Home
ಸುದ್ದಿಜಾಲ

ಭಾರತದಲ್ಲಿ ರೆಡ್ಮಿ 13C ಎಂಟ್ರಿಗೆ ಮುಹೂರ್ತ ಫಿಕ್ಸ್‌! ಪ್ರತಿಸ್ಪರ್ಧಿಗಳಿಗೆ ಶುರುವಾಯ್ತು ಆತಂಕ!

ಶಿಯೋಮಿ ಕಂಪೆನಿ ತನ್ನ ರೆಡ್ಮಿ ಬ್ರ್ಯಾಂಡ್‌ನಲ್ಲಿ ಹೊಸ ರೆಡ್ಮಿ 13C ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಸಾಕಷ್ಟು ಹೈಪ್‌ ಕ್ರಿಯೆಟ್‌ ಮಾಡಿದೆ. ಇದೀಗ ಇದರ ಬಿಡುಗಡೆ ದಿನಾಂಕ ಅಧಿಕೃತವಾಗಿದ್ದು ಭಾರತದಲ್ಲಿ ಡಿಸೆಂಬರ್‌ 6 ರಂದು ಲಾಂಚ್‌ ಆಗಲಿದೆ ಎಂದು ವರದಿಯಾಗಿದೆ.

ಹೌದು, ರೆಡ್ಮಿ 13C ಸ್ಮಾರ್ಟ್‌ಫೋನ್‌ ಡಿಸೆಂಬರ್‌ 6 ರಂದು ಬಿಡುಗಡೆ ಆಗಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಈಗಾಗಲೇ ಈ ತಿಂಗಳ ಆರಂಭದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸ್ಟಾರ್‌ಡಸ್ಟ್ ಬ್ಲಾಕ್ ಮತ್ತು ಸ್ಟಾರ್ ಶೈನ್ ಗ್ರೀನ್ ಬಣ್ಣಗಳಲ್ಲಿ ಬರಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ನಿರೀಕ್ಷೆ ಇಡಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ರೆಡ್ಮಿ 13C ಎಂಟ್ರಿಗೆ ಮುಹೂರ್ತ ಫಿಕ್ಸ್‌! ಪ್ರತಿಸ್ಪರ್ಧಿಗಳಿಗೆ ಆತಂಕ!

ರೆಡ್ಮಿ 13C ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ವಿನ್ಯಾಸ ಹೇಗಿರಲಿದೆ?
ರೆಡ್ಮಿ 13C ಸ್ಮಾರ್ಟ್‌ಫೋನ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 720 x 1650 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿರಲಿದೆ. ಇದು 269 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದ್ದು, 500 ನೀಟ್ಸ್‌ ಬ್ರೈಟ್‌ನೆಸ್‌ ನೀಡಲಿದೆ. ಇದಲ್ಲದೆ ಡಿಸ್‌ಪ್ಲೇ 90 Hz ರಿಫ್ರೆಶ್ ರೇಟ್‌ ಹಾಗೂ 120 Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲಿಸಲಿದೆ ಎಂದು ವರದಿಯಾಗಿದೆ.

ರೆಡ್ಮಿ 13C ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಕಾರ್ಯವೈಖರಿ
ರೆಡ್ಮಿ 13C ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ MIUI 14.0.1 ಅನ್ನು ಬೆಂಬಲಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿರಲಿದೆ. ಸ್ಮಾರ್ಟ್‌ಫೋನ್‌ನಲ್ಲಿ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡುವ ನಿರೀಕ್ಷೆ ಇಡಲಾಗಿದೆ.

ಭಾರತದಲ್ಲಿ ರೆಡ್ಮಿ 13C ಎಂಟ್ರಿಗೆ ಮುಹೂರ್ತ ಫಿಕ್ಸ್‌! ಪ್ರತಿಸ್ಪರ್ಧಿಗಳಿಗೆ ಆತಂಕ!

ರೆಡ್ಮಿ 13C ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌
ರೆಡ್ಮಿ 13C ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗುವುದು ಎಂದು ಕಂಪೆನಿ ಹೇಳಿಕೊಂಡಿದೆ.

ರೆಡ್ಮಿ 13C ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌ ಏನಿರಲಿದೆ?
ರೆಡ್ಮಿ 13C ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ನಲ್ಲಿ ಬರಲಿದೆ. ಇದು 18W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲ ನೀಡಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.3, ವೈಫೈ, ಹಾಟ್‌ಸ್ಪಾಟ್‌, ಹೆಡ್‌ಫೋನ್‌ ಜ್ಯಾಕ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಅನ್ನು ಬೆಂಬಲಿಸಬಹುದು ಎನ್ನಲಾಗಿದೆ.

ಭಾರತದಲ್ಲಿ ರೆಡ್ಮಿ 13C ಎಂಟ್ರಿಗೆ ಮುಹೂರ್ತ ಫಿಕ್ಸ್‌! ಪ್ರತಿಸ್ಪರ್ಧಿಗಳಿಗೆ ಆತಂಕ!

ಇದಲ್ಲದೆ ರೆಡ್ಮಿ ಬ್ರ್ಯಾಂಡ್‌ ಇತ್ತೀಚಿಗೆ ರೆಡ್ಮಿ ನೋಟ್‌ 13R ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್ ಮತ್ತು 1,000 ನೀಟ್ಸ್‌ ವರೆಗಿನ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಮಿಡಿಯಾಟೆಕ್‌ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Redmi 13C Smartphone to launch in India on December 6: Expected Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+