Home
ಸುದ್ದಿಜಾಲ

ರೆಡ್ಮಿ 9A ಸ್ಮಾರ್ಟ್‌ಫೋನ್ 4GB RAM + 128GB ವೇರಿಯಂಟ್ ಲಾಂಚ್!

ಶಿಯೋಮಿ ಸಂಸ್ಥೆಯು ಇತ್ತೀಚಿಗೆ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್ ಮಾಡೆಲ್‌ನಲ್ಲಿ ಹೊಸದಾಗಿ ರೆಡ್ಮಿ 9A ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿತ್ತು. ಇದೀಗ ಶಿಯೋಮಿಯು ರೆಡ್ಮಿ 9A ಸ್ಮಾರ್ಟ್‌ಫೋನ್‌ನಲ್ಲಿ 4GB RAM + 128GB ಸ್ಟೋರೇಜ್ ವೇರಿಯಂಟ್‌ ಅನ್ನು ಬಿಡುಗಡೆ ಮಾಡಿದೆ.

ಹೊಸದಾಗಿ

ಹೌದು, ಶಿಯೋಮಿ ಸಂಸ್ಥೆಯು ಹೊಸದಾಗಿ ರೆಡ್ಮಿ 9A ಸ್ಮಾರ್ಟ್‌ಫೋನ್ 4GB RAM + 128GB ಸ್ಟೋರೇಜ್ ವೇರಿಯಂಟ್‌ ಲಾಂಚ್ ಮಾಡಿದೆ. ಈ ಫೋನ್ ಈಗಾಗಲೇ 2GB RAM + 32GB ಮತ್ತು 3GB RAM + 32GB ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳಲ್ಲಿ ಲಾಂಚ್ ಆಗಿದೆ. ಚೀನಾದಲ್ಲಿ ಹೊಸ 4GB RAM ಮಾಡೆಲ್ ಬೆಲೆಯು CNY 799 (ಭಾರತದಲ್ಲಿ ಅಂದಾಜು 8,600ರೂ). ಇನ್ನುಳಿದಂತೆ ಈ ಫೋನಿನ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರೆಡ್ಮಿ 9A ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 19.5:9 ಅನುಪಾತವನ್ನು ಪಡೆದಿದೆ.

ಪ್ರೊಸೆಸರ್ ಯಾವುದು

ಪ್ರೊಸೆಸರ್ ಯಾವುದು

ರೆಡ್ಮಿ 9A ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 2GB RAM + 32GB, 3GB RAM + 32GB ಮತ್ತು 4GB RAM + 128GB ವೇರಿಯಂಟ್‌ನ ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ರೆಡ್ಮಿ 9A ಸ್ಮಾರ್ಟ್‌ಫೋನ್ ಸಿಂಗಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಹಿಂಬದಿಯಲ್ಲಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ರೆಡ್ಮಿ 9A ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ.

Best Mobiles in India

English summary
Redmi 9A has was launched in China in July in two RAM plus storage configurations – 2GB RAM + 32GB storage, and 4GB RAM + 64GB storage.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+