ಇಂದು Redmi 14C 5G ಗ್ರ್ಯಾಂಡ್ ಲಾಂಚ್; ಕೇವಲ 10,999 ರೂ.! ಇಲ್ಲಿವೆ ಟಾಪ್ 5 ಫೀಚರ್ಸ್
ಮೊಬೈಲ್ ಪ್ರಿಯರ ಕಾಯುವಿಕೆ ಮುಗಿಯಿತು! ಅಗ್ಗದ ಬೆಲೆಯ ಹೊಸ ರೆಡ್ಮಿ ಮೊಬೈಲ್ ಇಂದು ಗ್ರಾಹಕರ ಕೈ ಸೇರಲಿದೆ. ಹೌದು, ರೆಡ್ಮಿ 14C 5G (Redmi 14C 5G) ಸ್ಮಾರ್ಟ್‌ಫೋನ್ ಇಂದು (ಜನವರಿ 6) ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಕಂಪನಿಯು ಈ ಫೋನನ್ನು 11,000 ರೂ.ಗಿಂತ ಕಡಿಮೆ ಬೆಲೆ ಪರಿಚಯಿಸಲಿದೆ. ಈಗಾಗಲೇ, ಈ ಫೋನಿನ ಡಿಸೈನ್ ಮತ್ತು ಫೀಚರ್ಸ್ ರೆಡ್ಮಿ ಪ್ರಿಯರ ಗಮನ ಸೆಳೆದಿದೆ. ಬನ್ನಿ, ಹೊಸ ರೆಡ್ಮಿ 14C 5G ಫೋನಿನ ಬೆಲೆ ಮತ್ತು ಟಾಪ್ 5 ವೈಶಿಷ್ಟ್ಯಗಳನ್ನು ತಿಳಿಯೋಣ.
ರೆಡ್ಮಿ 14C 5G ಫೋನನ್ನು ಕಂಪಿಯು 'ನಂಬರ್ 1 5G' ಎಂಟರ್‌ಟೈನರ್ ಎಂದು ಹೇಳಿದೆ. ಇದು ಈ ವರ್ಷ ಬಿಡುಗಡೆಯಾಗುತ್ತಿರುವ ಮೊದಲ ಶಿಯೋಮಿ ಸ್ಮಾರ್ಟ್‌ಫೋನ್ ಆಗಿದೆ. ಈ ಫೋನಿನ ಡಿಸ್ಪ್ಲೇ 6.99 ಇಂಚು ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಮಾಡುತ್ತದೆ. ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಕ್ಯಾಮೆರಾ ಇದೆ. ಜೊತೆಗೆ 128GB ಸ್ಟೋರೇಜ್, 5160mAh ಬ್ಯಾಟರಿ ಮತ್ತು 18W ಸ್ಪೀಡ್ ಚಾರ್ಜಿಂಗ್ ಒಳಗೊಂಡಿದೆ.ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ರೆಡ್ಮಿ 14C 5G: ಟಾಪ್ 5 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊದಲಿಗೆ ರೆಡ್ಮಿ 14C 5G ಫೋನಿನ ಡಿಸ್ಪ್ಲೇ ಬಗ್ಗೆ ತಿಳಿಯೋಣ. ಈ ಸ್ಮಾರ್ಟ್‌ಫೋನ್ 6.99 ಇಂಚಿನ ದೊಡ್ಡ ಎಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ದೊಡ್ಡ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 720 x 1640 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ನೂತನ ರೆಡ್ಮಿ 14C 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್ ಹೊಂದಿದೆ. ಇದು 2.36 GHz ಗಡಿಯಾರದ ವೇಗದ ಆಕ್ಟಾಕೋರ್ ಪ್ರೊಸೆಸರ್ ಆಗಿದೆ. ಈ ಫೋನ್ ಒಟ್ಟು ನಾಲ್ಕು RAM ಮತ್ತು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ. ಇದು 4GB, 6GB, 8GB ಮತ್ತು 12GB RAM ಹೊಂದಿದೆ. ಜೊತೆಗೆ 64GB, 128GB ಸ್ಟೋರೇಜ್ ಹೊಂದಿದೆ. ಭಾರತೀಯ ಮಾರುಕಟ್ಟೆಗಳಲ್ಲಿ ಬೇರೆ ರೂಪಾಂತರಗಳಲ್ಲಿ ಮಾರಾಟವಾಗಲಿದೆ.
ಕ್ಯಾಮೆರಾ ಸೆಟಪ್
ರೆಡ್ಮಿ 14C 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 0.8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರೆಡ್ಮಿ 14C 5G ಮೊಬೈಲ್ 5,160mAh (5,060mAh) ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು. ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಐಆರ್ ಬ್ಲಾಸ್ಟರ್ ಅನ್ನು ಹೊಂದಿದೆ. ಇದರಲ್ಲಿ 5G + 5G ಸಿಮ್ ಬೆಂಬಲ ಲಭ್ಯವಿದೆ. ಈ ಕಡಿಮೆ ದರದ ರೆಡ್ಮಿ 5G ಫೋನಿನಲ್ಲಿ ಇಂಟರ್ನೆಟ್ 2.5Gbps ವೇಗದಲ್ಲಿ ಕಾರ್ಯನಿರ್ವಹಿಸುತ್ತದೆ.
ರೆಡ್ಮಿ 14C 5G ಬೆಲೆ
ರೆಡ್ಮಿ 14C 5G ಸ್ಮಾರ್ಟ್‌ಫೋನ್ 4GB RAM + 128GB ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆಯಾಗಲಿದೆ. ಈ ಫೋನಿನ MRP ಬೆಲೆ 13,999 ರೂ. ಆಗಿದೆ. ಈ ಮೊಬೈಲ್ ಮಾರುಕಟ್ಟೆಯಲ್ಲಿ ಎಂಆರ್‌ಪಿ (MRP) ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ. ವರದಿಯ ಪ್ರಕಾರ, ರೆಡ್ಮಿ 14C 5G ಫೋನ್ 10,999 ರೂ. ಅಥವಾ 11,999 ರೂ.ಗೆ ಲಭ್ಯವಿರುತ್ತದೆ.


Click it and Unblock the Notifications








