ಇಂದು ಮತ್ತೆ ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ ಸೇಲ್!..ಬೆಲೆ 9,999ರೂ!
ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ಬಜೆಟ್ ಬೆಲೆಯ ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ ಈಗಾಗಲೇ ಇ-ಕಾಮರ್ಸ್ ತಾಣಗಳಲ್ಲಿ ಮಾರಾಟ ಕಂಡಿದೆ. ಈ ಸ್ಮಾರ್ಟ್‌ಫೋನ್ ಸೇಲ್ ಇಂದು (ಅ.9) ಮಧ್ಯಾಹ್ನ 12ರಿಂದ ಇ-ಕಾಮರ್ಸ್ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 9,999ರೂ.ಗಳು ಆಗಿದೆ.

ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ ಸೇಲ್ ಇಂದು ಶುರುವಾಗಲಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಹಾಗೂ ಫಾಸ್ಟ್ ಚಾರ್ಜಿಂಗ್ ಬೆಂಬಲಿತ 5020mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ 4GB + 64GB ಮತ್ತು 4GB + 128GB ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ. ಹಾಗಾದರೇ ರೆಡ್ಮಿ 9 ಪ್ರೈಮ್ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್
ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 19.5: 9 ರಚನೆಯ ಅನುಪಾತವನ್ನು ಹೊಂದಿದ್ದು, 394 pp ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಜೊತೆಗೆ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಜೊತೆಗೆ ಇದು flaunts an Aura 360 ವಿನ್ಯಾಸ, ಏರಿಳಿತದ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ
ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದನ್ನು ಮಾಲಿ-ಜಿ 52 ಜಿಪಿಯು ಬೆಂಬಲಿಸುತ್ತದೆ. ಹಾಗೇಯೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್
ರೆಡ್‌ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ f/ 2.2 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಆದರೆ ಸದ್ಯ ಇದು 10W ಚಾರ್ಜರ್‌ನೊಂದಿಗೆ ರವಾನಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi, ಬ್ಲೂಟೂತ್ 5.0, ವೈ-ಫೈ ಡೈರೆಕ್ಟ್, ಎಫ್‌ಎಂ ರೇಡಿಯೋ, NFC, GPS, AGPS, ಮತ್ತು ಅತಿಗೆಂಪು ಸೆನ್ಸಾರ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಫಿಂಗರ್‌ಪ್ರಿಂಟ್ ಸೆನ್ಸಾರ್, 3.5mm ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ.


Click it and Unblock the Notifications




