ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ರೆಡ್‌ಮಿ 9i ಸ್ಮಾರ್ಟ್‌ಫೋನ್ ಸಜ್ಜು!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ತನ್ನ ವಿಶೇಷ ಫೀಚರ್ಸ್‌ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಶಿಯೋಮಿ ಹೊಸದಾಗಿ ರೆಡ್‌ಮಿ 9i ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲಿದೆ ಎಂದು ವರದಿ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 15ರಂದು ಬಿಡುಗಡೆ ಮಾಡಲಾಗುವುದು ಎಂದು ಸಂಸ್ಥೆಯು ಹೇಳಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ತನ್ನ ಹೊಸ ರೆಡ್‌ಮಿ 9i ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೆ.15ರಂದು Mi.com ಹಾಗೂ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಗಳಲ್ಲಿ ಅನಾವರಣ ಆಗಲಿವೆ. ಈ ಸ್ಮಾರ್ಟ್‌ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್ ಹೊಂದಿರಲಿದ್ದು, 4GB RAM ಸಾಮರ್ಥ್ಯವನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಲೀಕ್ ಮಾಹಿತಿಯಂತೆ ಈ ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರೆಡ್‌ಮಿ 9i ಸ್ಮಾರ್ಟ್‌ಫೋನ್ 6.53-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇಯು ಎಚ್‌ಡಿ + ರೆಸಲ್ಯೂಶನ್ ಪಡೆದಿರಲಿದೆ ಎನ್ನಲಾಗಿದೆ. ಹಾಗೆಯೇ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರುವ ಸಾಧ್ಯತೆ ಇದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ರೆಡ್‌ಮಿ 9i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ ಹೊಂದಿರುವ ಸಾಧ್ಯತೆಯಿದೆ. ಜೊತೆಗೆ ಇದು ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ 4GB RAM ಸಾಮರ್ಥ್ಯದ ಆಯ್ಕೆ ಇರಲಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರೆಡ್‌ಮಿ 9i ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿರುವ ಸಾಧ್ಯತೆ ಇದೆ. ಕ್ಯಾಮೆರಾವು 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿರಲಿದೆ. ಇದರೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್‌ಮಿ 9i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G VOLTE, ವೈ-ಫೈ, ಬ್ಲೂಟೂತ್ 5.0, GPS, USB-C, ಐಆರ್ ಬ್ಲಾಸ್ಟರ್ ಮತ್ತು 3.5mm ಆಡಿಯೊ ಜ್ಯಾಕ್‌ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ.

Best Mobiles in India

English summary
Redmi 9i is also teased to have a big display and offer microSD card support for storage expansion.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X