ಸೈಲೆಂಟ್ ಆಗಿ ಎಂಟ್ರಿ ಕೊಟ್ಟ ರೆಡ್ಮಿ ಕಂಪೆನಿಯ ಹೊಸ ಫೋನ್!..128GB ಸ್ಟೋರೇಜ್ ಆಯ್ಕೆ!
ರೆಡ್ಮಿ ಕಂಪೆನಿ ಸದ್ದಿಲ್ಲದೆ ಹೊಸ ರೆಡ್ಮಿ 13R 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6100 ಪ್ಲಸ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ರೆಡ್ಮಿ 13R 5G ಸ್ಮಾರ್ಟ್‌ಫೋನ್ ಸೈಲೆಂಟ್ ಆಗಿ ಎಂಟ್ರಿ ನೀಡಿದೆ. ಸ್ಟೈಲಿಶ್ ಲುಕ್‌ನೊಂದಿಗೆ ಅತ್ಯಾಕರ್ಷಕವಾದ ರಿಯರ್ ಪ್ಯಾನಲ್ ಡಿಸೈನ್‌ನೊಂದಿಗೆ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ LED ಫ್ಲ್ಯಾಷ್ ಅನ್ನು ಕೂಡ ಹೊಂದಿದೆ. ಹಾಗಾದ್ರೆ ಈ ಫೋನ್ ಯಾವೆಲ್ಲಾ ಫೀಚರ್ಸ್ ಪಡೆದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ 13R 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ 13R 5G ಸ್ಮಾರ್ಟ್‌ಫೋನ್ 6.74 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್‌ಡ್ರಾಪ್-ನಾಚ್ ಸ್ಕ್ರೀನ್‌ನೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 450 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ನೊಂದಿಗೆ ಬರಲಿದೆ.
ರೆಡ್ಮಿ 13R 5G ಪ್ರೊಸೆಸರ್ ಯಾವುದು?
ರೆಡ್ಮಿ 13R 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6100 ಪ್ಲಸ್ SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ
4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ರೆಡ್ಮಿ 13R 5G ಕ್ಯಾಮೆರಾ ಸೆಟಪ್ ಏನಿದೆ?
ರೆಡ್ಮಿ 13R 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ರಿಯರ್ ಕ್ಯಾಮೆರಾದೊಂದಿಗೆ ಎಲ್‌ಇಡಿ ಫ್ಲ್ಯಾಷ್‌ಲೈಟ್ ಅನ್ನು ಸಹ ಹೊಂದಿದೆ.
ರೆಡ್ಮಿ 13R 5G ಬ್ಯಾಟರಿ ಮತ್ತು ಇತರೆ
ರೆಡ್ಮಿ 13R 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಯುಎಸ್‌ಬಿ-ಸಿ ಪೋರ್ಟ್, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್ ಅನ್ನು ಹೊಂದಿರಲಿದೆ.

ರೆಡ್ಮಿ 13R 5G ಬೆಲೆ ಮತ್ತು ಲಭ್ಯತೆ
ರೆಡ್ಮಿ 13R 5G ಸ್ಮಾರ್ಟ್‌ಫೋನ್ 4GB+128GB ರೂಪಾಂತರಕ್ಕೆ 999 ಯುವಾನ್ (ಅಂದಾಜು 11,734ರೂ) ಬೆಲೆಯನ್ನು ಹೊಂದಿದೆ. ಇದು ಸ್ಟಾರ್ ರಾಕ್ ಬ್ಲ್ಯಾಕ್, ಫ್ಯಾಂಟಸಿ ಪರ್ಪಲ್ ಮತ್ತು ವೇವ್ ವಾಟರ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಬರಲಿದೆ.
ಇದಲ್ಲದೆ ರೆಡ್ಮಿ ಕಂಪೆನಿ ಇತ್ತೀಚಿಗೆ ರೆಡ್ಮಿ K70 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್, 3840Hz PWM ಡಿಮ್ಮಿಂಗ್, 4000nit ಪೀಕ್ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು HyperOS-ಆಧಾರಿತ ಆಂಡ್ರಾಯ್ಡ್ 14 OS ಅನ್ನು ಬಾಕ್ಸ್‌ನಲ್ಲಿ ರನ್ ಆಗಲಿದೆ. ಹಾಗೆಯೇ 24GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.


Click it and Unblock the Notifications








