ಇಂದು ರೆಡ್ಮಿ 9 ಪ್ರೈಮ್‌ ಫೋನ್ ಸೇಲ್‌!..ಬಜೆಟ್‌ ಬೆಲೆಯಲ್ಲಿ ಲಭ್ಯ!

|

ಶಿಯೋಮಿ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರೆಡ್ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರನ್ನು ಸೆಳೆದಿದ್ದು, ಆನ್‌ಲೈನ್‌ನಲ್ಲಿ ಮಾರಾಟ ಕಂಡಿದೆ. ಈ ಸ್ಮಾರ್ಟ್‌ಫೋನ್‌ ಸೇಲ್ ಇಂದು (ಆಗಷ್ಟ್ 24) ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಸೇಲ್ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 9,999ರೂ.ಗಳು ಆಗಿದೆ.

ಸ್ಮಾರ್ಟ್‌ಫೋನ್

ರೆಡ್ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್ ಮಾರಾಟ ಇಂದು ನಡೆಯಲಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹಾಗೂ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 5020mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ 4GB + 64GB ಮತ್ತು 4GB + 128GB ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ. ಹಾಗಾದರೇ ರೆಡ್ಮಿ 9 ಪ್ರೈಮ್‌ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

ರೆಡ್ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 19.5: 9 ರಚನೆಯ ಅನುಪಾತವನ್ನು ಹೊಂದಿದ್ದು, 394 pp ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಜೊತೆಗೆ 400 ನಿಟ್ಸ್ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಜೊತೆಗೆ ಇದು flaunts an Aura 360 ವಿನ್ಯಾಸ, ಏರಿಳಿತದ ವಿನ್ಯಾಸವನ್ನು ಹೊಂದಿದೆ. 3D ಯುನಿಬಾಡಿ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ರೆಡ್ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದನ್ನು ಮಾಲಿ-ಜಿ 52 ಜಿಪಿಯು ಬೆಂಬಲಿಸುತ್ತದೆ. ಹಾಗೇಯೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರೆಡ್‌ಮಿ 9 ಪ್ರೈಮ್ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ f/ 2.2 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ರೆಡ್ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಆದರೆ ಸದ್ಯ ಇದು 10W ಚಾರ್ಜರ್‌ನೊಂದಿಗೆ ರವಾನಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi, ಬ್ಲೂಟೂತ್ 5.0, ವೈ-ಫೈ ಡೈರೆಕ್ಟ್, ಎಫ್‌ಎಂ ರೇಡಿಯೋ, NFC, GPS, AGPS, ಮತ್ತು ಅತಿಗೆಂಪು ಸೆನ್ಸಾರ್‌ ಅನ್ನು ಬೆಂಬಲಿಸುತ್ತದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, 3.5mm ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ.

Best Mobiles in India

English summary
Redmi 9 Prime key highlights Mediatek Helio G80 SoC, quad rear cameras, and 5,020mAh battery.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X