ಶಿಯೋಮಿ ರೆಡ್ಮಿ 9 ಸ್ಮಾರ್ಟ್‌ಫೋನ್ ಬಿಡುಗಡೆ!..ಕ್ವಾಡ್‌ ಕ್ಯಾಮೆರಾ!

|

ಶಿಯೋಮಿ ಸಂಸ್ಥೆಯ ರೆಡ್ಮಿ ಸರಣಿಯ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡಿವೆ. ಅದೇ ಸರಣಿಯಲ್ಲಿ ಶಿಯೋಮಿ ಇದೀಗ ಹೊಸದಾಗಿ ರೆಡ್ಮಿ 9 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ, ವೇಗದ ಪ್ರೊಸೆಸರ್, ಅಧಿಕ ಬ್ಯಾಟರಿ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದ್ದು, ಮಾರುಕಟ್ಟೆಯಲ್ಲಿ ಸದ್ದು ಮಾಡುವ ಲಕ್ಷಣಗಳನ್ನು ಹೊರಸೂಸಿದೆ.

ರೆಡ್ಮಿ 9 ಸ್ಮಾರ್ಟ್‌ಫೋನ್‌

ಹೌದು, ಶಿಯೋಮಿಯ ಹೊಸದಾಗಿ ರೆಡ್ಮಿ 9 ಸ್ಮಾರ್ಟ್‌ಫೋನ್‌ ಅನ್ನು ಸ್ಪೇನ್ ಮತ್ತು ಯುರೋಪ್‌ಗಳಲ್ಲಿ ಲಾಂಚ್ ಮಾಡಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಜೊತೆಗೆ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದಿದೆ. 4GB ಮತ್ತು 3GB RAM ಸ್ಟೋರೇಜ್‌ನ ವೇರಿಯಂಟ್ ಆಯ್ಕೆಗಳನ್ನು ಹೊಂದಿರುವ ಈ ಫೋನ್ ಕಾರ್ಬನ್ ಗ್ರೇ, ಸನ್ಸೆಟ್ ಪರ್ಪಲ್ ಮತ್ತು ಓಷನ್ ಗ್ರೀನ್ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರೆಡ್ಮಿ 9 ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ವಾಟರ್ ಡ್ರಾಪ್ ನಾಚ್ ಮಾದರಿಯಲ್ಲಿದ್ದು, ಸುತ್ತಲೂ ತೆಳುವಾದ ಅಂಚನ್ನು ಹೊಂದಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ 3 ರಚನೆಯನ್ನು ಪಡೆದಿದೆ.

ಪ್ರೊಸೆಸರ್ ಯಾವುದು

ಪ್ರೊಸೆಸರ್ ಯಾವುದು

ರೆಡ್ಮಿ 9 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ಅ ನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB ಮತ್ತು 3GB RAM ಹಾಗೂ 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ರೆಡ್ಮಿ 9 ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 9ಎಂಪಿಯ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಹಾಗೂ ನಾಲ್ಕನೇ ಕ್ಯಾಮೆರಾ 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 8ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ರೆಡ್ಮಿ 9 ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದ್ದು, ಇದರೊಂದಿಗೆ 18W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಹಾಗೆಯೇ ಯುಎಸ್‌ಬಿ-ಸಿ ಪೋರ್ಟ್‌, ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಇತ್ತೀಚಿನ ಫೀಚರ್ಸ್‌ಗಳು ಲಭ್ಯ ಇವೆ.

ಬೆಲೆ ಹಾಗೂ ಲಭ್ಯತೆ

ಬೆಲೆ ಹಾಗೂ ಲಭ್ಯತೆ

ರೆಡ್ಮಿ 9 ಸ್ಮಾರ್ಟ್‌ಫೋನ್ ಮೂಲ 3 ಜಿಬಿ RAM + 32 ಜಿಬಿ ಶೇಖರಣಾ ರೂಪಾಂತರದ ಬೆಲೆ 8 148 (ಸುಮಾರು 12,724 ರೂ.). ಏತನ್ಮಧ್ಯೆ 4 ಜಿಬಿ ರ್ಯಾಮ್ ಮತ್ತು 64 ಜಿಬಿ ಶೇಖರಣಾ ಹೊಂದಿರುವ ಹೈ-ಎಂಡ್ ರೂಪಾಂತರವು € 179 (ಸುಮಾರು 15,389.52 ರೂ). ಸ್ಪೇನ್‌ನಲ್ಲಿ ಮಾತ್ರ ಪ್ರಾರಂಭವಾದರೂ, ಫೋನ್ ಶೀಘ್ರದಲ್ಲೇ ಭಾರತದಲ್ಲಿಯೂ ಪಾಪ್ ಅಪ್ ಆಗುತ್ತದೆ ಎಂದು ನಾವು ನಿರೀಕ್ಷಿಸಬಹುದು.

Best Mobiles in India

English summary
Redmi 9 which was launched today in Spain, Europe.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X