ಅಂತೂ ಈ ಅಗ್ಗದ ಫೋನ್ ಬಿಡುಗಡೆಗೆ ದಿನಾಂಕ ಫಿಕ್ಸ್ ಆಯ್ತು!..ಬೆಲೆ ಎಷ್ಟು?
ಶಿಯೋಮಿ ಭಾರತದಲ್ಲಿ ಹೊಸ ಬಜೆಟ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಅದುವೇ ರೆಡ್ಮಿ A2 ಆಗಿದ್ದು, ಈ ಫೋನ್ ಇದೇ ಮೇ 19 ರಂದು ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಎಂದು ಸಂಸ್ಥೆಯು ಟ್ವಿಟರ್ ನಲ್ಲಿ ಘೋಷಿಸಿತು. ಈ ಫೋನ್ ಯುರೋಪ್‌ನಲ್ಲಿ ಈಗಾಗಲೇ ಲಾಂಚ್ ಆಗಿದೆ.
ಹೌದು, ಪ್ರಮುಖ ಸ್ಮಾರ್ಟ್‌ಫೋನ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ರೆಡ್ಮಿ ಕಂಪೆನಿಯು ರೆಡ್ಮಿ A2 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿ ದಿನಾಂಕ ನಿಗದಿ ಮಾಡಿದೆ. ಈ ಫೋನ್ ಮೀಡಿಯಾ ಟೆಕ್ ಹೆಲಿಯೊ G36 ಪ್ರೊಸೆಸರ್ ಅನ್ನು ಒಳಗೊಂಡಿದ್ದು, 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಈ ಫೋನ್ ಕಪ್ಪು, ನೀಲಿ ಮತ್ತು ಹಸಿರಿನ ಮೂರು ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಇದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ನ ಆಯ್ಕೆ ಪಡೆದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 5 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಹಾಗಾದರೆ ರೆಡ್ಮಿ A2 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ A2 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ : ರೆಡ್ಮಿ A2 ಸ್ಮಾರ್ಟ್‌ಫೋನ್ 6.52 ಇಂಚಿನ ಹೆಚ್‌ಡಿ+ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿರಲಿದ್ದು, ಇದು 1600 x 720 ಪಿಕ್ಸೆಲ್ ರೆಸಲ್ಯೂಶನ್ ನೀಡಲಿದೆ ಎನ್ನಲಾಗಿದೆ. ಜೊತೆಗೆ ಕ್ಯಾಮೆರಾ ಉದ್ದೇಶಕ್ಕಾಗಿ ಡಿಸ್‌ಪ್ಲೇಯು ವಾಟರ್ ಡ್ರಾಪ್ ನಾಚ್ ಶೈಲಿಯಲ್ಲಿ ಕಂಡುಬರಲಿದೆ.

ರೆಡ್ಮಿ A2 ಸ್ಮಾರ್ಟ್‌ಫೋನ್ ಪ್ರೊಸೆಸರ್ ಬಲ : ರೆಡ್ಮಿ A2 ಸ್ಮಾರ್ಟ್‌ಫೋನ್ ಹಿಲಿಯೋ G36 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ ಎನ್ನಲಾಗಿದ್ದು, 2 GB RAM ಹಾಗೂ 32 GB ಇಂಟರ್ನಲ್ ಸ್ಟೋರೇಜ್‌ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ. ಜೊತೆಗೆ ಎಸ್‌ಡಿ ಕಾರ್ಡ್ ಸ್ಲಾಟ್ ಆಯ್ಕೆ ಸಹ ಇರಲಿದ್ದು ಈ ಮೂಲಕ ಗ್ರಾಹಕರು 512GB ವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಣೆ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎನ್ನುವ ಮಾತುಗಳು ದೃಢವಾಗಿವೆ.
ರೆಡ್ಮಿ A2 ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆನ್ಸಾರ್ : ರೆಡ್ಮಿ A2 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ರಚನೆ ಪಡೆದಿರಲಿದೆ ಎನ್ನಲಾಗಿದ್ದು, ಅದರಲ್ಲಿ ಪ್ರಮುಖವಾಗಿ 8 ಮೆಗಾ ಪಿಕ್ಸೆಲ್‌ನ ಪ್ರಮುಖ ಕ್ಯಾಮೆರಾ ಹಾಗೂ 2 ಮೆಗಾ ಪಿಕ್ಸೆಲ್‌ನ ಡೆಪ್ತ್ ಸೆನ್ಸರ್ ಆಯ್ಕೆಯಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾಗಿದೆ. ಜೊತೆಗೆ ಸಲ್ಫಿಗಾಗಿ ಈ ಫೋನ್ 5 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆಯನ್ನು ಪಡೆದಿರಲಿದೆ ಎಂದು ತಿಳಿದುಬಂದಿದೆ.
ರೆಡ್ಮಿ A2 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ : ರೆಡ್ಮಿ A2 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆಯನ್ನು ಹೊಂದಿರಲಿದ್ದು, ಇದು 10W ಚಾರ್ಜಿಂಗ್ ಬೆಂಬಲ ಪಡೆದುಕೊಂಡಿರಲಿದೆ. ಇನ್ನುಳಿದಂತೆ ಈ ಫೋನ್ ಸಿಂಗಲ್ ಸ್ಪೀಕರ್, 3.5mm ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ ಆವೃತ್ತಿ v5.0 ಹಾಗೂ ಡ್ಯುಯಲ್ ಸಿಮ್ ಕಾರ್ಡ್ ಸ್ಲಾಟ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರೊಂದಿಗೆ ಯುರೋಪ್‌ನಲ್ಲಿ ಕಪ್ಪು, ನೀಲಿ ಮತ್ತು ಹಸಿರಿನ ಮೂರು ಬಣ್ಣದ ಆಯ್ಕೆಗಳಲ್ಲಿ ಕಾಣಿಸಿಕೊಳ್ಳಲಿದೆ.
ರೆಡ್ಮಿ A2 ಸ್ಮಾರ್ಟ್‌ಫೋನ್ ನಿರೀಕ್ಷಿತ ಬೆಲೆ : ರೆಡ್ಮಿ A2 ಸ್ಮಾರ್ಟ್‌ಫೋನ್ ಇದೇ ಮೇ 19 ರಂದು ಬಿಡುಗಡೆ ಆಗಲಿದೆ. ಈ ಫೋನ್ 2GB RAM ಹಾಗೂ 32GB ವೇರಿಯಂಟ್ ಆಯ್ಕೆ ಪಡೆದಿದ್ದು, ಬೆಲೆಯು 8,000 ರೂ. ಗಳ ಆಸುಪಾಸಿನ ಬೆಲೆ ಹೊಂದಿರಬಹುದು ಎಂದು ಊಹಿಸಲಾಗಿದೆ.


Click it and Unblock the Notifications








