ಅಮೆಜಾನ್‌ನಲ್ಲಿ 'ರೆಡ್ಮಿ 9 ಆಕ್ಟೀವ್' ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ!

|

ಶಿಯೋಮಿ ಸಂಸ್ಥೆಯು ಭಾರತದಲ್ಲಿ ರೆಡ್ಮಿ 9 ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿ ಸದ್ದು ಮಾಡಿದೆ. ಅದರ ಮುಂದುವರಿದ ಭಾಗವಾಗಿ ಈಗ ಸದ್ದಿಲ್ಲದೇ ಹೊಸ ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಆಕರ್ಷಕ ಲುಕ್ ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಇಂದು (ಸೆ.24) ಮಾರಾಟ ಲಿಸ್ಟ್‌ನಲ್ಲಿ ಕಾಣಿಸಿದೆ.

ಅಮೆಜಾನ್‌ನಲ್ಲಿ 'ರೆಡ್ಮಿ 9 ಆಕ್ಟೀವ್' ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ!

ಹೌದು, ಶಿಯೋಮಿ ಸಂಸ್ಥೆಯು ಹೊಸದಾಗಿ ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಹಾಗೆಯೇ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಇನ್ನುಳಿದಂತೆ ಈ ಫೋನಿನ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ.

ಅಮೆಜಾನ್‌ನಲ್ಲಿ 'ರೆಡ್ಮಿ 9 ಆಕ್ಟೀವ್' ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ!

ಪ್ರೊಸೆಸರ್ ಯಾವುದು
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ರಚನೆ
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿಯ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಇನ್ನು ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಅಮೆಜಾನ್‌ನಲ್ಲಿ 'ರೆಡ್ಮಿ 9 ಆಕ್ಟೀವ್' ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ!

ಬ್ಯಾಟರಿ ಪವರ ಯಾವುದು
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಅವು ಕ್ರಮವಾಗಿ 4GB + 64GB ಮತ್ತು 6GB + 128GB ಆಗಿವೆ. ಭಾರತದಲ್ಲಿ ಈ ಫೋನ್ ಗಳ ಬೆಲೆ ಬಹಿರಂಗ ಪಡಿಸಿಲ್ಲ. ಇನ್ನು ಈ ಫೋನ್ ಕಾರ್ಬನ್ ಬ್ಲ್ಯಾಕ್, ಕೋರಲ್ ಗ್ರೀನ್ ಮತ್ತು ಮೆಟಾಲಿಕ್ ಪರ್ಪಲ್ ಬಣ್ಣಗಳ ಆಯ್ಕೆ ಒಳಗೊಂಡಿದೆ.

ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಫೀಚರ್ಸ್‌
ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಜೊತೆಗೆ ಇದು 100% ಡಿಸಿಐ-ಪಿ 3 ಅನ್ನು ಹೊಂದಿದೆ. ವಿಶಾಲ ಬಣ್ಣದ ಹರವು, ಮತ್ತು ಗರಿಷ್ಠ ಬ್ರೈಟ್‌ನೆಸ್‌ 1100 ನಿಟ್‌ಗಳವರೆಗೆ ಇರಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ.

Best Mobiles in India

English summary
Redmi 9 Activ Launched In India: Today Sale In Amazon.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X