Redmi: ರೆಡ್ಮಿಯ ಈ ಫೋನ್‌ಗೆ ಇದೆ 31% ರಿಯಾಯಿತಿ! 256 GB ಸ್ಟೋರೇಜ್... 50MP ಕ್ಯಾಮೆರಾ
ರೆಡ್ಮಿ ಸ್ಮಾರ್ಟ್‌ಫೋನ್‌ಗಳು (Redmi smartphones) ಭಾರತದಲ್ಲಿ ಬಲು ಬೇಡಿಕೆ ಇರುವ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ನಲ್ಲಿವೆ. ಅದರಲ್ಲೂ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷವಾದ ಬೇಡಿಕೆ ಇದ್ದು, ಈ ಫೋನ್‌ಗಳು ಬಳಕೆದಾರರಿಗೆ ಭಿನ್ನ ಅನುಭವ ನೀಡುತ್ತವೆ. ಈ ನಡುವೆ ರೆಡ್ಮಿ 13C ಸ್ಮಾರ್ಟ್‌ಫೋನ್ (Redmi 13C smartphone) ಭಾರೀ ಆಫರ್ ಬೆಲೆಗೆ ಲಭ್ಯವಾಗುತ್ತಿದೆ.
ಹೌದು, ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ ರೆಡ್ಮಿ 13C ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್ ಘೋಷಣೆ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ 256 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, 5000 mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ಗೆ ಇರುವ ಆಫರ್ ಬೆಲೆ ವಿವರ ಹಾಗೂ ಇದರ ಪ್ರಮುಖ ಫೀಚರ್ಸ್ ಏನು ಎಂದು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ರೆಡ್ಮಿ 13C: ಈ ಸ್ಮಾರ್ಟ್‌ಫೋನ್ 15,999ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 31% ರಿಯಾಯಿತಿ ಜೊತೆಗೆ 10,999 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಈ ಆಫರ್ ಅನ್ನು ಪ್ರಮುಖ ಇ-ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್‌ನಲ್ಲಿ ನೀಡಲಾಗಿದೆ. ಇದಲ್ಲದೆ ಬ್ಯಾಂಕ್ ಆಫರ್ ಸಹ ಇದ್ದು ಇನ್ನೂ ಕಡಿಮೆ ದರದಲ್ಲಿ ಈ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬಹುದು.
ಈ ಫೋನ್ ಖರೀದಿ ವೇಳೆ ನೀವು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಬಳಕೆ ಮಾಡಿಕೊಂಡರೆ 5% ಕ್ಯಾಶ್‌ಬ್ಯಾಕ್ ಸಿಗಲಿದೆ. ಹಾಗೆಯೇ ಫ್ಲಿಪ್‌ಕಾರ್ಟ್ ಯುಪಿಐ ಮೂಲಕ ಪಾವತಿ ಮಾಡಿದರೆ ತ್ವರಿತ ರಿಯಾಯಿತಿ ಸಿಗಲಿದ್ದು, ಇದರ ಜೊತೆಗೆ ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್ ಪೇ ಲೇಟರ್ ಮೂಲಕ ಖರೀದಿ ಮಾಡಿದ್ರೆ 20,000 ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ರೆ, ಈ ಬೆಲೆಗೆ ಈ ಫೋನ್ ಯೋಗ್ಯವೇ ಎಂದು ಇದರ ಪೀಚರ್ಸ್ ಮೂಲಕ ತಿಳಿಯೋಣ ಬನ್ನಿ.

ರೆಡ್ಮಿ 13C ಸ್ಮಾರ್ಟ್‌ಫೋನ್ ಡಿಸ್ಪ್ಲೇ ಮಾಹಿತಿ: ಈ ಫೋನ್ 6.74 ಇಂಚಿನ HD+ಡಿಸ್‌ಪ್ಲೇ ಹೊಂದಿದ್ದು, 1650 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಇದರ ಜೊತೆಗೆ 90Hz ರಿಫ್ರೆಶ್ ರೇಟ್ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ. ಈ ಮೂಲಕ ಗೇಮಿಂಗ್‌ನಲ್ಲಿ ಹಾಗೂ ವಿಡಿಯೋ ವೀಕ್ಷಣೆಯನ್ನು ಉತ್ತಮ ಅನುಭವ ಪಡೆಯಬಹುದು.
ರೆಡ್ಮಿ 13C ಸ್ಮಾರ್ಟ್‌ಫೋನ್ ಪ್ರೊಸೆಸರ್ ಮಾಹಿತಿ: ಇನ್ನು ಈ ಫೋನ್ ಆಂಡ್ರಾಯ್ಡ್ 13 ಓಎಸ್ ಅನ್ನು ರನ್ ಮಾಡಲಿದ್ದು, ಮೀಡಿಯಾಟೆಕ್ ಹಿಲಿಯೊ G85 ಪ್ರೊಸೆಸರ್ ಬಲ ಪಡೆದುಕೊಂಡಿದೆ. ಇದರ ಜೊತೆಗೆ 256 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, 8 GB RAM ಮೂಲಕ ಉತ್ತಮವಾಗಿ ಕೆಲಸ ಮಾಡಲಿದೆ. ಇದರ ಜೊತೆಗೆ ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಂಡು ಸ್ಟೋರೇಜ್ ಅನ್ನು ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ.

ರೆಡ್ಮಿ 13C ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿದ್ದು, ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಈ ಕ್ಯಾಮೆರಾಗಳು ಫಿಲ್ಮ್ ಫಿಲ್ಟರ್‌ಗಳು, ಟೈಮ್‌ಲ್ಯಾಪ್ಸ್, ನೈಟ್ ಮೋಡ್, ಟಿಲ್ಟ್ ಶಟರ್ ಶಿಫ್ಟ್, ಟೈಮ್ಡ್ ಬರ್ಸ್ಟ್ ಫೀಚರ್ಸ್ ಆಯ್ಕೆ ಪಡೆದುಕೊಂಡಿದೆ.
ರೆಡ್ಮಿ 13C ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 4G VOLTE, 4G, 3G, 2G ಬೆಂಬಲಿತ ನೆಟ್‌ವರ್ಕ್‌ಗಳು, ಬ್ಲೂಟೂತ್ ಆವೃತ್ತಿ v5.3, 2.4 GHz ಮತ್ತು 5 GHz ಡ್ಯುಯಲ್ ಬ್ಯಾಂಡ್ ವೈ-ಫೈ, ಮಿನಿ ಹೆಚ್‌ಡಿಎಮ್‌ಐ ಪೋರ್ಟ್, ಆಡಿಯೋ ಜ್ಯಾಕ್, ಅಕ್ಸೆಲೆರೊಮೀಟರ್, ಸೈಡ್ ಫಿಂಗರ್‌ಪ್ರಿಂಟ್ ಸೆನ್ಸರ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್ (ಅಲ್ಟ್ರಾಸಾನಿಕ್) ಸೇರಿದಂತೆ ಅಗತ್ಯ ಫೀಚರ್ಸ್ ಆಯ್ಕೆ ಪಡೆದಿದೆ.


Click it and Unblock the Notifications








