ಅಗ್ಗದ ಬೆಲೆಯ ಈ ರೆಡ್ಮಿ ಫೋನ್‌ ಖರೀದಿಸುವ ಗ್ರಾಹಕರಿಗೆ ಬಿಗ್ ಶಾಕ್!

|

ಶಿಯೋಮಿ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆ ಗಳಿಸಿದೆ. ಶಿಯೋಮಿ ಸಂಸ್ಥೆಯು ತನ್ನ ರೆಡ್ಮಿ 9A ಮತ್ತು ರೆಡ್ಮಿ 9A ಸ್ಪೋರ್ಟ್‌ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಇದೀಗ ಹೆಚ್ಚಳ ಮಾಡಿದ್ದು, ಗ್ರಾಹಕರಿಗೆ ಶಾಕ್ ನೀಡಿದೆ. ಆನ್‌ಲೈನ್‌ ತಾಣಗಳಲ್ಲಿ ಈ ಎರಡು ಬಜೆಟ್‌ ಪ್ರೈಸ್‌ ಟ್ಯಾಗ್‌ ಫೋನ್‌ಗಳ ದರ ಹೆಚ್ಚಳ ಆಗಿದೆ.

ಸರಣಿಯ

ಹೌದು, ಶಿಯೋಮಿ ಕಂಪನಿಯು ರೆಡ್ಮಿ ಸರಣಿಯ ರೆಡ್ಮಿ 9A ಮತ್ತು ರೆಡ್ಮಿ ರೆಡ್ಮಿ 9A ಸ್ಪೋರ್ಟ್‌ ಈ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ 300ರೂ. ಏರಿಕೆ ಮಾಡಿದೆ. ಈ ಎರಡು ಫೋನ್‌ಗಳ ಎಲ್ಲ ಆವೃತ್ತಿಯ ಮಾದರಿಗಳಿಗೂ ಈ ದರ ಹೆಚ್ಚಳ ಅನ್ವಯಿಸಿದೆ.

ದರ ಹೆಚ್ಚಳದಿಂದ

ದರ ಹೆಚ್ಚಳದಿಂದ 6,999ರೂ. ಬೆಲೆ ಹೊಂದಿದ್ದ ರೆಡ್ಮಿ 9A ಫೋನ್‌ 2GB RAM ಮತ್ತು 32GB ಸಂಗ್ರಹ ಆವೃತ್ತಿ ಈಗ 7,299ರೂ. ಆಗಲಿದೆ. ಅದೇ ರೀತಿ ದರ ಹೆಚ್ಚಳದಿಂದ 3GB RAM ಆವೃತ್ತಿಯ ಫೋನ್ 8,299ರೂ. ದರದಲ್ಲಿ ಕಾಣಿಸಿಕೊಳ್ಳಲಿದೆ. ಹಾಗೆಯೇ ರೆಡ್ಮಿ 9A ಸ್ಪೋರ್ಟ್‌ 2GB RAM ಆವೃತ್ತಿಯ ಫೋನ್ 7,299ರೂ. ಬೆಲೆಯನ್ನು ಪಡೆದಿದೆ. 3GB RAM ಆವೃತ್ತಿಯ ಫೋನ್ 8,299ರೂ.ಗಳಲ್ಲಿ ಕಾಣಿಸಿಕೊಳ್ಳಲಿದೆ. ಹಾಗಾದರೇ ಈ ಫೋನ್‌ಗಳ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

ರೆಡ್ಮಿ 9A ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 19.5:9 ಅನುಪಾತವನ್ನು ಪಡೆದಿದೆ.

ಪ್ರೊಸೆಸರ್ ಪವರ್ ಯಾವುದು

ಪ್ರೊಸೆಸರ್ ಪವರ್ ಯಾವುದು

ರೆಡ್ಮಿ 9A ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 2GB RAM + 32GB ಮತ್ತು 3GB RAM + 32GB ವೇರಿಯಂಟ್‌ನ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ.

ಕ್ಯಾಮೆರಾ ರಚನೆ ಮತ್ತು ಸೆನ್ಸಾರ್

ಕ್ಯಾಮೆರಾ ರಚನೆ ಮತ್ತು ಸೆನ್ಸಾರ್

ರೆಡ್ಮಿ 9A ಸ್ಮಾರ್ಟ್‌ಫೋನ್ ಸಿಂಗಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಹಿಂಬದಿಯಲ್ಲಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಬಲ ಎಷ್ಟು

ಬ್ಯಾಟರಿ ಬಲ ಎಷ್ಟು

ರೆಡ್ಮಿ 9A ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ.

ರೆಡ್ಮಿ 9A ಸ್ಪೋರ್ಟ್ ಸ್ಮಾರ್ಟ್‌ಫೋನ್ ಫೀಚರ್ಸ್‌

ರೆಡ್ಮಿ 9A ಸ್ಪೋರ್ಟ್ ಸ್ಮಾರ್ಟ್‌ಫೋನ್ ಫೀಚರ್ಸ್‌

ರೆಡ್ಮಿ 9A ಸ್ಪೋರ್ಟ್ ಫೋನ್ 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ಶೈಲಿಯ ನಾಚ್ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಆಧಾರಿತ MIUI 12 ನಲ್ಲಿ ಸಪೋರ್ಟ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ 2GB RAM / 3GB RAM ಮತ್ತು 32GB ಆಂತರೀಕ ಸಂಗ್ರಹದ ಆಯ್ಕೆಯನ್ನು ಹೊಂದಿದೆ.

ಹಿಂಬದಿಯಲ್ಲಿ

ಹಾಗೆಯೇ ರೆಡ್ಮಿ 9A ಸ್ಪೋರ್ಟ್ ಫೋನ್ ಹಿಂಬದಿಯಲ್ಲಿ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಅಲ್ಲದೆ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದರ ಜೊತೆಗೆ ಈ ಫೋನ್ 5,000mAh ಬ್ಯಾಟರಿಯನ್ನ ಬ್ಯಾಕ್‌ಅಪ್‌ ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

Best Mobiles in India

English summary
Redmi 9A models - that is the Redmi 9A and Redmi 9A Sport see an increase in price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X