ಭಾರತದಲ್ಲಿ ರೆಡ್ಮಿ 9 ಪವರ್‌ ಸ್ಮಾರ್ಟ್‌ಫೋನ್‌ ಬಿಡುಗಡೆಯ ದಿನಾಂಕ ಬಹಿರಂಗ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಈಗಾಗಲೇ ತನ್ನ ರೆಡ್ಮಿ ಸರಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಡಿಸೆಂಬರ್ 17 ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.

ರೆಡ್ಮಿ 9 ಪವರ್‌

ಹೌದು, ಶಿಯೋಮಿ ತನ್ನ ರೆಡ್ಮಿ 9 ಪವರ್‌ ಸ್ಮಾರ್ಟ್‌ಫೋನ್‌ ಅನ್ನು ಡಿಸೆಂಬರ್ 15 ರಂದು ಭಾರತದಲ್ಲಿ ಪರಿಚಯಿಸುವುದಾಗಿ ಘೋಷಣೆ ಮಾಡಿದೆ. ಇನ್ನು ರೆಡ್‌ಮಿ 9 ಪವರ್ ಇತ್ತೀಚೆಗೆ ಚೀನಾದಲ್ಲಿ ಪರಿಚಯಿಸಲಾದ ರೆಡ್‌ಮಿ ನೋಟ್ 9 4G ಯ ಮರುಬ್ರಾಂಡೆಡ್ ಆವೃತ್ತಿಯಾಗಿದೆ ಎಂದು ಊಹಿಸಲಾಗಿದೆ. ಆದಾಗ್ಯೂ, ಭಾರತೀಯ ಗ್ರಾಹಕರ ಆದ್ಯತೆಗಳನ್ನು ಪೂರೈಸಲು ಸ್ಮಾರ್ಟ್‌ಫೋನ್‌ ಕೆಲವು ಬದಲಾವಣೆಗಳನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?

ಡಿಸ್‌ಪ್ಲೇ ಹೇಗಿದೆ?

ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 83.4% ಸ್ಕ್ರೀನ್-ಟು-ಬಾಡಿ ಅನುಪಾತ ಹಾಗೂ 19.5:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿರಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM + 64GB ಮತ್ತು 4GB RAM + 128GB ಇಂಟರ್‌ ಸ್ಟೋರೇಜ್ ರೂಪಾಂತರ ಸೇರಿದಂತೆ ಎರಡು ರೂಪಾಂತರಗಳಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ರೆಡ್ಮಿ 9 ಪವರ್‌ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಯುಎಸ್‌ಬಿ ಟೈಪ್‌ ಸಿ 2, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ 9 ಪವರ್‌ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಡಿಸೆಂಬರ್ 17 ರಂದು ಬಿಡುಗಡೆ ಆಗಲಿದೆ. ಇನ್ನು ಭಾರತದಲ್ಲಿ 10,000 ರೂಗಳ ಬೆಲೆ ವಿಭಾಗದ ಅಡಿಯಲ್ಲಿ ಇದು ಲಭ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Best Mobiles in India

English summary
Redmi 9 Power India launch has been set for December 17, Xiaomi on Thursday announced through a tweet posted by the Redmi India account.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X