ಶಿಯೋಮಿಯ ಈ ಅಗ್ಗದ ಮೊಬೈಲ್‌ಗೆ ಈಗ 30% ರಿಯಾಯಿತಿ!
ಶಿಯೋಮಿ ಸಂಸ್ಥೆಯ ರೆಡ್ಮಿ A2 ಫೋನ್ ಎಂಟ್ರಿ ಲೆವೆಲ್ ಮಾದರಿಯ ಸ್ಮಾರ್ಟ್‌ಫೋನ್ ಆಗಿದ್ದು, ತನ್ನ ವರ್ಗದಲ್ಲಿಯೇ ಆಕರ್ಷಕ ಫೀಚರ್ಸ್ ಪಡೆದಿದೆ. ಈ ಫೋನ್ ಅಮೆಜಾನ ಇ ಕಾಮರ್ಸ್ ನಲ್ಲಿ ಈಗ ಭಾರೀ ರಿಯಾಯಿತಿ ಪಡೆದಿದ್ದು, ಹೆಚ್ಚಿನ ಆಕರ್ಷಣೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದುಕೊಂಡಿದೆ.
ಹೌದು, ಜನಪ್ರಿಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಶಿಯೋಮಿ ಕಂಪನಿಯ ರೆಡ್ಮಿ A2 ಮೊಬೈಲ್ ಶೇ. 30% ರಷ್ಟು ಡಿಸ್ಕೌಂಟ್ ಪಡೆದಿದೆ. ಇದರ ಆರಂಭಿಕ ವೇರಿಯಂಟ್ ಬೆಲೆಯ 8,999ರೂ. ಇದ್ದು, ಆದರೆ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಈ ಫೋನ್ ಅನ್ನು 6,299ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಅಂದಹಾಗೆ ರೆಡ್ಮಿ A2 ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ, ಜೊತೆಗೆ ಸಿಂಗಲ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ A2 ಮೊಬೈಲ್ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ A2 ಸ್ಮಾರ್ಟ್‌ಫೋನ್ 6.52 ಇಂಚಿನ IPS LCD ಡಿಸ್‌ಪ್ಲೇ ಪಡೆದಿದೆ. ಇನ್ನು ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಪಡೆದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದರೊಂದಿಗೆ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಒದಗಿಸುತ್ತದೆ.
ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ಹೊಂದಿದೆ. ಇನ್ನು ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಿದೆ.
ಇನ್ನು ಮೊಬೈಲ್ 10W ಚಾರ್ಜಿಂಗ್ ಸಪೋರ್ಟ್ ನೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಎಫ್‌ಎಂ ರೇಡಿಯೋ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ. ಇದರೊಂದಿಗೆ ರೆಡ್ಮಿ A2 ಪ್ಲಸ್ ಸ್ಮಾರ್ಟ್‌ಫೋನ್ ಹೆಚ್ಚುವರಿಯಾಗಿ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.
ರೆಡ್ಮಿ A1 ಮೊಬೈಲ್ ಫೀಚರ್ಸ್ : ಈ ಫೋನ್ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಫುಲ್ ಹೆಚ್‌ಡಿ + ಸ್ಕ್ರ್ಯಾಚ್ ರೆಸಿಸ್ಟೆನ್ಸ್ ಮಾದಿರಯ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ.
ಅಲ್ಲದೇ ಇದು ಸಿಂಗಲ್ ಕ್ಯಾಮೆರಾ ರಚನೆ ಹೊಂದಿದ್ದು,, ಅದು 8 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆನ್ಸಾರ್ ಒಳಗೊಂಡಿದೆ. ಸೆಲ್ಫಿಗಾಗಿ ಈ ಫೋನ್ 5 ಮೆಗಾ ಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳಿ ಇವೆ. ಅಲ್ಲದೇ ಇದು ಸ್ಮಾರ್ಟ್‌ಫೋನ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್ ಸಹ ಹೊಂದಿದೆ.


Click it and Unblock the Notifications








