ಈ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನಿನ ಆಫರ್ ಬೆಲೆಗೆ ಗ್ರಾಹಕರು ಅಚ್ಚರಿ!
ಶಿಯೋಮಿ ಸಂಸ್ಥೆಯು ಬಜೆಟ್ ದರದ ಮೊಬೈಲ್ ಮೂಲಕ ಜನಪ್ರಿಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಸಂಸ್ಥೆಯ ರೆಡ್ಮಿ ಸ್ಮಾರ್ಟ್‌ಫೋನ್‌ಗಳು ಭಿನ್ನ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯ ಇದ್ದು, ಆ ಪೈಕಿ ಎಂಟ್ರಿ ಲೆವೆಲ್ ಫೋನ್ ಆಗಿ ಕಾಣಿಸಿಕೊಂಡಿರುವ ರೆಡ್ಮಿ A1 ಮೊಬೈಲ್ ಇದೀಗ ಏಕಾಏಕಿ ಸಖತ್ ಬೆಲೆ ಇಳಿಕೆ ಪಡಿದೆ.
ಹೌದು, ಫ್ಲಿಪ್‌ಕಾರ್ಟ್ ಆನ್‌ಲೈನ್ ಪ್ಲಾಟ್‌ಫಾರ್ಮ್ ನಲ್ಲಿ ಶಿಯೋಮಿಯ ರೆಡ್ಮಿ A1 ಮೊಬೈಲ್ ಈಗ ಶೇ. 24% ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 2GB RAM + 32GB ಸ್ಟೋರೇಜ್ ವೇರಿಯಂಟ್ ಬೆಲೆಯು 8,999ರೂ. ಪ್ರೈಸ್ ಟ್ಯಾಗ್ ಹೊಂದಿದ್ದು, ಗ್ರಾಹಕರ 6,799ರೂ.ಗಳ ರಿಯಾಯಿತಿ ಬೆಲೆಯಲ್ಲಿ ಕೊಳ್ಳಲು ಅವಕಾಶ ಇದೆ. ಇದರ ಜೊತೆಗೆ ಬ್ಯಾಂಕ್ ಆಫರ್ ಸಹ ಸಿಗಲಿದೆ.

ಇನ್ನು ಈ ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, 5000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಬ್ಲ್ಯಾಕ್, ಗ್ರೀನ್ ಮತ್ತು ಬ್ಲೂ ಬಣ್ಣಗಳ ಆಯ್ಕೆ ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ A1 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಮತ್ತು ವಿನ್ಯಾಸ
ರೆಡ್ಮಿ A1 ಮೊಬೈಲ್ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಫುಲ್ ಹೆಚ್‌ಡಿ + ಸ್ಕ್ರ್ಯಾಚ್ ರೆಸಿಸ್ಟೆನ್ಸ್ ಮಾದಿರಯ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, 400 nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಡಿಸ್‌ಪ್ಲೇ ಪ್ಯಾನೆಲ್ ಮುಂಭಾಗದ ಸೆಲ್ಫಿ ಶೂಟರ್ ಅನ್ನು ವಾಟರ್‌ಡ್ರಾಪ್ ನಾಚ್‌ನೊಳಗೆ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ ಯಾವುದು
ರೆಡ್ಮಿ A1 ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಗೋ ಎಡಿಷನ್ ಓಎಸ್ ಸಪೋರ್ಟ್ ಹೊಂದಿದೆ. ಹಾಗೆಯೇ ಈ ಫೋನ್ ಸಿಂಗಲ್ ವೇರಿಯಂಟ್ ಮಾದರಿಯನ್ನು ಒಳಗೊಂಡಿದ್ದು, 2 GB RAM + 32 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿವೆ.
ಕ್ಯಾಮೆರಾ ಸೌಲಭ್ಯದ ಮಾಹಿತಿ
ರೆಡ್ಮಿ A1 ಮೊಬೈಲ್ ಹಿಂಭಾಗದಲ್ಲಿ ಸಿಂಗಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಅದು 8 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆನ್ಸಾರ್ ಒಳಗೊಂಡಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿಗಾಗಿ ಈ ಫೋನ್ 5 ಮೆಗಾ ಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇದರ ಜೊತೆಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳು ಲಭ್ಯ. ಹಾಗೆಯೇ ಇದು ಪೂರ್ಣ HD ವೀಡಿಯೊವನ್ನು ರೆಕಾರ್ಡ್ ಮಾಡುವ ಸಾಮರ್ಥ್ಯ ದೊಂದಿಗೆ ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ
ರೆಡ್ಮಿ A1 ಮೊಬೈಲ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಮೈಕ್ರೋ ಯುಎಸ್‌ಬಿ ಪೋರ್ಟ್ ಅನ್ನು ಒಳಗೊಂಡಿದೆ. ಹ್ಯಾಂಡ್‌ಸೆಟ್ ಮೀಸಲಾದ ಮೈಕ್ರೊ ಎಸ್‌ಡಿ ಕಾರ್ಡ್ ಸ್ಮಾರ್ಟ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಸಹ ನೀಡುತ್ತದೆ.
ಮೆಮೊರಿ ಆಯ್ಕೆ ಮತ್ತು ಕಲರ್ ಆಯ್ಕೆ
ರೆಡ್ಮಿ A1 ಮೊಬೈಲ್ 2 GB RAM + 32 GB ಸ್ಟೋರೇಜ್‌ನ ಸಿಂಗಲ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಈ ಫೋನ್ ಬ್ಲ್ಯಾಕ್, ಗ್ರೀನ್ ಮತ್ತು ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಖರೀದಿಸಬಹುದು.


Click it and Unblock the Notifications








