Home
ಸುದ್ದಿಜಾಲ

ರೆಡ್ಮಿಯ ಈ ಅಗ್ಗದ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!..ಬೆಲೆ ತಿಳಿದ್ರೆ, ವಾವ್ ಅಂತೀರಾ!

ಜನಪ್ರಿಯ ಶಿಯೋಮಿ ಮೊಬೈಲ್‌ ಸಂಸ್ಥೆಯು ಅಗ್ಗದ ಹಾಗೂ ಹೈ ಎಂಡ್‌ ಮಾದರಿಯ ಹಲವು ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಅವುಗಳಲ್ಲಿ ರೆಡ್ಮಿ 13C ಫೋನ್‌ ಕೂಡಾ ಒಂದಾಗಿದ್ದು, ಇದೀಗ ಈ ಫೋನ್‌ ಬೆಲೆಯಲ್ಲಿ ಸಕತ್ ಇಳಿಕೆ ಆಗಿದೆ. ಈ ಫೋನ್‌ ಸ್ಟಾರ್ಡಸ್ಟ್ ಬ್ಲಾಕ್, ಸ್ಟಾರ್ಫ್ರಾಸ್ಟ್ ವೈಟ್ ಮತ್ತು ಸ್ಟಾರ್ಶೈನ್ ಗ್ರೀನ್ ಕಲರ್‌ ಆಯ್ಕೆಯಲ್ಲಿ ಲಭ್ಯ.

ಹೌದು, ಶಿಯೋಮಿ ಸಂಸ್ಥೆಯ ರೆಡ್ಮಿ 13C ಫೋನ್‌ ಬೆಲೆಯಲ್ಲಿ 1000ರೂ. ಇಳಿಕೆ ಆಗಿದೆ. ಅಂದಹಾಗೆ ಈ ಫೋನ್‌ 4GB + 128 GB, 6GB + 128 GB ಮತ್ತು 8GB + 128 GB ವೇರಿಯಂಟ್‌ ಆಯ್ಕೆ ಪಡೆದಿದ್ದು, 4GB + 128GB ಸ್ಟೋರೇಜ್‌ ವೇರಿಯಂಟ್‌ ದರದಲ್ಲಿ ಇದೀಗ ಇಳಿಕೆ ಆಗಿದೆ. ಬೆಲೆ ಇಳಿಕೆಯಿಂದಾಗಿ ಬೇಸ್‌ ವೇರಿಯಂಟ್‌ ಈಗ 7,999ರೂ. ಗಳಿಗೆ ಲಭ್ಯ.

ರೆಡ್ಮಿಯ ಈ ಅಗ್ಗದ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!.ಬೆಲೆ ತಿಳಿದ್ರೆ, ವಾವ್ ಅಂತೀರಾ

ಇನ್ನು ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೌಲಭ್ಯದಲ್ಲಿ ಇದ್ದು, ಇದು ಮೀಡಿಯಾ ಟೆಕ್‌ ಹಿಲಿಯೋ G85 ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ಮಾಡಲಿದೆ. ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೇ ರೆಡ್ಮಿ 13C ಫೋನ್‌ ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 13C ಫೋನಿನ ಫೀಚರ್ಸ್‌

ರೆಡ್ಮಿ ನೋಟ್‌ 13 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 1080 × 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ.

ರೆಡ್ಮಿಯ ಈ ಅಗ್ಗದ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!.ಬೆಲೆ ತಿಳಿದ್ರೆ, ವಾವ್ ಅಂತೀರಾ

ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ G85 SoC ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಸಪೋರ್ಟ್‌ ನೊಂದಿಗೆ ರನ್‌ ಆಗಲಿದೆ. ಹಾಗೆಯೇ 4GB + 128 GB, 6GB + 128 GB ಮತ್ತು 8GB + 128 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಹಾಗೆಯೇ ರೆಡ್ಮಿ ನೋಟ್‌ 13 ಸ್ಮಾರ್ಟ್‌ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇನ್ನು ರೆಡ್ಮಿ ನೋಟ್‌ 13 ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುವುದು. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಸಪೋರ್ಟ್‌ ಮಾಡಲಿದೆ.

Best Mobiles in India

English summary
Redmi 13C receives huge price cut in India. offer price, discounts, and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+