ಅಗ್ಗದ ಈ ರೆಡ್ಮಿ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಬಿಗ್ ಬ್ಯಾಟರಿ ಇದೆ!
ಪ್ರಮುಖ ಮೊಬೈಲ್ ಸಂಸ್ಥೆಗಳಲ್ಲಿ ಒಂದಾದ ಶಿಯೋಮಿ ಸಂಸ್ಥೆಯ ಇತ್ತೀಚಿನ ರೆಡ್ಮಿ A2 ಫೋನ್ ಎಂಟ್ರಿ ಲೆವೆಲ್ ಮಾದರಿಯ ಮೊಬೈಲ್ ಆಗಿದ್ದು, ತನ್ನ ವರ್ಗದಲ್ಲಿಯೇ ಆಕರ್ಷಕ ಫೀಚರ್ಸ್ ಒಳಗೊಂಡಿದೆ. ಈ ಮೊಬೈಲ್ ಅಮೆಜಾನ ಪ್ಲಾಟ್‌ಫಾರ್ಮ್ ನಲ್ಲಿ ಈಗ ಭಾರೀ ಡಿಸ್ಕೌಂಟ್ ಪಡೆದುಕೊಂಡಿದ್ದು, ಮತ್ತಷ್ಟು ಆಕರ್ಷಣೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ 5,000 mAh ಬ್ಯಾಟರಿ ಸೌಲಭ್ಯ ಹೊಂದಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ನಲ್ಲಿ ಶಿಯೋಮಿಯ ರೆಡ್ಮಿ A2 ಮೊಬೈಲ್ ಶೇ. 32% ರಷ್ಟು ರಿಯಾಯಿತಿ ಪಡೆದಿದೆ. 2GB RAM + 64GB ವೇರಿಯಂಟ್ ಬೆಲೆಯ 9,999ರೂ. ಆಗಿದ್ದು, ಸದ್ಯ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ಆಫರ್‌ನಲ್ಲಿ ಈ ಮೊಬೈಲ್ ಅನ್ನು 6,799ರೂ. ಗಳಿಗೆ ಖರೀದಿ ಮಾಡಲು ಅವಕಾಶ ಇದೆ.

ಇನ್ನು ರೆಡ್ಮಿ A2 ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಪಡೆದಿದ್ದು, ಹಿಂಭಾಗದಲ್ಲಿ ಇದು ಸಿಂಗಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿರುವುದು ಪ್ಲಸ್ ಪಾಯಿಂಟ್ ಆಗಿ ಕಾಣಿಸಿಕೊಂಡಿದೆ. ಹಾಗಾದರೆ ರೆಡ್ಮಿ A2 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ A2 ಡಿಸ್‌ಪ್ಲೇ ಫೀಚರ್ಸ್ ಹೀಗಿವೆ :
ರೆಡ್ಮಿ A2 ಮೊಬೈಲ್ 6.52 ಇಂಚಿನ IPS LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದರೊಂದಿಗೆ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡುತ್ತದೆ.
ರೆಡ್ಮಿ A2 ಪ್ರೊಸೆಸರ್ ಪವರ್ ಹೀಗಿದೆ :
ರೆಡ್ಮಿ A2 ಫೋನ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, ಜೊತೆಗೆ 4GB RAM ಮತ್ತು 64GB ಆಂತರೀಕ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡುತ್ತದೆ. ಇನ್ನು ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಿದೆ.
ರೆಡ್ಮಿ A2 ಬ್ಯಾಟರಿ ಫೀಚರ್ಸ್ ಹೀಗಿದೆ :
ರೆಡ್ಮಿ A2 ಮೊಬೈಲ್ 10W ಚಾರ್ಜಿಂಗ್ ಸಪೋರ್ಟ್ ಪಡೆದಿದ್ದು, ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈ-ಫೈ, ಬ್ಲೂಟೂತ್, ಎಫ್‌ಎಂ ರೇಡಿಯೋ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಕೂಡಾ ಪಡೆದಿದೆ. ಇದರೊಂದಿಗೆ ರೆಡ್ಮಿ A2 ಪ್ಲಸ್ ಸ್ಮಾರ್ಟ್‌ಫೋನ್ ಹೆಚ್ಚುವರಿಯಾಗಿ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.
ರೆಡ್ಮಿ A1 ಮೊಬೈಲ್ ಫೀಚರ್ಸ್ ಹೀಗಿವೆ :
ರೆಡ್ಮಿ A1 ಫೋನ್ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಫುಲ್ ಹೆಚ್‌ಡಿ + ಸ್ಕ್ರ್ಯಾಚ್ ರೆಸಿಸ್ಟೆನ್ಸ್ ಮಾದಿರಯ ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಅಲ್ಲದೇ ಇದು ಸಿಂಗಲ್ ಕ್ಯಾಮೆರಾ ರಚನೆ ಹೊಂದಿದ್ದು,, ಅದು 8 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆನ್ಸಾರ್ ಒಳಗೊಂಡಿದೆ.


Click it and Unblock the Notifications








