ಇಂದು ರೆಡ್ಮಿ A1 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌!..ಬೆಲೆ ಜಸ್ಟ್‌ 6,499ರೂ.!

|

ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ A1 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಫಸ್ಟ್ ಸೇಲ್ ಇಂದು ಸಂಜೆ 4 ರಿಂದ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 6,499 ರೂ. ಗಳು ಆಗಿದೆ.

ಚಿಪ್‌ಸೆಟ್‌

ರೆಡ್ಮಿ A1 ಸ್ಮಾರ್ಟ್‌ಫೋನ್‌ ಮೊದಲ ಮಾರಾಟ ಇಂದು (ಸೆಪ್ಟೆಂಬರ್ 9) ನಡೆಯಲಿದೆ. ಈ ಪೋನ್ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಜೊತೆಗೆ ಆಕರ್ಷಕ ಕ್ಯಾಮೆರಾ ಆಯ್ಕೆ ಸಹ ಒಳಗೊಂಡಿದೆ. ಜೊತೆಗೆ ಹಿಂಬದಿಯಲ್ಲಿ ಸಿಂಗಲ್‌ AI ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಅದು 8 ಮೆಗಾ ಪಿಕ್ಸಲ್ ಸೆನ್ಸಾರ್‌ ನಲ್ಲಿದೆ. ಈ ಫೋನಿನ ಡಿಸ್‌ಪ್ಲೇಯು 400 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಬ್ಲ್ಯಾಕ್‌, ಗ್ರೀನ್‌ ಮತ್ತು ಬ್ಲೂ ಬಣ್ಣಗಳ ಆಯ್ಕೆಯನ್ನು ಈ ಫೋನ್‌ ಪಡೆದಿದೆ.

ಮಾದರಿಯಲ್ಲಿ

ಇನ್ನು ಈ ಫೋನ್‌ ಎಂಟ್ರಿ ಲೆವೆಲ್‌ ಮಾದರಿಯಲ್ಲಿ ಕಾಣಿಸಿಕೊಂಡಿದ್ದು, 2 GB RAM + 32 GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಇದು ಡ್ಯುಯಲ್‌ 4G ಸಪೋರ್ಟ್‌ ಒಳಗೊಂಡಿದೆ. ಇದು ಮಿ.ಕಾಮ್‌, ಮಿ.ಹೋಮ್‌, ಅಮೆಜಾನ್‌ ಇ ಕಾಮರ್ಸ್‌ ತಾಣ ಹಾಗೂ ಪ್ರಮುಖ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೇ ರೆಡ್ಮಿ A1 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ A1 ಸ್ಮಾರ್ಟ್‌ಫೋನ್‌ 1600 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಫುಲ್‌ ಹೆಚ್‌ಡಿ + ಸ್ಕ್ರ್ಯಾಚ್‌ ರೆಸಿಸ್ಟೆನ್ಸ್‌ ಮಾದಿರಯ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, 400 nits ಬ್ರೈಟ್ನೆಸ್‌ ಸಾಮರ್ಥ್ಯ ಪಡೆದಿದೆ. ಡಿಸ್ಪ್ಲೇ ಪ್ಯಾನೆಲ್ ಮುಂಭಾಗದ ಸೆಲ್ಫಿ ಶೂಟರ್ ಅನ್ನು ವಾಟರ್‌ಡ್ರಾಪ್ ನಾಚ್‌ನೊಳಗೆ ಹೊಂದಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ರೆಡ್ಮಿ A1 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಗೋ ಎಡಿಷನ್ ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಸಿಂಗಲ್‌ ವೇರಿಯಂಟ್ ಮಾದರಿಯನ್ನು ಒಳಗೊಂಡಿದ್ದು, 2 GB RAM + 32 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿವೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ರೆಡ್ಮಿ A1 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಸಿಂಗಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಅದು 8 ಮೆಗಾ ಪಿಕ್ಸಲ್‌ ಸಾಮರ್ಥ್ಯದ ಸೆನ್ಸಾರ್ ಒಳಗೊಂಡಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿಗಾಗಿ ಈ ಫೋನ್ 5 ಮೆಗಾ ಪಿಕ್ಸಲ್‌ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳಿ ಇವೆ. ಹಾಗೆಯೇ ಇದು ಪೂರ್ಣ HD ವೀಡಿಯೊವನ್ನು ರೆಕಾರ್ಡ್ ಮಾಡುವ ಸಾಮರ್ಥ್ಯದೊಂದಿಗೆ ಬರುತ್ತದೆ ಎಂದು ಸಂಸ್ಥೆಯು ಹೇಳಿಕೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ

ರೆಡ್ಮಿ A1 ಸ್ಮಾರ್ಟ್‌ಫೋನ್‌ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್‌ ಸಹ ಪಡೆದಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಮೈಕ್ರೋ ಯುಎಸ್‌ಬಿ ಪೋರ್ಟ್ ಅನ್ನು ಹೊಂದಿದೆ. ಹ್ಯಾಂಡ್‌ಸೆಟ್ ಮೀಸಲಾದ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ಮ ತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಸಹ ನೀಡುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ A1 ಸ್ಮಾರ್ಟ್‌ಫೋನ್‌ ಅಗ್ಗದ ಪ್ರೈಸ್‌ ಟ್ಯಾಗ್‌ನಲ್ಲಿ ಬಿಡುಗಡೆ ಆಗಿದೆ. ಇದು 2 GB RAM + 32 GB ಸ್ಟೋರೇಜ್‌ನ ಸಿಂಗಲ್‌ ವೇರಿಯಂಟ್‌ ಆಯ್ಕೆಯಲ್ಲಿ ಲಾಂಚ್ ಆಗಿದ್ದು, ಇದರ ಬೆಲೆಯು 6,499 ರೂ. ಗಳಾಗಿವೆ. ಹಾಗೆಯೇ ಇದು ಬ್ಲ್ಯಾಕ್‌, ಗ್ರೀನ್‌ ಮತ್ತು ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಫೋನ್‌ ಇದೇ ಸೆಪ್ಟೆಂಬರ್ 9 ರಿಂದ ಮಿ.ಕಾಮ್‌, ಮಿ.ಹೋಮ್‌, ಅಮೆಜಾನ್‌ ಇ ಕಾಮರ್ಸ್‌ ತಾಣ ಹಾಗೂ ಪ್ರಮುಖ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ..

Best Mobiles in India

English summary
Redmi A1 First Sale Today at 4:00 PM Via Amazon: Price in India, Offers, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X