ಶಿಯೋಮಿಯಿಂದ ಬಜೆಟ್‌ ಬೆಲೆಯ ಎರಡು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಭಾರತದ ಟೆಕ್‌ ವಲಯದಲ್ಲಿ ಶಿಯೋಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ತನ್ನ ರೆಡ್ಮಿ ಬ್ರಾಂಡ್‌ ಅಡಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ತನ್ನ ಹೊಸ ರೆಡ್ಮಿ 9ಐ ಸ್ಪೋರ್ಟ್ ಮತ್ತು ರೆಡ್ಮಿ 9ಎ ಸ್ಪೋರ್ಟ್ ಎಂಬ ಎರಡು ಫೋನ್‌ ವೆರಿಯಂಟ್ ಗಳನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇನ್ನು ರೆಡ್ಮಿ 9i ಸ್ಪೋರ್ಟ್ ಮತ್ತು ರೆಡ್ಮಿ 9A ಸ್ಪೋರ್ಟ್ ಫೋನ್‌ಗಳು ರೆಡ್ಮಿ 9i ಮತ್ತು ರೆಡ್ಮಿ 9A ಗೆ ಸಮಾನವಾಗಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ಹೊಸ ರೆಡ್ಮಿ 9 ಐ ಸ್ಪೋರ್ಟ್ ಮತ್ತು ರೆಡ್ಮಿ 9ಎ ಸ್ಪೋರ್ಟ್ ಫೋನ್‌ಗಳನ್ನು ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು 6.53-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿವೆ. ಜೊತೆಗೆ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಹೊಂದಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ 9i ಸ್ಪೋರ್ಟ್

ರೆಡ್ಮಿ 9i ಸ್ಪೋರ್ಟ್

ರೆಡ್ಮಿ 9i ಸ್ಪೋರ್ಟ್ ಸ್ಮಾರ್ಟ್‌ಫೋನ್‌ 6.53-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮಿಡಿಯಾಟೆಕ್‌ ಹಿಲಿಯೋ G25 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 10 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಫೋನ್‌ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ VoWiFi, 4G, VoLTE, ಬ್ಲೂಟೂತ್ 5.0, GPS/ A-GPS, ಮತ್ತು ಚಾರ್ಜಿಂಗ್‌ಗಾಗಿ ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು P2i ಲೇಪನವನ್ನು ಹೊಂದಿದೆ.

ರೆಡ್ಮಿ 9A ಸ್ಪೋರ್ಟ್

ರೆಡ್ಮಿ 9A ಸ್ಪೋರ್ಟ್

ರೆಡ್ಮಿ 9A ಸ್ಪೋರ್ಟ್ ಫೋನ್ 6.53-ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಶಕ್ತಿಯನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಫೋನ್‌ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ 9i ಸ್ಪೋರ್ಟ್ ಭಾರತದಲ್ಲಿ 4GB RAM + 64GB ಸ್ಟೋರೇಜ್ ಆಯ್ಕೆಗೆ 8,799ರೂ ಮತ್ತು 4GB RAM + 128GB ಆಯ್ಕೆಗೆ 9,299ರೂ.ಬೆಲೆ ಹೊಂದಿದೆ. ಇನ್ನು ರೆಡ್ಮಿ 9A ಸ್ಪೋರ್ಟ್‌ ಭಾರತದಲ್ಲಿ 2GB RAM + 32GB ಸಂಗ್ರಹಣೆಗಾಗಿ 6,999ರೂ. ಮತ್ತು 3GB RAM + 32GB ಸ್ಟೋರೇಜ್ ಆಯ್ಕೆಗೆ 7,999ರೂ. ಬೆಲೆ ಹೊಂದಿದೆ. ಈ ಎರಡು ಮಾದರಿಯನ್ನು Mi.com ನಲ್ಲಿ ಕಾರ್ಬನ್ ಬ್ಲಾಕ್, ಮೆಟಾಲಿಕ್ ಪರ್ಪಲ್ ಮತ್ತು ಕೋರಲ್ ಗ್ರೀನ್ ಬಣ್ಣ ಆಯ್ಕೆಗಳಲ್ಲಿ ಪಟ್ಟಿ ಮಾಡಲಾಗಿದೆ.

Most Read Articles
Best Mobiles in India

English summary
Redmi 9i Sport and Redmi 9A Sport come in Metallic Sport, Coral Green, and Carbon Black colour options.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X