ರೆಡ್ಮಿ A1 ಮೊಬೈಲ್‌ಗೆ ಈಗ ಸೂಪರ್ ಆಫರ್!..ಅಗ್ಗದ ಬೆಲೆಗೆ ಖರೀದಿಸಿ!
ಜನಪ್ರಿಯ ಶಿಯೋಮಿ ಕಂಪನಿಯ ಇತ್ತೀಚಿನ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್ ಆಗಿರುವ ರೆಡ್ಮಿ A1 ಮೊಬೈಲ್ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಈ ರಂಟ್ರಿ ಲೆವೆಲ್ ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದ್ದು, ಅಗ್ಗದ ಫೋನ್ ಖರೀದಿಸುವ ಗ್ರಾಹಕರಿಗೆ ಖುಷಿ ನೀಡಿದೆ.
ಹೌದು, ಶಿಯೋಮಿ ಸಂಸ್ಥೆಯ ರೆಡ್ಮಿ A1 ಮೊಬೈಲ್ ಫೋನ್ ಅಮೆಜಾನ್ ಆನ್‌ಲೈನ್ ಪ್ಲಾಟ್‌ಫಾರ್ಮ್ ನಲ್ಲಿ ಈಗ 30% ರಷ್ಟು ಡಿಸ್ಕೌಂಟ್ ಪ್ರೈಸ್ ಟ್ಯಾಗ್‌ನಲ್ಲಿ ಗುರುತಿಸಿಕೊಂಡಿದೆ. ಈ ಮೊಬೈಲ್ 2 GB RAM ಮತ್ತು 32 GB ROM ಆಂತರೀಕ ಸ್ಟೋರೇಜ್ ವೇರಿಯಂಟ್ ಬೆಲೆಯು 8,999ರೂ. ಪ್ರೈಸ್ ಟ್ಯಾಗ್ ಹೊಂದಿದ್ದು, ರಿಯಾಯಿತಿಯಲ್ಲಿ ಇದು 6,299ರೂ. ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಆಯ್ದ ಬ್ಯಾಂಕ್ ಗಳ ಕೊಡುಗೆ ಸಹ ದೊರೆಯುತ್ತದೆ.

ಇದು ಎಂಟ್ರಿ ಲೆವೆಲ್ ಫೋನ್ ಆಗಿದ್ದರೂ, ಕೆಲವು ಫೀಚರ್ಸ್‌ಗಳು ಆಕರ್ಷಕ ಎನಿಸಿವೆ. ಈ ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್ ಪ್ರೊಸೆಸರ್ ಬಲವನ್ನು ಹೊಂದಿದ್ದು, ಜೊತೆಗೆ 5000 mAh ಬ್ಯಾಟರಿ ಬ್ಯಾಕ್‌ಅಪ್ ಪವರ್ ಸಹ ಒಳಗೊಂಡಿದೆ. ಇನ್ನು ಈ ಫೋನ್ ಬ್ಲ್ಯಾಕ್, ಗ್ರೀನ್ ಮತ್ತು ಬ್ಲೂ ಕಲರ್ ಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯ. ಹಾಗಾದರೆ ರೆಡ್ಮಿ A1 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ A1 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ : ರೆಡ್ಮಿ A1 ಸ್ಮಾರ್ಟ್‌ಫೋನ್ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಫುಲ್ ಹೆಚ್‌ಡಿ + ಸ್ಕ್ರ್ಯಾಚ್ ರೆಸಿಸ್ಟೆನ್ಸ್ ಮಾದಿರಯ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, 400 nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಡಿಸ್ಪ್ಲೇ ಪ್ಯಾನೆಲ್ ಮುಂಭಾಗದ ಸೆಲ್ಫಿ ಶೂಟರ್ ಅನ್ನು ವಾಟರ್‌ಡ್ರಾಪ್ ನಾಚ್‌ನೊಳಗೆ ಹೊಂದಿದೆ.
ರೆಡ್ಮಿ A1 ಪ್ರೊಸೆಸರ್ ಬಲ ಮಾಹಿತಿ : ರೆಡ್ಮಿ A1 ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಗೋ ಎಡಿಷನ್ ಓಎಸ್ ಬೆಂಬಲ ಪಡೆದಿದೆ. ಇದರೊಂದಿಗೆ ಈ ಫೋನ್ ಸಿಂಗಲ್ ವೇರಿಯಂಟ್ ಮಾದರಿಯನ್ನು ಒಳಗೊಂಡಿದ್ದು, 2 GB RAM + 32 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
ರೆಡ್ಮಿ A1 ಕ್ಯಾಮೆರಾ ಸೆನ್ಸಾರ್ ಮಾಹಿತಿ : ರೆಡ್ಮಿ A1 ಮೊಬೈಲ್ ಹಿಂಭಾಗದಲ್ಲಿ ಸಿಂಗಲ್ ಕ್ಯಾಮೆರಾ ರಚನೆಯನ್ನು ಪಡೆದಿದೆ. ಅದು 8 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ ಈ ಫೋನ್ 5 ಮೆಗಾ ಪಿಕ್ಸಲ್ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳು ಸಹ ಇವೆ. ಹಾಗೆಯೇ ಇದು ಪೂರ್ಣ ಹೆಚ್‌ಡಿ ವೀಡಿಯೊವನ್ನು ರೆಕಾರ್ಡ್ ಮಾಡುವ ಸಾಮರ್ಥ್ಯದೊಂದಿಗೆ ಲಭ್ಯ.
ರೆಡ್ಮಿ A1 ಬ್ಯಾಟರಿ ಬ್ಯಾಕ್‌ಅಪ್ ಮಾಹಿತಿ : ರೆಡ್ಮಿ A1 ಮೊಬೈಲ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಮೈಕ್ರೋ ಯುಎಸ್‌ಬಿ ಪೋರ್ಟ್ ಅನ್ನು ಹೊಂದಿದೆ. ಹ್ಯಾಂಡ್‌ಸೆಟ್ ಮೀಸಲಾದ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ಮ ತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಸಹ ನೀಡುತ್ತದೆ.
ರೆಡ್ಮಿ A1 ಮೆಮೊರಿ ಮತ್ತು ಲಭ್ಯತೆ : ರೆಡ್ಮಿ A1 ಮೊಬೈಲ್ 2 GB RAM + 32 GB ಆಂತರೀಕ ಸ್ಟೋರೇಜ್‌ನ ಸಿಂಗಲ್ ವೇರಿಯಂಟ್ ಮಾದರಿಯಲ್ಲಿ ಲಭ್ಯ. ಈ ಮೊಬೈಲ್ ಇದು ಬ್ಲ್ಯಾಕ್, ಗ್ರೀನ್ ಮತ್ತು ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ. ಗ್ರಾಹಕರು ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಹಾಗೂ ಪ್ರಮುಖ ರಿಟೇಲ್ ಸ್ಟೋರ್‌ಗಳಲ್ಲಿ ಖರೀದಿಗೆ ಮಾಡಬಹುದು.


Click it and Unblock the Notifications








