ಮಾರುಕಟ್ಟೆಯಲ್ಲಿ ಅಬ್ಬರಿಸುತ್ತಿರುವ ರೆಡ್ಮಿ 13C ಫೋನ್ ಮೇಲೆ ಭಾರಿ ಆಫರ್! ಕೂಡಲೇ ಖರೀದಿಸಿ!
ರೆಡ್ಮಿ 13C ಸ್ಮಾರ್ಟ್‌ಫೋನ್ ಇದೇ ತಿಂಗಳ ಆರಂಭದಲ್ಲಿ ಭಾರತಕ್ಕೆ ಎಂಟ್ರಿ ನೀಡಿತ್ತು. ಅಲ್ಲದೆ ಸೇಲ್ ಆರಂಭವಾದ ಮೊದಲ ದಿನದಿಂದಲೂ ಟೆಕ್ ವಲಯದಲ್ಲಿ ದಾಖಲೆಯನ್ನು ಬರೆಯುತ್ತಿದೆ. ಇದೀಗ ಇದೇ ಸ್ಮಾರ್ಟ್‌ಫೋನ್‌ನ 4G ಆವೃತ್ತಿಯು ಅಮೆಜಾನ್‌ನಲ್ಲಿ ಭಾರಿ ರಿಯಾಯಿತಿಯನ್ನು ಪಡೆದುಕೊಂಡಿದೆ. ಈ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರಿಗೆ ಸಿಹಿಸುದ್ದಿಯನ್ನು ನೀಡಿದೆ.
ಹೌದು, ಅಮೆಜಾನ್ ತಾಣದಲ್ಲಿ ರೆಡ್ಮಿ 13C ಸ್ಮಾರ್ಟ್‌ಫೋನ್ ಮೇಲೆ ರಿಯಾಯಿತಿಯನ್ನು ಘೋಷಿಸಲಾಗಿದೆ. ಈ ಮೂಲಕ ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಡಿಸ್ಕೌಂಟ್‌ನಲ್ಲಿ ಲಭ್ಯವಾಗುತ್ತಿರುವುದು ಗ್ರಾಹಕರನ್ನು ಅಚ್ಚರಿಗೆ ದೂಡಿದೆ. ಇನ್ನು ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಮೇಲಿನ ಡಿಸ್ಕೌಂಟ್ ಎಷ್ಟಿದೆ? ಇದರಿಂದ ಫೋನ್‌ನ ಬೆಲೆಯಲ್ಲಿ ಏನೆಲ್ಲಾ ಬದಲಾವಣೆ ಆಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ 13C ಸ್ಮಾರ್ಟ್‌ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್
ರೆಡ್ಮಿ 13C ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 11,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಫೋನ್ ಮೇಲೆ ಅಮೆಜಾನ್ ಬರೋಬ್ಬರಿ 25% ಡಿಸ್ಕೌಂಟ್ ನೀಡುತ್ತಿರುವುದರಿಂದ ಇದನ್ನು 8,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಮೇಲೆ ವಿವಿಧ ಬ್ಯಾಂಕ್ ಕಾರ್ಡ್‌ಗಳಿಂದ ಕೂಡ ಆಫರ್‌ಗಳು ದೊರೆಯುತ್ತಿದ್ದು, ಫೋನ್ ಬೆಲೆ ಇನ್ನಷ್ಟು ಪರಿಣಾಮಕಾರಿಗೆ ಕಡಿಮೆ ಆಗಲಿದೆ.
ರೆಡ್ಮಿ 13C ಫೀಚರ್ಸ್ ಹೇಗಿದೆ?
ರೆಡ್ಮಿ 13C ಸ್ಮಾರ್ಟ್‌ಫೋನ್ 6.74 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದೆ. ಜೊತೆಗೆ ಡಿಸ್‌ಪ್ಲೇ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.

ರೆಡ್ಮಿ 13C ಪ್ರೊಸೆಸರ್ ಯಾವುದು?
ಇದು ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಸದ್ಯ ಫೋನ್‌ನ 4GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ ಮಾತ್ರ ರಿಯಾಯಿತಿ ಅನ್ವಯವಾಗಲಿದೆ.
ರೆಡ್ಮಿ 13C ಕ್ಯಾಮೆರಾ ಸೆಟ್‌ಅಪ್ ಏನು?
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ನೊಂದಿಗೆ ಬರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ 13C ಬ್ಯಾಟರಿ ಮತ್ತು ಇತರೆ ಸೌಲಭ್ಯ
ರೆಡ್ಮಿ 13C 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ ಮತ್ತು 18W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್ ಸಪೋರ್ಟ್ ಮಾಡುತ್ತದೆ.
ಕಲರ್ ಮತ್ತು ಲಭ್ಯತೆ
ರೆಡ್ಮಿ 13C 4G ಸ್ಮಾರ್ಟ್‌ಫೋನ್ ಅನ್ನು ಸ್ಟಾರ್ಡಸ್ಟ್ ಕಪ್ಪು ಮತ್ತು ಸ್ಟಾರ್ ಶೈನ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.
ಈ ಸ್ಮಾರ್ಟ್‌ಫೋನ್ 5G ಮಾದರಿಯಲ್ಲಿಯು ಕೂಡ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಕೂಡ ಬಹುತೇಕ ಒಂದೇ ಮಾದರಿಯ ಫೀಚರ್ಸ್‌ಗಳನ್ನು ಹೊಂದಿದ್ದು, ಪ್ರೊಸೆಸರ್ ಮಾತ್ರ ಭಿನ್ನವಾಗಿದೆ.


Click it and Unblock the Notifications








