Home
ಸುದ್ದಿಜಾಲ

ಇಂದಿನಿಂದ ರೆಡ್ಮಿಯ 'ದೇಶ್‌ ಕಾ ಸ್ಮಾರ್ಟ್‌ಫೋನ್‌' ಖರೀದಿಗೆ ಲಭ್ಯ!..ಅಗ್ಗದ ಬೆಲೆ!

ಜನಪ್ರಿಯ ಶಿಯೋಮಿ ಸಂಸ್ಥೆಯು ನೂತನವಾಗಿ ಪರಿಚಯಿಸಿರುವ ರೆಡ್ಮಿ A2 ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಮೂರು ವೇರಿಯಂಟ್‌ ಆಯ್ಕೆಗಳನ್ನು ಹೊಂದಿದ್ದು, ಆ ಪೈಕಿ 64GB ಫೋನ್‌ ಈಗ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜಾನ್ ಮತ್ತು ಅಧಿಕೃತ Mi.com ವೆಬ್‌ಸೈಟ್‌ಗಳಲ್ಲಿ ಮಾರಾಟ ಸಜ್ಜಾಗಿದೆ. ಬೆಲೆಯು ಆಕರ್ಷಕ ಆಗಿದ್ದು, ಗ್ರಾಹಕರಲ್ಲಿ ಕುತೂಹಲ ಹೆಚ್ಚಿಸಿದೆ.

ಶಿಯೋಮಿ ಸಂಸ್ಥೆಯ ರೆಡ್ಮಿ A2 (Redmi A2 - 64GB) ಸ್ಮಾರ್ಟ್‌ಫೋನ್ ಮಾರಾಟ ಇಂದು (ಜೂನ್ 20 ರಂದು) ಪ್ರಾರಂಭಿಸಿದೆ. ಈ ಫೋನ್ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, 8 ಮೆಗಾ ಪಿಕ್ಸಲ್ ಕ್ಯಾಮೆರಾ ಸೆನ್ಸಾರ್ ಒಳಗೊಂಡಿದೆ. ಇದರೊಂದಿಗೆ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 5000 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ.

ಇಂದಿನಿಂದ ರೆಡ್ಮಿಯ 'ದೇಶ್‌ ಕಾ ಸ್ಮಾರ್ಟ್‌ಫೋನ್‌' ಖರೀದಿಗೆ ಲಭ್ಯ!..ಅಗ್ಗದ ಬೆಲೆ!

ಇನ್ನು ಈ ಅಗ್ಗದ ಫೋನ್‌ ಮೂರು ಭಿನ್ನ ಸ್ಟೋರೇಜ್‌ ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 2GB + 32GB, 2GB + 64GB ಹಾಗೂ 4GB + 64GB ಆಗಿವೆ. ಸದ್ಯ 4GB + 64GB ವೇರಿಯಂಟ್‌ ಸಹ ಖರೀದಿಗೆ ಲಭ್ಯ. ಇನ್ನುಳಿದಂತೆ ರೆಡ್ಮಿ A2 ಮೊಬೈಲ್‌ನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ರೆಡ್ಮಿ A2 ಸರಣಿ ಸ್ಮಾರ್ಟ್‌ಫೋನ್‌ಗಳು ಒಂದೇ ಮಾದರಿಯ ಫೀಚರ್ಸ್‌ಗಳನ್ನು ಹೊಂದಿವೆ. ಅದರಂತೆ ರೆಡ್ಮಿ A2 ಸ್ಮಾರ್ಟ್‌ಫೋನ್‌ 6.52 ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡುತ್ತದೆ.

ಇದು ಮೀಡಿಯಾ ಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಇನ್ನು ಸ್ಮಾರ್ಟ್‌ಫೋನ್‌ 10W ಚಾರ್ಜಿಂಗ್ ಬೆಂಬಲದೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಎಫ್‌ಎಂ ರೇಡಿಯೋ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ. ಇದರೊಂದಿಗೆ ರೆಡ್ಮಿ A2 ಪ್ಲಸ್‌ ಸ್ಮಾರ್ಟ್‌ಫೋನ್‌ ಹೆಚ್ಚುವರಿಯಾಗಿ ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಪಡೆದುಕೊಂಡಿದೆ.

ರೆಡ್ಮಿ A2 ಬೆಲೆ ಮಾಹಿತಿ : ರೆಡ್ಮಿ A2 ಸ್ಮಾರ್ಟ್‌ಫೋನ್‌ 2GB RAM + 32 GB ಸ್ಟೋರೇಜ್‌ ಆಯ್ಕೆಯು 6,299 ರೂ.ಬೆಲೆಯನ್ನು ಹೊಂದಿದೆ. ಇದರ 2GB RAM + 64GB ಸ್ಟೋರೇಜ್‌ ಆಯ್ಕೆಯು 6,799ರೂ. ಬೆಲೆಯನ್ನು ಹೊಂದಿದೆ. ಹಾಗೆಯೇ 4GB RAM + 64GB ಸ್ಟೋರೇಜ್‌ ಆಯ್ಕೆಯು 7,999 ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಆದರೆ ಫಸ್ಟ್‌ ಸೇಲ್‌ನಲ್ಲಿ ವಿಶೇಷ ಆಫರ್‌ ಕೂಡ ಲಭ್ಯವಿದ್ದು ಇವುಗಳ ಬೆಲೆ ಇನ್ನಷ್ಟು ಕಡಿಮೆಯಾಗಲಿದೆ.

ರೆಡ್ಮಿ A1 ಮೊಬೈಲ್‌ ಫೀಚರ್ಸ್‌ : ಈ ಫೋನ್ 1600 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಫುಲ್‌ ಹೆಚ್‌ಡಿ + ಸ್ಕ್ರ್ಯಾಚ್‌ ರೆಸಿಸ್ಟೆನ್ಸ್‌ ಮಾದಿರಯ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ.

ಜೊತೆಗೆ ಸಿಂಗಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಅದು 8 ಮೆಗಾ ಪಿಕ್ಸಲ್‌ ಸಾಮರ್ಥ್ಯದ ಸೆನ್ಸಾರ್ ಒಳಗೊಂಡಿದೆ. ಮುಂಭಾಗದಲ್ಲಿ ಸೆಲ್ಫಿಗಾಗಿ ಈ ಫೋನ್ 5 ಮೆಗಾ ಪಿಕ್ಸಲ್‌ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳಿ ಇವೆ. ಅಲ್ಲದೇ ಇದು ಸ್ಮಾರ್ಟ್‌ಫೋನ್‌ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್‌ ಸಹ ಪಡೆದಿದೆ.

Best Mobiles in India

English summary
Redmi A2 64GB Storage Variant Sale in India for Today: Check Price, offer and Specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+