Home
ಸುದ್ದಿಜಾಲ

1 TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್‌ ಆಯ್ಕೆಯ ಫೋನ್‌ 5,499ರೂ.ಗೆ ಲಭ್ಯ!

ಬಜೆಟ್‌ ಬೆಲೆಯಲ್ಲಿ ಸಾಕಷ್ಟು ಸ್ಮಾರ್ಟ್‌ಫೋನ್‌ಗಳಿವೆ. ಆದರೆ ಅವು ಸೀಮಿತ ಫೀಚರ್ಸ್‌ ಹೊಂದಿರ ಪರಿಣಾಮ ಬಳಕೆದಾರರಿಗೆ ಹೆಚ್ಚಿನ ಅನುಕೂಲ ಸಿಗುವುದಿಲ್ಲ. ಆದರೆ, ಈ ಬಜೆಟ್‌ ಬೆಲೆಯ ರೆಡ್ಮಿ ಫೋನ್‌ (Redmi phone) ಬರೋಬ್ಬರಿ 1 TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್‌ ಆಯ್ಕೆ ಹೊಂದಿದೆ.

ಹೌದು, ರೆಡ್ಮಿ ಫೋನ್‌ಗಳ ವಿಭಾಗದಲ್ಲಿ ಬಜೆಟ್‌ ಬೆಲೆಯಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರೆಡ್ಮಿ A2 ಸ್ಮಾರ್ಟ್‌ಫೋನ್‌ (Redmi A2 smartphone) ಇದೀಗ ಭಾರೀ ಕಡಿಮೆ ಬೆಲೆಗೆ ಲಭ್ಯ ಇದೆ. ಈ ಫೋನ್ 8 ಮೆಗಾಪಿಕ್ಸೆಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಮೂಲಕ ಉತ್ತಮ ಬ್ಯಾಕಪ್‌ ನೀಡಲಿದೆ. ಹಾಗಿದ್ರೆ, ಈ ಫೋನ್‌ನ ಮೂಲ ದರ ಎಷ್ಟು?, ಇತರೆ ಆಫರ್ ಏನಿವೆ?, ಫೀಚರ್ಸ್‌ ಏನು ಅನ್ನೋದನ್ನು ಇಲ್ಲಿ ತಿಳಿಸಿಕೊಡಲಾಗಿದೆ ನೋಡಿ.

1 TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್‌ ಆಯ್ಕೆಯ ಫೋನ್‌ 5,499ರೂ.ಗೆ ಲಭ್ಯ!

ರೆಡ್ಮಿ A2 ಸ್ಮಾರ್ಟ್‌ಫೋನ್‌ ಆಫರ್ ವಿವರ: ಈ ಸ್ಮಾರ್ಟ್‌ಫೋನ್ 9,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು ಫ್ಲಿಪ್‌ಕಾರ್ಟ್‌ನಲ್ಲಿ (Flipkart) 5,499 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಈ ಮೂಲಕ 4500 ರೂ.ಗಳಿಗೂ ಅಧಿಕ ಹಣ ಉಳಿತಾಯ ಮಾಡಬಹುದಾಗಿದೆ. ಇದರೊಂದಿಗೆ ನೀವು ಕೆಲವು ಬ್ಯಾಂಕ್‌ ಕಾರ್ಡ್ ಬಳಕೆ ಮಾಡುವ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್‌ ಖರೀದಿ ಮಾಡಬಹುದು.

ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಂಕ್‌ಕಾರ್ಡ್‌ ಬಳಕೆ ಮಾಡಿಕೊಂಡು ಈ ಫೋನ್ ಖರೀದಿ ಮಾಡಿದ್ರೆ 5% ಕ್ಯಾಶ್‌ಬ್ಯಾಕ್ ಸಿಗಲಿದೆ. ಇದರೊಂದಿಗೆ ತಿಂಗಳಿಗೆ ನೀವು 341 ರೂ.ಗಳನ್ನು ಪಾವತಿ ಮಾಡುವ ಮೂಲಕ ಇದನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಮೂಲಕ ಕಡಿಮೆ ಹಣದಲ್ಲಿ ಉತ್ತಮ ಫೋನ್‌ ಅನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಹಾಗಿದ್ರೆ ಈ ಫೋನ್‌ನ ಫೀಚರ್ಸ್‌ ಕಡೆಯೂ ಒಮ್ಮೆ ಕಣ್ಣಾಯಿಸೋಣ ಬನ್ನಿ.

1 TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್‌ ಆಯ್ಕೆಯ ಫೋನ್‌ 5,499ರೂ.ಗೆ ಲಭ್ಯ!

ರೆಡ್ಮಿ A2 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.52 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, 720 x 1600 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ ಉತ್ತಮ ವೀಕ್ಷಣೆ ಅನುಭವ ನೀಡಲಿದೆ. ಇದರೊಂದಿಗೆ 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಹಾಗೂ 20:9 ಅನುಪಾತ ಮತ್ತು 269 ppi ಸಾಂದ್ರತೆ ಮೂಲಕ ಈ ಬೆಲೆಯಲ್ಲಿ ಉತ್ತಮ ಎನಿಸಿಕೊಂಡಿದೆ.

ರೆಡ್ಮಿ A2 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ವಿವರ: ಈ ಫೋನ್ ಮೀಡಿಯಾಟೆಕ್ ಹಿಲಿಯೊ G36 (12 nm) ಪ್ರೊಸೆಸರ್ ಬಲ ಪಡೆದಿದ್ದು, ಆಂಡ್ರಾಯ್ಡ್ 12 ಅಥವಾ 13 (ಗೋ ಆವೃತ್ತಿ) ಓಎಸ್‌ ಅನ್ನು ರನ್‌ ಮಾಡಲಿದೆ. ಜೊತೆಗೆ ಪವರ್‌ವಿಆರ್‌ GE8320 ಗ್ರಾಫಿಕ್ಸ್‌ ಕಾರ್ಡ್‌ ಪಡೆದಿದ್ದು, ಈ ಆಫರ್ ಬೆಲೆಯ ಫೋನ್ 64GB ಇಂಟರ್‌ ಸ್ಟೋರೇಜ್‌ ಹಾಗೂ 2GB RAM ಆಯ್ಕೆ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಅದಾಗ್ಯೂ ನೀವು ಇನ್ನೂ ಹೆಚ್ಚಿನ ಸ್ಟೋರೇಜ್‌ ಬೇಕು ಎಂದರೆ 1 TB ವರೆಗೆ ಬೆಂಬಲಿಸುವ ಎಸ್‌ಡಿ ಕಾರ್ಡ್‌ ಆಯ್ಕೆ ನೀಡಲಾಗಿದೆ.

ರೆಡ್ಮಿ A2 ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಇನ್ನು ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬಂದರೆ ಇದು f/2.0 ಅಪರ್ಚರ್‌ನ 8 ಮೆಗಾಪಿಕ್ಸೆಲ್‌ ಕ್ಯಾಮೆರಾ ಹೊಂದಿದ್ದು, ಇದು 0.08 ಮೆಗಾಪಿಕ್ಸೆಲ್‌ (ಆಕ್ಸಿಲಿಯರಿ ಲೆನ್ಸ್) ಮೂಲಕ ಕಾಣಿಸಿಕೊಂಡಿದೆ. ಇದರೊಂದಿಗೆ ಡ್ಯುಯಲ್ ಎಲ್ಇಡಿ ಫ್ಲ್ಯಾಶ್‌, ಹೆಚ್‌ಡಿಆರ್‌ ಫೀಚರ್ಸ್‌ ಅನ್ನು ಕಾಣಬಹುದು. ಹಾಗೆಯೇ
ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ಪಡೆದಿದೆ. ಈ ಕ್ಯಾಮೆರಾ ಮೂಲಕ 1080p@30fps ಸಾಮರ್ಥ್ಯದ ವಿಡಿಯೋ ರೆಕಾರ್ಡ್‌ ಮಾಡಬಹುದು.

1 TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್‌ ಆಯ್ಕೆಯ ಫೋನ್‌ 5,499ರೂ.ಗೆ ಲಭ್ಯ!

ರೆಡ್ಮಿ A2 ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ : ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ. ಇದರ ಜೊತೆಗೆ ವೈ ಫೈ 802.11 a/b/g/n, ಬ್ಲೂಟೂತ್ ಆವೃತ್ತಿ 5.0, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, ಬಿಡಿಎಸ್ ಸ್ಥಾನೀಕರಣ, ಎಫ್‌ಎಮ್‌ ರೇಡಿಯೋ, ಯುಎಸ್‌ಬಿ ಮೈಕ್ರೋ ಯುಎಸ್‌ಬಿ 2.0 ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್‌ ಪಡೆದಿದೆ.

Best Mobiles in India

English summary
Redmi A2 smartphone is now available at a very low price. This phone has got an 8 megapixel rear camera and will provide good backup through a 5000 mAh capacity battery.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+