ಕಡಿಮೆ ಬೆಲೆಯ ಈ REDMI ಫೋನ್ ಈಗ ಇನ್ನಷ್ಟು ಸಸ್ತಾ ಬೆಲೆಗೆ ಲಭ್ಯ!
ಒಂದಿಲ್ಲೊಂದು ರಿಯಾಯಿತಿ ಮಾರಾಟ ಮೇಳವನ್ನು ಘೋಷಿಸುವ ಮೂಲಕ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಆನ್‌ಲೈನ್ ಶಾಪಿಂಗ್ ಪ್ರಿಯ ಗ್ರಾಹಕರನ್ನು ಸೆಳದಿದೆ. ಈ ಪ್ಲಾಟ್‌ಫಾರ್ಮ್ ಎಲ್ಲ ಉತ್ಪನ್ನಗಳಿಗೂ ಬೊಂಬಾಟ್ ರಿಯಾಯಿತಿ ಲಭ್ಯ ಮಾಡಿರುತ್ತದೆ. ಅದರಲ್ಲಿಯೂ ಮುಖ್ಯವಾಗಿ ಮೊಬೈಲ್‌ಗಳಿಗೆ ಗ್ರಾಹಕರು ವಾವ್ ಎನಿಸುವ ಡಿಸ್ಕೌಂಟ್ ಕೊಡುಗೆಗಳನ್ನು ತಿಳಿಸುತ್ತದೆ. ಸದ್ಯ ಅಮೆಜಾನ್ ತಾಣದಲ್ಲಿ ರೆಡ್ಮಿಯ ಎಂಟ್ರಿ ಲೆವೆಲ್ ಮೊಬೈಲ್‌ಗಳಲ್ಲಿ ಒಂದಾಗಿರುವ ರೆಡ್ಮಿ A3 (Redmi A3) ಮೊಬೈಲ್ ಸಖತ್ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ನಿಜಕ್ಕೂ ವಾವ್ ಎನ್ನುವಂತೆ ಆಗಿದೆ.
ಹೌದು, ಇ ಕಾಮರ್ಸ್ ಹಿರಿಯಣ್ಣ ಎನಿಸಿರುವ ಅಮೆಜಾನ್ ಪ್ಲಾಟ್‌ಫಾರ್ಮ್ನಲ್ಲಿ ಈಗ ರೆಡ್ಮಿ A3 ಫೋನ್ ಶೇ. 30% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 3GB RAM + 64 GB ವೇರಿಯಂಟ್ 6,999ರೂ. ಗಳ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದರೊಂದಿಗೆ ಈ ಮೊಬೈಲ್‌ಗೆ ಕೆಲವು ಆಯ್ದ ಬ್ಯಾಂಕ್ ಆಫರ್ ಕೂಡಾ ಲಭ್ಯ ಇರುತ್ತವೆ.

ಅಂದಹಾಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದು ಪ್ರಾಥಮಿಕ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇನ್ನುಳಿದಂತೆ ರೆಡ್ಮಿ A3 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ A3 - ಫೀಚರ್ಸ್
ರೆಡ್ಮಿ A3 ಫೋನ್ 6.71 ಇಂಚಿನ ಹೆಚ್‌ಡಿ ಪ್ಲಸ್ ಐಪಿಎಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1650 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಇನ್ನು ಡಿಸ್‌ಪ್ಲೇ IPS LCD ಸ್ಕ್ರೀನ್ ಸ್ಮಾರ್ಟ್‌ಫೋನ್ ಆಗಿದ್ದು, 90Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.
ರೆಡ್ಮಿ A3 ಫೋನ್ 2.2 GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 (ಗೋ ಆವೃತ್ತಿ) ಬೆಂಬಲ ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 3GB RAM + 64GB, 4GB RAM + 128GB ಹಾಗೂ 6GB RAM + 128GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಅಲ್ಲದೇ ಮೈಕ್ರೊ ಎಸ್‌ಡಿ ಮೂಲಕ 1TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಆಯ್ಕೆ ಇದೆ.
ರೆಡ್ಮಿ A3 ಫೋನ್ ಹಿಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 0.08ಎಂಪಿ ದ್ವಿತೀಯ ಕ್ಯಾಮೆರಾ ಸೆನ್ಸಾರ್ ಸಹ ಪಡೆದಿದೆ. ಅಲ್ಲದೇ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಇದರೊಂದಿಗೆ ಹಿಂಭಾಗದ ಕ್ಯಾಮೆರಾದೊಂದಿಗೆ ಎಲ್‌ಇಡಿ ಫ್ಲ್ಯಾಷ್ ಅನ್ನು ಸಹ ನೀಡಲಾಗಿದೆ.
ರೆಡ್ಮಿ A3 ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುವುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳು ಡ್ಯುಯಲ್ 4G VoLTE, Wi-Fi 802.11 b/g/n, ಬ್ಲೂಟೂತ್ 5.0, GPS + GLONASS, USB ಟೈಪ್- C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ 3.5mm ಆಡಿಯೋ ಜಾಕ್, FM ರೇಡಿಯೋ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.


Click it and Unblock the Notifications








