Redmi: ಭಾರತದಲ್ಲಿ ರೆಡ್ಮಿ 13C ಅಬ್ಬರ ಶುರು! ಪ್ರತಿಸ್ಫರ್ಧಿಗಳಿಗೆ ಶುರುವಾಯ್ತು ನಡುಕ!
ಭಾರತದ ಮಾರುಕಟ್ಟೆಯಲ್ಲಿ ರೆಡ್ಮಿ 13C ಸ್ಮಾರ್ಟ್‌ಫೋನ್ ಎಂಟ್ರಿ ನೀಡಿದೆ. ಇದು 5G ಹಾಗೂ 4G ಎರಡು ಮಾದರಿಗಳಲ್ಲಿಯೂ ಕೂಡ ಬಿಡುಗಡೆ ಆಗಿದೆ. ಇದರಲ್ಲಿ ರೆಡ್ಮಿ ರೆಡ್ಮಿ 13C 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಆದರೆ ರೆಡ್ಮಿ 13C 4G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ರೆಡ್ಮಿ 13C ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ ಮತ್ತು 18W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. 5G ಹಾಗೂ 4G ಒಂದೇ ತೆರನಾದ ಡಿಸ್‌ಪ್ಲೇ ರಚನೆ ಹೊಂದಿದ್ದರೂ ಕೂಡ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ವಿಭಿನ್ನತೆ ಹೊಂದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ 13C 5G ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿದೆ?
ರೆಡ್ಮಿ 13C ಸ್ಮಾರ್ಟ್‌ಫೋನ್ 6.74 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ರನ್ ಆಗಲಿದೆ. ಇದು 8GB RAM ಮತ್ತು 256GB ಇಂಟರ್ ಸ್ಟೋರೇಜ್ ಹೊಂದಿದ್ದು, ಮೆಮೊರಿ ಕಾರ್ಡ್ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಿದೆ.
ರೆಡ್ಮಿ 13C 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2MP ಪೋರ್ಟ್ರೇಟ್ ಮೋಡ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇದು ಡಿಸ್‌ಪ್ಲೇಯ ಮೇಲ್ಭಾಗದಲ್ಲಿ U- ಆಕಾರದ (ಡಾಟ್ ಡ್ರಾಪ್) ನಾಚ್‌ನಲ್ಲಿ ಇನ್‌ಬಿಲ್ಟ್ ಆಗಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ. ಕನೆಕ್ಟಿವಿಟಿ ಆಯ್ಕೆಯಲ್ಲಿ ವೈ-ಫೈ ಎಸಿ, ಬ್ಲೂಟೂತ್ 5.3, ಸಾಮಾನ್ಯ ಜಾಗತಿಕ ಸ್ಥಾನೀಕರಣ ವ್ಯವಸ್ಥೆಗಳಿಗೆ ಬೆಂಬಲ, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಹೊಂದಿದೆ.

ರೆಡ್ಮಿ 13C ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿದೆ?
ರೆಡ್ಮಿ 13C ಸ್ಮಾರ್ಟ್‌ಫೋನ್ 6.74 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಈ ಸ್ಮಾರ್ಟ್‌ಫೋನ್ 5G ಮಾದರಿಗಿಂತ ಭಿನ್ನವಾಗಿ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ನೊಂದಿಗೆ ಬರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ ಮತ್ತು 18W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ 13C ಬೆಲೆ ಮತ್ತು ಲಭ್ಯತೆ
ರೆಡ್ಮಿ 13C 5G ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM + 128GB ರೂಪಾಂತರದ ಆಯ್ಕೆಗೆ 9,999ರೂ. ಬೆಲೆಯನ್ನು ಹೊಂದಿದೆ. ಇದರ 6GB RAM + 128GB ರೂಪಾಂತರದ ಬೆಲೆ 11,499ರೂ ಆಗಿದೆ. ಇನ್ನು 8GB RAM + 256GB ರೂಪಾಂತರದ ಆಯ್ಕೆಯು 13,499ರೂ ಬೆಲೆಯನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಸ್ಟಾರ್ಟ್ರೈಲ್ ಸಿಲ್ವರ್, ಸ್ಟಾರ್ಟ್ರೈಲ್ ಗ್ರೀನ್ ಮತ್ತು ಸ್ಟಾರ್ಲೈಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ರೆಡ್ಮಿ 13C 4G ಮಾದರಿಯು 4GB RAM + 128GB ರೂಪಾಂತರದ ಆಯ್ಕೆಗೆ 7,999ರೂ ಬೆಲೆ ಹೊಂದಿದೆ. ಇದರ 6GB RAM + 128GB ರೂಪಾಂತರದ ಆಯ್ಕೆಯು 8,999ರೂ ಬೆಲೆಯನ್ನು ಹೊಂದಿದೆ. ಇನ್ನು 8GB RAM + 256GB ರೂಪಾಂತರದ ಆಯ್ಕೆಯು 10,499ರೂ ಬೆಲೆಗೆ ನಿಗದಿಪಡಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಅನ್ನು ಸ್ಟಾರ್ಡಸ್ಟ್ ಕಪ್ಪು ಮತ್ತು ಸ್ಟಾರ್ ಶೈನ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.
ಇನ್ನು ರೆಡ್ಮಿ 13C 4G ರೂಪಾಂತರವು ಡಿಸೆಂಬರ್ 12 ರಿಂದ ಭಾರತದಲ್ಲಿ ಮಾರಾಟವಾಗಲಿದೆ. ಆದರೆ ರೆಡ್ಮಿ 13C 5G ಫೋನ್ ಡಿಸೆಂಬರ್ 16 ರಿಂದ ಅಮೆಜಾನ್, ಮಿ ಆನ್‌ಲೈನ್ ಸ್ಟೋರ್ ಮತ್ತು ಇತರ ಆನ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಸೇಲ್ ಆಗಲಿದೆ ಎಂದು ರೆಡ್ಮಿ ಕಂಪೆನಿ ಸ್ಪಷ್ಟಪಡಿಸಿದೆ.


Click it and Unblock the Notifications








