ಭಾರತದಲ್ಲಿ ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ಲಾಂಚ್‌! ವಿಶೇಷತೆ ಏನು?

|

ಶಿಯೋಮಿಯ ಬಹುನಿರೀಕ್ಷಿತ ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಮತ್ತು ವಾಟರ್‌ಡ್ರಾಪ್ ಶೈಲಿಯ ಡಿಸ್‌ಪ್ಲೇ ನಾಚ್ ಶೈಲಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌‌ ಇತ್ತೀಚಿನ MIUI 12 ಅನ್ನು ಸಹ ಒಳಗೊಂಡಿದೆ. ಇದಲ್ಲದೆ ರೆಡ್‌ಮಿ 9 ಪವರ್‌ 6,000mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್‌ಮಿ 9 ಪವರ್‌

ಹೌದು, ಶಿಯೋಮಿ ಸಂಸ್ಥೆ ತನ್ನ ಹೊಸ ರೆಡ್‌ಮಿ 9 ಪವರ್‌ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಅನ್ನು ಹೊಂದಿದ್ದು, 128GB ವರೆಗೆ ಆನ್‌ಬೋರ್ಡ್ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ರೆಡ್ಮಿ ನೋಟ್ 9 4G ಸ್ಮಾರ್ಟ್‌ಫೋನಿನ ರಿಬ್ಯಾಂಡ್‌ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋಣ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡಾಟ್‌ಡ್ರಾಪ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತ ಹೊಂದಿದ್ದು, 400 ನಿಟ್ಸ್ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಸೆನ್ಸಾರ್‌ ಎಐ ಫೇಸ್ ಅನ್ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ V 5.0, GPS, ಇನ್ಫ್ರಾರೆಡ್ (ಐಆರ್) ಬ್ಲಾಸ್ಟರ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ನೆಟ್‌ಫ್ಲಿಕ್ಸ್ ಸೇರಿದಂತೆ ಪ್ಲಾಟ್‌ಫಾರ್ಮ್‌ಗಳ ಮೂಲಕ ಎಚ್‌ಡಿ ವೆಬ್ ಸ್ಟ್ರೀಮಿಂಗ್ ಅನ್ನು ಬೆಂಬಲಿಸಲು ವೈಡ್‌ವೈನ್ ಎಲ್ 1 ಪ್ರಮಾಣೀಕರಣವೂ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್‌ಮಿ 9 ಪವರ್‌ ಸ್ಮಾರ್ಟ್‌ಫೋನ್‌ ಬೆಲೆ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 10,999 ರೂ ಹಾಗೂ 4GB RAM + 128GB ಸ್ಟೋರೇಜ್ ಆಯ್ಕೆಯು 11,999 ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲೇಜಿಂಗ್ ಬ್ಲೂ, ಎಲೆಕ್ಟ್ರಿಕ್ ಗ್ರೀನ್, ಫೈರಿ ರೆಡ್ ಮತ್ತು ಮೈಟಿ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಆನ್‌ಲೈನ್‌ನಲ್ಲಿ ಅಮೆಜಾನ್ ಮತ್ತು ಮಿ.ಕಾಮ್ ಮತ್ತು ಮಿ ಹೋಮ್ಸ್, ಮಿ ಸ್ಟುಡಿಯೋಸ್ ಮತ್ತು ಮಿ ಸ್ಟೋರ್‌ಗಳ ಮೂಲಕ ಲಭ್ಯವಿರುತ್ತದೆ, ಇದರ ಮೊದಲ ಮಾರಾಟವು ಡಿಸೆಂಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ.

Best Mobiles in India

English summary
Redmi 9 Power has been launched in India as Xiaomi's latest budget smartphone. The new model comes with quad rear cameras and a waterdrop-style display notch.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X