Home
ಸುದ್ದಿಜಾಲ

ಶಿಯೋಮಿಯಿಂದ ಬಜೆಟ್‌ ಬೆಲೆಯ ರೆಡ್ಮಿ 9A ಫೋನ್ ಲಾಂಚ್‌ಗೆ ಸಿದ್ಧತೆ!

ಶಿಯೋಮಿ ಸಂಸ್ಥೆಯ ಈಗಾಗಲೇ ಹಲವು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿ ಸೈ ಎನಿಸಿಕೊಂಡಿದೆ. ಅದೇ ಹಾದಿಯಲ್ಲಿ ಮುಂದುವರೆದಿರುವ ಸಂಸ್ಥೆಯು ಇದೀಗ ಹೊಸದಾಗಿ ಮತ್ತೊಂದು ಬಜೆಟ್ ಫೋನ್ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚಿಗಷ್ಟೆ ಶಿಯೋಮಿ ರೆಡ್ಮಿ 9 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದ್ದು, ಅದೇ ಸರಣಿಯಲ್ಲಿ ಈಗ ರೆಡ್ಮಿ 9A ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ತಯಾರಿ ನಡೆಸಿದೆ.

ರೆಡ್ಮಿ 9A

ಹೌದು, ಶಿಯೋಮಿಯ ಹೊಸದಾಗಿ ರೆಡ್ಮಿ 9A ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಈ ಫೋನ್ ಬಜೆಟ್ ಬೆಲೆಯಲ್ಲಿರಲಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G8X ಸರಣಿಯ ಪ್ರೊಸೆಸರ್‌ ಸಾಮರ್ಥ್ಯವನನ್ಉ ಒಳಗೊಂಡಿರಲಿದೆ ಎಂದು ಹೇಳಲಾಗುತ್ತಿದೆ. ಉಳಿದಂತೆ ಬಹುತೇಕ ರೆಡ್ಮಿ 9 ಫೋನಿನ ಫೀಚರ್ಸ್‌ಗಳನ್ನೇ ಹೋಲುವ ರಚನೆ ಇರಲಿದೆ ಎನ್ನಲಾಗುತ್ತಿದೆ. ಹಾಗಾದರೇ ಲೀಕ್ ಮಾಹಿತಿಯಂತೆ ಈ ಫೋನಿನಲ್ಲಿ ಯಾವೆಲ್ಲಾ ಫೀಚರ್ಸ್‌ಗಳು ಇರಲಿವೆ ಎಂಬುದನ್ನು ಮುಂದೆ ನೋಡೋಣ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರೆಡ್ಮಿ 9A ಸ್ಮಾರ್ಟ್‌ಫೋನ್ 720*1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಡಿಸ್‌ಪ್ಲೇಯು ವಾಟರ್ ಡ್ರಾಪ್ ನಾಚ್ ಮಾದರಿಯಲ್ಲಿದ್ದು 20:9 ಅನುಪಾತ ಹೊಂದಿರಲಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ 3 ರಚನೆಯನ್ನು ಪಡೆದಿದೆ.

ಪ್ರೊಸೆಸರ್ ಯಾವುದು

ಪ್ರೊಸೆಸರ್ ಯಾವುದು

ರೆಡ್ಮಿ 9A ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G8X ಸರಣಿ ಪ್ರೊಸೆಸರ್‌ ಅನ್ನು ಪಡೆದಿರಲಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ ಓಎಸ್ ಬೆಂಬಲ ಹೊಂದಿರಲಿದೆ. ಹಾಗೆಯೇ ಈ ಫೋನ್ 32GB 3GB RAM ಸ್ಟೋರೇಜ್ ವೇರಿಯಂಟ್ ಆಯ್ಕೆ ಸಾಧ್ಯತೆ ಇದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ಇರಲಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ರೆಡ್ಮಿ 9A ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆ ಇರುವ ಸಾಧ್ಯತೆಗಳಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿರಲಿದೆ. ಸೆಕೆಂಡರಿ ಕ್ಯಾಮೆರಾವು ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ತೃತೀಯ ಕ್ಯಾಮೆರಾವು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾ 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿರುವ ನಿರೀಕ್ಷೆಗಳಿವೆ. ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಿದೆ ಎನ್ನಲಾಗಿದೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ರೆಡ್ಮಿ 9A ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹಾಗೆಯೇ ಯುಎಸ್‌ಬಿ-ಸಿ ಪೋರ್ಟ್‌, ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಇತ್ತೀಚಿನ ಫೀಚರ್ಸ್‌ಗಳು ಇರಲಿವೆ.

Best Mobiles in India

English summary
Xiaomi prepares its launch course in terms of budget-end devices.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+