Home
ಸುದ್ದಿಜಾಲ

ರೆಡ್ಮಿ A1 ಫೋನ್‌ ಬೆಲೆಯಲ್ಲಿ ಇಳಿಕೆ!..ಸಸ್ತಾ ಬೆಲೆಗೆ ಖರೀದಿಸಬಹುದು!

ಶಿಯೋಮಿ ಸಂಸ್ಥೆಯ ಇತ್ತೀಚಿನ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿರುವ ರೆಡ್ಮಿ A1 ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಸಖತ್ ಖುಷಿ ಎನಿಸಿದೆ.

ಹೌದು, ಶಿಯೋಮಿಯ ರೆಡ್ಮಿ A1 ಸ್ಮಾರ್ಟ್‌ಫೋನ್‌ ಅಮೆಜಾನ್ ಆನ್‌ಲೈನ್‌ ತಾಣದಲ್ಲಿ ಈಗ 28% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 2GB RAM + 32GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 8,999ರೂ. ಪ್ರೈಸ್‌ ಟ್ಯಾಗ್‌ ಹೊಂದಿದ್ದು, ರಿಯಾಯಿತಿಯಲ್ಲಿ ಇದು 6,499ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಬ್ಯಾಂಕ್ ಆಫರ್‌ ಸಹ ಲಭ್ಯವಾಗಲಿವೆ.

ರೆಡ್ಮಿ A1 ಫೋನ್‌ ಬೆಲೆಯಲ್ಲಿ ಇಳಿಕೆ!..ಸಸ್ತಾ ಬೆಲೆಗೆ ಖರೀದಿಸಬಹುದು!

ಅಂದಹಾಗೆ ಈ ಫೋನ್‌ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದ್ದು, 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಬ್ಲ್ಯಾಕ್‌, ಗ್ರೀನ್‌ ಮತ್ತು ಬ್ಲೂ ಬಣ್ಣಗಳ ಆಯ್ಕೆ ಒಳಗೊಂಡಿದೆ. ಹಾಗಾದರೆ ರೆಡ್ಮಿ A1 ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ A1 ಫೋನ್‌ ಬೆಲೆಯಲ್ಲಿ ಇಳಿಕೆ!..ಸಸ್ತಾ ಬೆಲೆಗೆ ಖರೀದಿಸಬಹುದು!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ರೆಡ್ಮಿ A1 ಸ್ಮಾರ್ಟ್‌ಫೋನ್‌ 1600 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಫುಲ್‌ ಹೆಚ್‌ಡಿ + ಸ್ಕ್ರ್ಯಾಚ್‌ ರೆಸಿಸ್ಟೆನ್ಸ್‌ ಮಾದಿರಯ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, 400 nits ಬ್ರೈಟ್ನೆಸ್‌ ಸಾಮರ್ಥ್ಯ ಪಡೆದಿದೆ. ಡಿಸ್ಪ್ಲೇ ಪ್ಯಾನೆಲ್ ಮುಂಭಾಗದ ಸೆಲ್ಫಿ ಶೂಟರ್ ಅನ್ನು ವಾಟರ್‌ಡ್ರಾಪ್ ನಾಚ್‌ನೊಳಗೆ ಹೊಂದಿದೆ.

ಪ್ರೊಸೆಸರ್‌ ಪವರ್ ಯಾವುದು : ರೆಡ್ಮಿ A1 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಗೋ ಎಡಿಷನ್ ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಸಿಂಗಲ್‌ ವೇರಿಯಂಟ್ ಮಾದರಿಯನ್ನು ಒಳಗೊಂಡಿದ್ದು, 2 GB RAM + 32 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿವೆ.

ಕ್ಯಾಮೆರಾ ರಚನೆ : ರೆಡ್ಮಿ A1 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಸಿಂಗಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಅದು 8 ಮೆಗಾ ಪಿಕ್ಸಲ್‌ ಸಾಮರ್ಥ್ಯದ ಸೆನ್ಸಾರ್ ಒಳಗೊಂಡಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿಗಾಗಿ ಈ ಫೋನ್ 5 ಮೆಗಾ ಪಿಕ್ಸಲ್‌ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳಿ ಇವೆ. ಹಾಗೆಯೇ ಇದು ಪೂರ್ಣ HD ವೀಡಿಯೊವನ್ನು ರೆಕಾರ್ಡ್ ಮಾಡುವ ಸಾಮರ್ಥ್ಯದೊಂದಿಗೆ ಬರುತ್ತದೆ ಎಂದು ಸಂಸ್ಥೆಯು ಹೇಳಿಕೊಂಡಿದೆ.

ರೆಡ್ಮಿ A1 ಫೋನ್‌ ಬೆಲೆಯಲ್ಲಿ ಇಳಿಕೆ!..ಸಸ್ತಾ ಬೆಲೆಗೆ ಖರೀದಿಸಬಹುದು!

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ : ರೆಡ್ಮಿ A1 ಸ್ಮಾರ್ಟ್‌ಫೋನ್‌ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್‌ ಸಹ ಪಡೆದಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಮೈಕ್ರೋ ಯುಎಸ್‌ಬಿ ಪೋರ್ಟ್ ಅನ್ನು ಹೊಂದಿದೆ. ಹ್ಯಾಂಡ್‌ಸೆಟ್ ಮೀಸಲಾದ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ಮ ತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಸಹ ನೀಡುತ್ತದೆ.

ಮೆಮೊರಿ ಮತ್ತು ಲಭ್ಯತೆ : ರೆಡ್ಮಿ A1 ಸ್ಮಾರ್ಟ್‌ಫೋನ್‌ 2 GB RAM + 32 GB ಸ್ಟೋರೇಜ್‌ನ ಸಿಂಗಲ್‌ ವೇರಿಯಂಟ್‌ ಆಯ್ಕೆಯಲ್ಲಿ ಲಭ್ಯ. ಹಾಗೆಯೇ ಇದು ಬ್ಲ್ಯಾಕ್‌, ಗ್ರೀನ್‌ ಮತ್ತು ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಫೋನ್‌ ಅಮೆಜಾನ್‌ ಇ ಕಾಮರ್ಸ್‌ ತಾಣ ಹಾಗೂ ಪ್ರಮುಖ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Redmi A1 available at attractive Discount Price on Amazon: offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+