮೂಲಕ ಪಾವತಿ ಮಾಡಿದ್ರೆ 20,000 ರೂ. ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಡೆಬಿಟ್ ಕಾರ್ಡ್ ಇಎಮ್ಐ 651 ರೂ.ಗಳಿಂದ ಆರಂಭ ಆಗಲಿದೆ. ಈ ಫೋನ್‌ನ ಫೀಚರ್ಸ್‌ ಕಡೆ ಕಣ್ಣಾಯಿಸೋಣ ಬನ್ನಿ.

ರೆಡ್ಮಿ 13C 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ರಿಯಾಯಿತಿ! 50MP ಕ್ಯಾಮೆರಾ

ರೆಡ್ಮಿ 13C 5G ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.74 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್‌ ರೇಟ್‌ ಹಾಗೂ 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ 83.7% ಸ್ಕ್ರೀನ್-ಟು-ಬಾಡಿ ಅನುಪಾತ, 260 ppi ಸಾಂದ್ರತೆ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ರಕ್ಷಣೆ ಪಡೆದಿದೆ.

ರೆಡ್ಮಿ 13C 5G ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಮಾಹಿತಿ: ಈ ಫೋನ್ ಆಂಡ್ರಾಯ್ಡ್ 13, ಎಂಐಯುಐ 14 ಓಎಸ್‌ನಲ್ಲಿ ರನ್ ಆಗಲಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 6100+ (6 nm) CPU ಆಕ್ಟಾ-ಕೋರ್ (2x2.2 GHz ಕಾರ್ಟೆಕ್ಸ್-A76 & 6x2.0 GHz ಕಾರ್ಟೆಕ್ಸ್-A55) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಅಲ್ಲದೆ ಮಾಲಿ-G57 MC2 ಜಿಪಿಯು ಬಲ ಪಡೆದಿದ್ದು, 128GB + 4GB RAM ಸ್ಟೋರೇಜ್‌ ಬೆಂಬಲ ಪಡೆದಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಸೌಲಭ್ಯ ಸಹ ಇದೆ.

ರೆಡ್ಮಿ 13C 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಇನ್ನು ಈ ಫೋನ್ 50 ಮೆಗಾಪಿಕ್ಸೆಲ್‌, f/1.8, 28mm (ಅಗಲ), PDAF ಸೆನ್ಸರ್‌ ಹೊಂದಿದ್ದು, ಇದರ ಜೊತೆಗೆ 0.08 ಮೆಗಾಪಿಕ್ಸೆಲ್‌ ಆಕ್ಸಿಲಿಯರಿ ಲೆನ್ಸ್ ಅನ್ನು ಕಾಣಬಹುದಾಗಿದೆ. ಈ ಸೆನ್ಸರ್‌ ಎಲ್ಇಡಿ ಫ್ಲ್ಯಾಶ್, ಹೆಚ್‌ಡಿಆರ್‌ ಫೀಚರ್ಸ್‌ ಅನ್ನು ಪಡೆದಿವೆ. 5 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದ್ದು, ಇದೂ ಸಹ ವಿವಿಧ ಫೀಚರ್ಸ್‌ ಅನ್ನು ಹೊಂದಿದೆ.

ರೆಡ್ಮಿ 13C 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ರಿಯಾಯಿತಿ! 50MP ಕ್ಯಾಮೆರಾ

ರೆಡ್ಮಿ 13C 5G ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 18W ವೈರ್ಡ್ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಇದರ ಜೊತೆಗೆ 3.5 ಎಂಎಂ ಜ್ಯಾಕ್, ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.3, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, ಬಿಡಿಎಸ್ ಸ್ಥಾನೀಕರಣ, ಎಫ್‌ಎಮ್‌ ರೇಡಿಯೋ, ಯುಎಸ್‌ಬಿ ಟೈಪ್-ಸಿ 2.0, ಸೈಡ್-ಮೌಂಟೆಡ್ ಸೆನ್ಸರ್‌,ಅಕ್ಸೆಲೆರೊಮೀಟರ್, ದಿಕ್ಸೂಚಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

Best Mobiles in India

English summary
Redmi 13C 5G smartphone can now be bought with a huge offer price. The phone is powered by a MediaTek Dimension 6100+ processor with 128 GB internal storage option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+