Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ ಇಂದು Redmi 9i ಸ್ಮಾರ್ಟ್‌ಫೋನ್ ಸೇಲ್‌!

ಶಿಯೋಮಿ ಸಂಸ್ಥೆಯು ಇತ್ತೀಚಿಗೆ ರೆಡ್ಮಿ 9 ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ಅವುಗಳಲ್ಲಿ ರೆಡ್ಮಿ 9i ಸ್ಮಾರ್ಟ್‌ಫೋನ್ ಸಹ ಒಂದಾಗಿದೆ. ಈಗಾಗಲೇ ಆನ್‌ಲೈಣ್‌ ತಾಣಗಳಲ್ಲಿ ಮಾರಾಟ ಕಂಡಿರುವ ಈ ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮತ್ತು ಅಧಿಕೃತ Mi.com ತಾಣಗಳಲ್ಲಿ ಮತ್ತೆ ಸೇಲ್ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 8,299ರೂ.ಗಳು ಆಗಿದೆ.

ಫ್ಲಿಪ್‌ಕಾರ್ಟ್‌

ಫ್ಲಿಪ್‌ಕಾರ್ಟ್‌ ತಾಣದಲ್ಲಿ ರೆಡ್ಮಿ 9i ಸ್ಮಾರ್ಟ್‌ಫೋನ್ ಸೇಲ್‌ ಇಂದು (ಅ.1) ನಡೆಯಲಿದೆ. ಈ ಫೋನ್ 4GB + 64GB ಮತ್ತು 4GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಮಿಡ್‌ ನೈಟ್‌ ಬ್ಲ್ಯಾಕ್, ಸೀ ಬ್ಲೂ, ನೇಚರ್ ಗ್ರೀನ್‌ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ. ಹಾಗೆಯೇ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗಾದರೇ ರೆಡ್ಮಿ 9i ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ರೆಡ್‌ಮಿ 9i ಸ್ಮಾರ್ಟ್‌ಫೋನ್ 6.53-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಎಚ್‌ಡಿ + ರೆಸಲ್ಯೂಶನ್ ಪಡೆದಿದೆ. ಹಾಗೆಯೇ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ರೆಡ್‌ಮಿ 9i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಆಂಡ್ರಾಯ್ಡ್ 10 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ 4GB RAM ಸಾಮರ್ಥ್ಯದ ವೇರಿಯಂಟ್ ಆಯ್ಕೆ ಇದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರೆಡ್‌ಮಿ 9i ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಹಿಂಬದಿಯ ರಿಯರ್ ಕ್ಯಾಮೆರಾವು 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್‌ಮಿ 9i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G VOLTE, ವೈ-ಫೈ, ಬ್ಲೂಟೂತ್ 5.0, GPS, USB-C, ಐಆರ್ ಬ್ಲಾಸ್ಟರ್ ಮತ್ತು 3.5mm ಆಡಿಯೊ ಜ್ಯಾಕ್‌ ಅನ್ನು ಪಡೆದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರೆಡ್‌ಮಿ 9i ಸ್ಮಾರ್ಟ್‌ಫೋನ್ ಆರಂಭಿಕ 4GB RAM ಮತ್ತು 64GB ವೇರಿಯಂಟ್ ಬೆಲೆಯು 8,299ರೂ. ಆಗಿದೆ. ಹಾಗೆಯೇ 4GB + 128GB ವೇರಿಯಂಟ್ ಬೆಲೆಯು 9,299ರೂ.ಗಳು ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇಂದು ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸೇಲ್ ನಡೆಸಲಿದೆ.

Best Mobiles in India

English summary
The Redmi 9i will go on sale today at 12pm via Flipkart, Mi.com, and Mi Home stores.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+