128 GB ಸ್ಟೋರೇಜ್ ಆಯ್ಕೆಯ ಈ ಫೋನ್ ಕೇವಲ ಏಳು ಸಾವಿರಕ್ಕೆ ಲಭ್ಯ!
ರೆಡ್ಮಿ ಸ್ಮಾರ್ಟ್‌ಫೋನ್‌ಗಳು (Redmi smartphones) ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡಿವೆ. ಅದರಲ್ಲೂ ಜಜೆಟ್ ಬೆಲೆಯ ರೆಡ್ಮಿ ಫೋನ್‌ಗಳಿಗೆ ವಿಶೇಷ ಬೇಡಿಕೆ ಇದ್ದು, ಇದರೊಂದಿಗೆ ಈಗ ಬಜೆಟ್ ಬಲೆಯ ರೆಡ್ಮಿ ಫೋನ್‌ಗೆ ಪ್ರಮುಖ ಇ ಕಾಮರ್ಸ್ ಸೈಟ್‌ನಲ್ಲಿ ಆಫರ್ ನೀಡಲಾಗಿದೆ. ಈ ಮೂಲಕ ಏಳು ಸಾವಿರಕ್ಕಿಂತ ಕಡಿಮೆ ಬೆಲೆಗೆ ಈ ಫೋನ್ ಖರೀದಿ ಮಾಡಬಹುದಾಗಿದೆ.
ಹೌದು, ರೆಡ್ಮಿ A2+ ಸ್ಮಾರ್ಟ್‌ಫೋನ್‌ಗೆ (Redmi A2+ smartphone) ಇದೀಗ ಭರ್ಜರಿ ಆಫರ್ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 128 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, ಈ ಸ್ಟೋರೇಜ್ ಅನ್ನು ವಿಸ್ತರಣೆ ಮಾಡಲು ಸಹ ಅನುವು ಮಾಡಿಕೊಡಲಾಗಿದೆ. ಜೊತೆಗೆ ಈ ಫೋನ್ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಆಫರ್ ಬೆಲೆ ವಿವರ ಎಷ್ಟು ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ರೆಡ್ಮಿ A2+ ಸ್ಮಾರ್ಟ್‌ಫೋನ್ ಆಫರ್ ವಿವರ : ಈ ಫೋನ್ 12,499 ರೂ.ಗಳ ಆಫರ್ ಬೆಲೆ ಹೊಂದಿದ್ದು, ನೀವೀಗ ಇದನ್ನು 7,450 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಪ್ರಮುಖ ಇ-ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್‌ನಲ್ಲಿ (Flipkart) ಈ ಫೋನ್‌ಗೆ 40% ರಿಯಾಯಿತಿ ಘೋಷಣೆ ಮಾಡಲಾಗಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್ ಆಫರ್ ಬಳಕೆ ಮಾಡಿಕೊಂಡು ಏಳುಸಾವಿರಕ್ಕಿಂತಲೂ ಕಡಿಮೆ ಬೆಲೆಗೆ ಈ ಫೋನ್ ಖರೀದಿ ಮಾಡಬಹುದಾಗಿದೆ.
ಈ ಫೋನ್ ಖರೀದಿ ವೇಳೆ ಐಡಿಎಫ್‌ಸಿ ಮೊದಲ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಒನ್‌ಕಾರ್ಡ್ ಕ್ರೆಡಿಟ್ ಕಾರ್ಡ್ ವ್ಯವಹಾರದ ಮೇಲೆ ಹೆಚ್ಚುವರಿ 750 ರೂ.ಗಳ ರಿಯಾಯಿತಿ, ಒನ್‌ಕಾರ್ಡ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ ಬ್ಯಾಂಕ್ ಆಫರ್, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 5% ಕ್ಯಾಶ್‌ಬ್ಯಾಕ್ ಸಿಗಲಿದೆ. ಈ ಮೂಲಕ ಭರ್ಜರಿ ಆಫರ್ ನೊಂದಿಗೆ ಈ ಬಜೆಟ್ ಬೆಲೆಯ ಫೋನ್ ಖರೀದಿ ಮಾಡಬಹುದಾಗಿದೆ.

ರೆಡ್ಮಿ A2+ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.52 ಇಂಚಿನ HD +IPS ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಇದು 400 ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಮೂಲಕ ಉತ್ತಮ ಎನಿಸಿದೆ. ಜೊತೆಗೆ ವಿಡಿಯೋ ವೀಕ್ಷಣೆಯಲ್ಲಿ ಹಾಗೂ ಗೇಮ್ ಆಡುವಾಗ ಅತ್ಯುತ್ತಮ ಅನುಭವ ಸಿಗಲಿದೆ. ಎಲ್ಲಕ್ಕಿಂತ ಮಿಗಿಲಾಗಿ ಈ ಡಿಸ್‌ಪ್ಲೇ ಸ್ಕ್ರಾಚ್ ರೆಸಿಸ್ಟೆಂಟ್ ಡಿಸ್ಪ್ಲೇ ಆಯ್ಕೆ ಪಡೆದಿದೆ.
ರೆಡ್ಮಿ A2+ ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಮೀಡಿಯಾಟೆಕ್ ಹಿಲಿಯೊ G36 (12 nm) ಪ್ರೊಸೆಸರ್ ಬಲ ಪಡೆದಿದ್ದು, ಆಂಡ್ರಾಯ್ಡ್ 12 ಓಎಸ್ ಅನ್ನು ರನ್ ಮಾಡಲಿದೆ. ಇದರೊಂದಿಗೆ ಪವರ್‌ವಿಆರ್ GE8320 ಗ್ರಾಫಿಕ್ಸ್ ಕಾರ್ಡ್ ಹೊಂದಿದ್ದು, ಈ ಮೂಲಕ ಸುಗಮವಾಗಿ ಕಾರ್ಯನಿರ್ವಹಣೆ ಮಾಡಲಿದೆ. ಜೊತೆಗೆ ಆಫರ್ ಬೆಲೆಯಲ್ಲಿ ಲಭ್ಯ ಇರುವ ಫೋನ್ 128 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, 4 GB RAM ಬಲ ಪಡೆದಿದೆ. ಅದಾಗ್ಯೂ ನೀವು ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಂಡು ಇನ್ನೂ ಹೆಚ್ಚಿನ ಸ್ಟೋರೇಜ್ ಸೌಲಭ್ಯ ಪಡೆಯಬಹುದಾಗಿದೆ.

ರೆಡ್ಮಿ A2+ ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್ ರಿಯರ್ ಹಾಗೂ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ 8 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 0.08 ಮೆಗಾಪಿಕ್ಸೆಲ್ ಆಕ್ಸಿಲಿಯರಿ ಲೆನ್ಸ್ ಹೊಂದಿದೆ. ಈ ಸೆನ್ಸರ್‌ಗಳು ಡ್ಯುಯಲ್ ಎಲ್ಇಡಿ ಫ್ಲ್ಯಾಶ್, ಎಚ್‌ಡಿಆರ್ ಫೀಚರ್ಸ್ ಆಯ್ಕೆ ಪಡೆದಿದೆ. ಇದರೊಂದಿಗೆ ಡ್ಯುಯಲ್ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಪಡೆದಿದೆ.
ರೆಡ್ಮಿ A2+ ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 10W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ವೈ ಫೈ 802.11 a/b/g/n, ಬ್ಲೂಟೂತ್ ಆವೃತ್ತಿ 5.0, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, ಎಫ್‌ಎಮ್ ರೇಡಿಯೋ ಸೇರಿದಂತೆ ಅನೇಕ ಆಕರ್ಷಕ ಫೀಚರ್ಸ್ ಅನ್ನು ಈ ಫೋನ್ ಪಡೆದಿದೆ.


Click it and Unblock the Notifications








