ಭಾರತದಲ್ಲಿ ಅಗ್ಗದ ಪ್ರೈಸ್‌ನಲ್ಲಿ Redmi 9i ಸ್ಮಾರ್ಟ್‌ಫೋನ್ ಲಾಂಚ್!
ಶಿಯೋಮಿ ಮೊಬೈಲ್ ಸಂಸ್ಥೆಯು ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಈಗ ದೇಶಿಯ ಮಾರುಕಟ್ಟೆಗೆ ಹೊಸದಾಗಿ ರೆಡ್‌ಮಿ 9i ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಮಾಡೆಲ್ ಆಗಿದ್ದು, ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಶಿಯೋಮಿ ಕಂಪೆನಿ ತನ್ನ ಹೊಸ ರೆಡ್‌ಮಿ 9i ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಅನಾವರಣ ಮಾಡಿದೆ. ಈ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಹಾಗೂ 128GB ಸಾಮರ್ಥ್ಯವನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 10 ಓಎಸ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟಂಬರ್ 18ರಂದು ಫ್ಲಿಪ್‌ಕಾರ್ಟ್ ತಾಣದಲ್ಲಿ ಫಸ್ಟ್ ಸೇಲ್ ನಡೆಸಲಿದೆ. ಇನ್ನುಳಿದಂತೆ ಲೀಕ್ ಮಾಹಿತಿಯಂತೆ ಈ ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ರೆಡ್‌ಮಿ 9i ಸ್ಮಾರ್ಟ್‌ಫೋನ್ 6.53-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಎಚ್‌ಡಿ + ರೆಸಲ್ಯೂಶನ್ ಪಡೆದಿದೆ. ಹಾಗೆಯೇ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ಯಾವ ಪ್ರೊಸೆಸರ್
ರೆಡ್‌ಮಿ 9i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಆಂಡ್ರಾಯ್ಡ್ 10 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ 4GB RAM ಸಾಮರ್ಥ್ಯದ ವೇರಿಯಂಟ್ ಆಯ್ಕೆ ಇದೆ.

ಕ್ಯಾಮೆರಾ ವಿನ್ಯಾಸ
ರೆಡ್‌ಮಿ 9i ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಹಿಂಬದಿಯ ರಿಯರ್ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ರೆಡ್‌ಮಿ 9i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G VOLTE, ವೈ-ಫೈ, ಬ್ಲೂಟೂತ್ 5.0, GPS, USB-C, ಐಆರ್ ಬ್ಲಾಸ್ಟರ್ ಮತ್ತು 3.5mm ಆಡಿಯೊ ಜ್ಯಾಕ್ ಅನ್ನು ಪಡೆದಿದೆ.

ಬೆಲೆ ಎಷ್ಟು?
ರೆಡ್‌ಮಿ 9i ಸ್ಮಾರ್ಟ್‌ಫೋನ್ ಆರಂಭಿಕ 4GB RAM ಮತ್ತು 64GB ವೇರಿಯಂಟ್ ಬೆಲೆಯು 8,299ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟಂಬರ್ 18ರಂದು ಫ್ಲಿಪ್‌ಕಾರ್ಟ್ ತಾಣದಲ್ಲಿ ಫಸ್ಟ್ ಸೇಲ್ ನಡೆಸಲಿದೆ.


Click it and Unblock the Notifications








