Home
ಸುದ್ದಿಜಾಲ

ಶೀಘ್ರದಲ್ಲೇ ರೆಡ್ಮಿ 9A ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿದೆ. ತನ್ನ ರೆಡ್ಮಿ ಬ್ರ್ಯಾಂಡ್‌ ಅಡಿಯಲ್ಲಿ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಇನ್ನು ಶಿಯೋಮಿ ರೆಡ್ಮಿ ಸ್ಮಾರ್ಟ್‌ಫೋನ್‌ ತನ್ನ ವಿಶೇಷ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದ್ದು, ಇದೀಗ ಮತ್ತೇ ರೆಡ್ಮಿ ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಲು ಶಿಯೋಮಿ ಸಿದ್ದತೆ ನಡೆಸಿದೆ.

ಶಿಯೋಮಿ

ಹೌದು, ಶಿಯೋಮಿ ಸಬ್‌ಬ್ರಾಂಡ್‌ ರೆಡ್ಮಿ ತನ್ನ ಹೊಸ ರೆಡ್ಮಿ 9A, ರೆಡ್ಮಿ 9ರ ಟೋನ್-ಡೌನ್ ಆವೃತ್ತಿ ಮತ್ತು ರೆಡ್ಮಿ 8A ಸ್ಮಾರ್ಟ್‌ಫೋನ್‌ ಸರಣಿಯ ಮುಂದುವರೆದ ಆವೃತ್ತಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗ್ತಿದೆ.ಅಲ್ಲದ ಈ ಸ್ಮಾರ್ಟ್‌ಫೋನ್‌ಗಳು ಮುಂದಿನ ತಿಂಗಳ ಅಂತ್ಯಕ್ಕೆ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ಫಿಲಿಪೈನ್ಸ್ ಮಾರುಕಟ್ಟೆಗೆ ಉದ್ದೇಶಿಸಿರುವ ಶಿಯೋಮಿ ಕ್ಯಾಟಲಾಗ್ ಬಹಿರಂಗಪಡಿಸಿದೆ. ಸದ್ಯ ಕ್ಯಾಟಲಾಗ್‌ ನಲ್ಲಿ ಉಲ್ಲೇಖವಾಗಿರುವಂತೆ ಈ ಸ್ಮಾರ್ಟ್‌ಫೋನ್‌ನ ಪ್ರಮುಖ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಮಾರ್ಟ್‌ಫೋನ್

ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ ಈ ಸರಣಿಯ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದ್ದು, ರೆಡ್ಮಿ 9 ಸ್ಮಾರ್ಟ್‌ಫೋನ್‌ ಅಂತೆಯೇ, ರೆಡ್ಮಿ 9A ಸ್ಮಾರ್ಟ್‌ಫೋನ್‌ 6.53-ಇಂಚಿನ ಡಿಸ್ಪ್ಲೇಯನ್ನು ಹೊಂದಿರಲಿದೆ. ಸದ್ಯ ಈ ಫೋನ್ ಭಾರತೀಯ ಮಾರುಕಟ್ಟೆಯಲ್ಲಿಯೂ ಬಿಡುಗಡೆ ಆಗಲಿದೆಯಾ ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಲಬ್ಯವಾಗಿಲ್ಲ.

ಶಿಯೋಮಿ

ಇನ್ನು ಫಿಲಿಪೈನ್ಸ್ ಮಾರುಕಟ್ಟೆಯ ಶಿಯೋಮಿ ಕ್ಯಾಟಲಾಗ್ ಪ್ರಕಾರ ರೆಡ್ಮಿ 9A ಸ್ಮಾರ್ಟ್‌ಫೋನ್‌ 6.53-ಇಂಚಿನ ಎಚ್‌ಡಿ + ಡಿಸ್ಪ್ಲೇಯನ್ನು ಹೊಂದಿರುವ ಸಾಧ್ಯತೆ ಇದೆ. ಹಾಗೇಯೇ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಹೊಂದಿರಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ನಾಚ್ ಡಿಸ್‌ಪ್ಲೇ ಶೈಲಿಯನ್ನ ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ ಹೊಂದಿರಲಿದೆ ಎಂದು ಹೇಳಲಾಗಿದೆ. ಜೊತೆಗೆ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗುತ್ತದೆ.

ರೆಡ್ಮಿ

ಇದಲ್ಲದೆ ರೆಡ್ಮಿ 9A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿರುವ ಸಾಧ್ಯತೆ ಇದೆ. ಹಾಗೇಯೇ 10W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಹೇಳಲಾಗ್ತಿದೆ. ಇನ್ನು ಈ ಫೋನ್ ಸಿಂಗಲ್-ಬ್ಯಾಂಡ್, 2.4GHz ವೈ-ಫೈ ಸಂಪರ್ಕ ಮತ್ತು 4 ಜಿ ಬೆಂಬಲದೊಂದಿಗೆ ಬರಲಿದೆ ಎಂದು ಸೂಚಿಸಲಾಗಿದೆ. ಇನ್ನು ಈಗಾಗಲೇ ರೆಡ್ಮಿ 9 ಅನ್ನು ಪೊಕೊ ಬ್ರಾಂಡ್ ಅಡಿಯಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲು ಊಹಿಸಲಾಗಿದೆ ಎಂದು ಸಹ ವರದಿ ಆಗಿದೆ.

Best Mobiles in India

English summary
Redmi 9A, the toned-down version of Redmi 9 and the successor to the Redmi 8A, will likely debut next month.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+