Home
ಸುದ್ದಿಜಾಲ

ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್‌ ಬೆಲೆ ತಿಳಿದ್ರೆ, ನೀವು ವಾವ್‌ ಅಂತೀರಾ!

ಜನಪ್ರಿಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೊಬೈಲ್‌ಗಳಿಗೆ ಬೊಂಬಾಟ್‌ ರಿಯಾಯಿತಿ ನೀಡುವ ಮೂಲಕ ಗ್ರಾಹಕರ ಗಮನ ಸೆಳೆಯುತ್ತದೆ. ಸದ್ಯ ಈ ಪ್ಲಾಟ್‌ಫಾರ್ಮ್ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡಿದೆ. ಆ ಪೈಕಿ ಎಂಟ್ರಿ ಲೆವೆಲ್‌ ಮಾದರಿಯ ರೆಡ್ಮಿ A2 ಮೊಬೈಲ್‌ ಸಹ ಸಖತ್ ಆಫರ್‌ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ ನಲ್ಲಿ ರೆಡ್ಮಿ A2 ಮೊಬೈಲ್‌ ಶೇ. 36% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಇದರ 2 GB RAM + 64 GB ಸ್ಟೋರೇಜ್ ವೇರಿಯಂಟ್‌ 6,399ರೂ. ಗಳ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಜೊತೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್‌ ಕೊಡುಗೆ ಪಡೆದುಕೊಂಡರೆ ಈ ಫೋನ್‌ ಅನ್ನು ಮತ್ತಷ್ಟು ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು.

ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್‌ ಬೆಲೆ ತಿಳಿದ್ರೆ, ನೀವು ವಾವ್‌ ಅಂತೀರಾ!

ಇನ್ನು ರೆಡ್ಮಿ A2 ಫೋನ್ ಮೀಡಿಯಾ ಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಪವರ್ ಹೊಂದಿದ್ದು, ಹಿಂಭಾಗದಲ್ಲಿ ಇದು ಸಿಂಗಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ A2 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ರೆಡ್ಮಿ A2 ಫೋನ್‌ 6.52 ಇಂಚಿನ IPS LCD ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಪಡೆದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡುತ್ತದೆ.

ಪ್ರೊಸೆಸರ್‌ ಮತ್ತು ಕ್ಯಾಮೆರಾ

ರೆಡ್ಮಿ A2 ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ಮಾಡಲಿದ್ದು, ಇದರ ಜೊತೆಗೆ 2 GB RAM + 64 GB ಹಾಗೂ 4GB RAM ಮತ್ತು 64GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ಹೆಚ್ಚಿಗೆ ಮಾಡಲು ಅವಕಾಶವನ್ನು ಕೂಡ ನೀಡಲಾಗಿದೆ.

ಅಂದಹಾಗೆ ಈ ಎಂಟ್ರಿ ಲೆವೆಲ್‌ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌

ರೆಡ್ಮಿ A2 ಮೊಬೈಲ್‌ 10W ಚಾರ್ಜಿಂಗ್ ಸಪೋರ್ಟ್‌ ಹೊಂದಿದ್ದು, ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈ-ಫೈ, ಬ್ಲೂಟೂತ್, ಎಫ್‌ಎಂ ರೇಡಿಯೋ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಕೂಡಾ ಪಡೆದಿದೆ. ಇದರೊಂದಿಗೆ ರೆಡ್ಮಿ A2 ಪ್ಲಸ್‌ ಸ್ಮಾರ್ಟ್‌ಫೋನ್‌ ಹೆಚ್ಚುವರಿಯಾಗಿ ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಪಡೆದುಕೊಂಡಿದೆ.

ಕಲರ್‌ ಆಯ್ಕೆ

ರೆಡ್ಮಿ A2 ಮೊಬೈಲ್‌ ಮೂರು ವೇರಿಯಂಟ್‌ ಮಾಡೆಲ್‌ಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಅವುಗಳು ಕ್ರಮವಾಗಿ 2GB + 32GB, 2GB + 64GB ಹಾಗೂ 4GB RAM + 64GB ಸ್ಟೋರೇಜ್ ವೇರಿಯಂಟ್‌ ಸಾಮರ್ಥ್ಯದಲ್ಲಿ ಇವೆ. ಇನ್ನು ಗ್ರಾಹಕರು ಈ ಫೋನ್‌ ಬ್ಲ್ಯಾಕ್‌, ಬ್ಲೂ, ಗ್ರೀನ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಮಾಡಬಹುದು.

Best Mobiles in India

English summary
Redmi A2 received Massive price cut in flipkart. price, color, offer and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+