ಸೈಲೆಂಟ್ ಆಗಿ ಎಂಟ್ರಿ ಕೊಟ್ಟ Redmi 14C ಫೋನ್; ಅಚ್ಚರಿಯ ಬೆಲೆ, ಆಕರ್ಷಕ ಡಿಸೈನ್!
ಜನಪ್ರಿಯ ರೆಡ್ಮಿ (Redmi) ಮೊಬೈಲ್ ಸಂಸ್ಥೆಯು ಮಾರುಕಟ್ಟೆಗೆ ನೂತನವಾಗಿ ರೆಡ್ಮಿ 14C (Redmi 14C) ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. ಸಂಸ್ಥೆಯ ಈ ಹಿಂದಿನ ರೆಡ್ಮಿ 13C ಫೋನಿನ ಉತ್ತರಾಧಿಕಾರಿ ಆಗಿ ಈ ಹೊಸ ಫೋನ್ ಎಂಟ್ರಿ ಕೊಟ್ಟಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಹೆಲಿಯೊ G81 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದರೊಂದಿಗೆ ಈ ಮೊಬೈಲ್ 50 ಮೆಗಾ ಪಿಕ್ಸಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ.
ಹೌದು, ರೆಡ್ಮಿ ಸಂಸ್ಥೆಯು ಹೊಸದಾಗಿ ರೆಡ್ಮಿ 14C (Redmi 14C) ಸ್ಮಾರ್ಟ್‌ಫೋನ್ ಅನ್ನು ಗ್ಲೋಬಲ್ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಫೋನ್ 4GB + 128GB, 4GB + 256GB, 6GB + 128GB ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಸಹ ಒದಗಿಸಲಾಗಿದೆ.

ಇನ್ನು ಈ ಫೋನ್ 5160mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಜೊತೆಗೆ 13 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ ಅನ್ನು ಸೇಜ್ ಗ್ರೀನ್, ಮಿಡ್‌ನೈಟ್ ಬ್ಲ್ಯಾಕ್, ಡ್ರೀಮಿ ಪರ್ಪಲ್ ಮತ್ತು ಸ್ಟಾರಿ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಸಬಹುದು. ಇನ್ನುಳಿದಂತೆ ರೆಡ್ಮಿ 14C (Redmi 14C) ಫೋನಿನ ಇತರೆ ಫೀಚರ್ಸ್ ಮುಂದೆ ನೋಡೋಣ ಬನ್ನಿರಿ.
ರೆಡ್ಮಿ 14C (Redmi 14C) ಫೀಚರ್ಸ್ ಹೀಗಿವೆ
ರೆಡ್ಮಿ 14C ಮೊಬೈಲ್ 6.88 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಅನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದೆ. ಇದರ ಜೊತೆಗೆ ಡಿಸ್‌ಪ್ಲೇ 600nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಹಾಗೂ ರೀಡಿಂಗ್ ಮೋಡ್ ಸೌಲಭ್ಯ ಅನ್ನು ಬೆಂಬಲ ಮಾಡುತ್ತದೆ.
ರೆಡ್ಮಿ 14C ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ G81 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 4GB + 128GB, 4GB + 256GB, 6GB + 128GB ಹಾಗೂ 8GB + 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಎಸ್‌ಡಿ ಮೆಮೊರಿ ಕಾರ್ಡ್ ಸಪೋರ್ಟ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಆಯ್ಕೆ ಇದೆ.
ರೆಡ್ಮಿ 14C ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ 14C ಸ್ಮಾರ್ಟ್‌ಫೋನ್ 5160mAh ಬ್ಯಾಟರಿ ಬ್ಯಾಕ್‌ಅಪ್ ಬೆಂಬಲಿತವಾಗಿದೆ ಮತ್ತು 18W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಹಾಗೆಯೇ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.
ರೆಡ್ಮಿ 14C ಸ್ಮಾರ್ಟ್‌ಫೋನ್ ಸೇಜ್ ಗ್ರೀನ್, ಮಿಡ್‌ನೈಟ್ ಬ್ಲ್ಯಾಕ್, ಡ್ರೀಮಿ ಪರ್ಪಲ್ ಮತ್ತು ಸ್ಟಾರಿ ಬ್ಲೂ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಈ ಫೋನಿನ ಬೇಸ್ ವೇರಿಯಂಟ್ ದರವು $119 (ಭಾರತದಲ್ಲಿ ಅಂದಾಜು 10,000ರೂ. ಎನ್ನಲಾಗಿದೆ). ಸದ್ಯ ವಿಯೆಟ್ನಾಂ ಮಾರುಕಟ್ಟೆಗಳಲ್ಲಿ ಲಭ್ಯ ಆಗಲಿದ್ದು, ಮುಂಬರುವ ದಿನಗಳಲ್ಲಿ ಇತರೆ ರಾಷ್ಟ್ರಗಳ ಮಾರುಕಟ್ಟೆಗಳಿಗೆ ವಿಸ್ತರಿಸಲಿದೆ.


Click it and Unblock the Notifications








