Home
ಸುದ್ದಿಜಾಲ

ಇಂದು ರೆಡ್ಮಿಯ ಈ ಫೋನಿನ ಫಸ್ಟ್‌ ಸೇಲ್‌ ಪ್ರಾರಂಭ!..ಖಂಡಿತಾ ಆಫರ್‌ ಇದೆ!

ರೆಡ್ಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ರೆಡ್ಮಿ A3 ಮೊಬೈಲ್‌ ಫಸ್ಟ್‌ ಸೇಲ್‌ ಇಂದು (ಫೆಬ್ರವರಿ 23 ರಂದು) ಫ್ಲಿಪ್‌ಕಾರ್ಟ್‌ ತಾಣ ಹಾಗೂ ಮಿ ವೆಬ್‌ಸೈಟ್‌ ಮೂಲಕ ಮಧ್ಯಾಹ್ನ 12 ರಿಂದ ಪ್ರಾರಂಭ ಆಗಲಿದೆ. ಈ ಫೋನ್‌ ಅಗ್ಗದ ಪ್ರೈಸ್‌ ಟ್ಯಾಗ್‌ ಪಡೆದಿದ್ದು, ಕೆಲವು ಆಕರ್ಷಕ ಫೀಚರ್ಸ್‌ ಪಡೆದಿದೆ.

ಹೌದು, ರೆಡ್ಮಿ A3 ಮೊಬೈಲ್‌ ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಇಂದು ಫಸ್ಟ್‌ ಸೇಲ್‌ ಪ್ರಾರಂಭ ಆಗಲಿದೆ. ಈ ಫೋನ್‌ ಭಿನ್ನ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಫ್ಲಿಪ್‌ಕಾರ್ಟ್‌ನಲ್ಲಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಕೂಡಾ ದೊರೆಯಲಿವೆ. ಅಂದಹಾಗೆ ಈ ಫೋನ್‌ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ಪಡೆದಿದ್ದು, ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದೆ.

ಇಂದು ರೆಡ್ಮಿಯ ಈ ಫೋನಿನ ಫಸ್ಟ್‌ ಸೇಲ್‌ ಪ್ರಾರಂಭ!..ಖಂಡಿತಾ ಆಫರ್‌ ಇದೆ!

ರೆಡ್ಮಿ A3 ಮೊಬೈಲ್‌ನ ಆರಂಭಿಕ ವೇರಿಯಂಟ್‌ ಬೆಲೆಯು 7,299ರೂ. ಆಗಿದ್ದು, ಖರೀದಿದಾರರು ಈ ಮೊಬೈಲ್‌ ಅನ್ನು ಲೇಕ್ ಬ್ಲೂ, ಮಿಡ್ನೈಟ್ ಬ್ಲ್ಯಾಕ್ ಅಥವಾ ಆಲಿವ್ ಗ್ರೀನ್ ಕಲರ್‌ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ. ಹಾಗಾದರೇ ರೆಡ್ಮಿ A3 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ A3 ಫೋನಿನ ಫೀಚರ್ಸ್‌ ಮಾಹಿತಿ

ರೆಡ್ಮಿ A3 ಫೋನ್ 6.71 ಇಂಚಿನ ಹೆಚ್‌ಡಿ ಪ್ಲಸ್‌ ಐಪಿಎಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇ 1650 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ IPS LCD ಸ್ಕ್ರೀಸ್ಮಾರ್ಟ್‌ಫೋನ್‌ನ್ ಆಗಿದ್ದು, 90Hz ರಿಫ್ರೆಶ್ ರೇಟ್ ಸಪೋರ್ಟ್‌ ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಇಂದು ರೆಡ್ಮಿಯ ಈ ಫೋನಿನ ಫಸ್ಟ್‌ ಸೇಲ್‌ ಪ್ರಾರಂಭ!..ಖಂಡಿತಾ ಆಫರ್‌ ಇದೆ!

ರೆಡ್ಮಿ A3 ಮೊಬೈಲ್‌ 2.2 GHz ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ಪವರ್‌ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 (ಗೋ ಆವೃತ್ತಿ) ಸಪೋರ್ಟ್‌ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 3GB RAM + 64GB, 4GB RAM + 128GB ಹಾಗೂ 6GB RAM + 128GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯ. ಅಲ್ಲದೇ ಮೈಕ್ರೊ ಎಸ್‌ಡಿ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಆಯ್ಕೆ ಇದೆ.

ರೆಡ್ಮಿ ಸಂಸ್ಥೆಯ ಈ ಮೊಬೈಲ್‌ ಹಿಂಭಾಗದಲ್ಲಿ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದ್ದು, 0.08MP ಸೆಕೆಂಡರಿ ಕ್ಯಾಮೆರಾ ಸೆನ್ಸಾರ್‌ ಸಹ ಹೊಂದಿದೆ. ಅಲ್ಲದೇ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದ್ದು, ಇದರೊಂದಿಗೆ ಹಿಂಭಾಗದ ಕ್ಯಾಮೆರಾದೊಂದಿಗೆ ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ.

ರೆಡ್ಮಿ A3 ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪ್ರಯೋಜನ ಜೊತೆಗೆ ಲಭ್ಯ, ಇದರ ಜೊತೆಗೆ 10W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುವುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, Wi-Fi 802.11 b/g/n, ಬ್ಲೂಟೂತ್ 5.0, GPS + GLONASS, USB ಟೈಪ್- C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ 3.5mm ಆಡಿಯೋ ಜಾಕ್, FM ರೇಡಿಯೋ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ರೆಡ್ಮಿ ಕಂಪನಿಯ ಈ ಮೊಬೈಲ್‌ 3GB + 64GB, 4GB + 128GB ವೇರಿಯಂಟ್‌ ಹಾಗೂ 6GB + 128GB ವೇರಿಯಂಟ್‌ ಆಯ್ಕೆ ಪಡೆದಿದೆ. ಈ ಫೋನ್‌ ಲೇಕ್ ಬ್ಲೂ, ಮಿಡ್ನೈಟ್ ಬ್ಲ್ಯಾಕ್ ಅಥವಾ ಆಲಿವ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ. ಇನ್ನು ಮೊಬೈಲ್‌ ಫೆಬ್ರವರಿ 23 ರಿಂದ Mi.com, ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ.

Best Mobiles in India

English summary
Redmi A3 first sale in India today. Check offer, price, specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+