ಇಂದು ಮತ್ತೆ ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್ ಸೇಲ್‌!.ಬೆಲೆ ಜಸ್ಟ್‌ 10,999ರೂ.!

|

ಶಿಯೋಮಿ ಸಂಸ್ಥೆಯು ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಮಾಡಿರುವ ಅಗ್ಗದ ಬೆಲೆಯ ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ಈಗಾಗಲೇ ಮಾರಾಟ ಕಂಡಿದೆ. ಈ ಸ್ಮಾರ್ಟ್‌ಫೋನ್‌ ಮತ್ತೆ ಇಂದು (ಜ.5) ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 10,999ರೂ.ಗಳು ಆಗಿದೆ.

ತಾಣದಲ್ಲಿ

ಅಮೆಜಾನ್‌ನಲ್ಲಿ ಇ-ಕಾಮರ್ಸ್‌ ತಾಣದಲ್ಲಿ ಇಂದು ರೆಡ್ಮಿ 9 ಪವರ್ ಸ್ಮಾರ್ಟ್‌ಫೋನಿನ ಮಾರಾಟ ನಡೆಯಲಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹಾಗೂ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 6,000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ 4GB + 64GB ಮತ್ತು 4GB RAM + 128GB ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಬ್ಲೇಜಿಂಗ್ ಬ್ಲೂ, ಎಲೆಕ್ಟ್ರಿಕ್ ಗ್ರೀನ್, ಫೈರಿ ರೆಡ್ ಮತ್ತು ಮೈಟಿ ಬ್ಲ್ಯಾಕ್ ಬಣ್ಣಗಳ ಆಯ್ಕೆ ಇದೆ. ಹಾಗಾದರೇ ರೆಡ್ಮಿ 9 ಪವರ್ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡಾಟ್‌ಡ್ರಾಪ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತ ಹೊಂದಿದ್ದು, 400 ನಿಟ್ಸ್ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯ ಹೇಗೆ

ಪ್ರೊಸೆಸರ್‌ ಕಾರ್ಯ ಹೇಗೆ

ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್ ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 4GB RAM ಮತ್ತು 64GB +128gb ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ ರಚನೆ

ಕ್ವಾಡ್ ಕ್ಯಾಮೆರಾ ರಚನೆ

ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ V 5.0, GPS, ಇನ್ಫ್ರಾರೆಡ್ (ಐಆರ್) ಬ್ಲಾಸ್ಟರ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್‌ಮಿ 9 ಪವರ್‌ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆಯು 10,999ರೂ. ಆಗಿದೆ. ಅದೇ ರೀತಿ 4GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆಯು 11,999 ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲೇಜಿಂಗ್ ಬ್ಲೂ, ಎಲೆಕ್ಟ್ರಿಕ್ ಗ್ರೀನ್, ಫೈರಿ ರೆಡ್ ಮತ್ತು ಮೈಟಿ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Redmi 9 Power Sale Today On Amazon: Price And Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X