ಶುರುವಾಗಿದೆ 'ರೆಡ್ಮಿ 13C 4G' ಫಸ್ಟ್ ಸೇಲ್!..ಅತೀ ಕಡಿಮೆ ಬೆಲೆಗೆ ಖರೀದಿಸಬಹುದು!
ಬಜೆಟ್ ಹಾಗೂ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್ ವಿಭಾಗದಲ್ಲಿ ಸಖತ್ ಸದ್ದು ಮಾಡಿರುವ ರೆಡ್ಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ರೆಡ್ಮಿ 13C 4G ಮೊಬೈಲ್ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರನ್ನು ಸೆಳೆದಿದೆ. ಈ ನೂತನ ಸ್ಮಾರ್ಟ್‌ಫೋನ್ ಇಂದು (ಡಿಸೆಂಬರ್ 12 ರಂದು) ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ಪ್ರಥಮ ಮಾರಾಟ ಪ್ರಾರಂಭ ಮಾಡಿದೆ.
ಹೌದು, ರೆಡ್ಮಿ 13C 4G ಫೋನ್ ಇಂದು ಮೊದಲ ಸೇಲ್ ಅನ್ನು ಅಮೆಜಾನ್ ಮೂಲಕ ಪ್ರಾರಂಭ ಮಾಡಿದ್ದು, ಗ್ರಾಹಕರಿಗೆ ಆಕರ್ಷಕ ಆಫರ್ ಕೂಡಾ ಸಿಗಲಿದೆ. ಈ ಫೋನ್ 4GB + 128GB, 6GB + 128GB ಮತ್ತು 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಗ್ರಾಹಕರು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಥವಾ ಇಎಮ್‌ಐ ವಹಿವಾಟುಗಳನ್ನು ಬಳಿಸಿ ಫೋನ್ ಖರೀದಿಸಿದರೆ, 1,000ರೂ. ಗಳ ರಿಯಾಯಿತಿಯನ್ನು ಪಡೆಯಬಹುದು.

ಅಂದಹಾಗೆ ರೆಡ್ಮಿ 13C 4G ಫೋನ್ 4GB + 128GB ವೇರಿಯಂಟ್ ಬೆಲೆಯು 7,999ರೂ. ಆಗಿದ್ದು, 6GB + 128GB ಸ್ಟೋರೇಜ್ ವೇರಿಯಂಟ್ ದರವು 8,999ರೂ. ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆಯು 10,499ರೂ. ಆಗಿದೆ. ಇನ್ನು ಈ ಫೋನ್ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ 13C 4G ಫೋನಿನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 13C 4G - ಫೀಚರ್ಸ್ ಹೀಗಿವೆ
ರೆಡ್ಮಿ 13C ಮೊಬೈಲ್ 6.74 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1,600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದುಕೊಂಡಿದೆ.
ಇದಲ್ಲದೆ ಈ ಮೊಬೈಲ್ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಒಳಗೊಂಡಿದೆ. ಇದರ ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಬೆಂಬಲಿತವಾಗಿದೆ ಮತ್ತು 18W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಬೆಲೆ ಎಷ್ಟು ಹಾಗೂ ಲಭ್ಯತೆ
ರೆಡ್ಮಿ 13C 4G ಫೋನ್ 4GB + 128GB ವೇರಿಯಂಟ್ ಬೆಲೆಯು 7,999ರೂ. ಆಗಿದ್ದು, 6GB + 128GB ಸ್ಟೋರೇಜ್ ವೇರಿಯಂಟ್ ದರವು 8,999ರೂ. ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆಯು 10,499ರೂ. ಆಗಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಸ್ಟಾರ್ಟ್ರೈಲ್ ಸಿಲ್ವರ್, ಸ್ಟಾರ್ಟ್ರೈಲ್ ಗ್ರೀನ್ ಮತ್ತು ಸ್ಟಾರ್ಲೈಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಅಂದಹಾಗೆ ಈ ಫೋನ್ ಖರೀದಿಸುವ ಆಸಕ್ತ ಗ್ರಾಹಕರು ಸಂಸ್ಥೆಯ ಅಧಿಕೃತ ಮಿ.ಕಾಮ್ ವೆಬ್‌ಸೈಟ್ ಹಾಗೂ ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಬಹುದು.


Click it and Unblock the Notifications








