Home
ಸುದ್ದಿಜಾಲ

ರೆಡ್ಮಿ A3 ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ!..ಗ್ರಾಹಕರು ಖುಷ್‌!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ನೀಡಿ ಗ್ರಾಹಕರನ್ನು ಸೆಳೆಯುತ್ತದೆ. ಆ ಪೈಕಿ ರೆಡ್ಮಿ ಸಂಸ್ಥೆಯ ಇತ್ತೀಚಿನ ರೆಡ್ಮಿ A3 ಫೋನಿಗೂ ಈಗ ಬೊಂಬಾಟ್‌ ಡಿಸ್ಕೌಂಟ್‌ ಲಭ್ಯ ಆಗಿದ್ದು, ಹೊಸ ಫೋನ್‌ ಖರೀದಿಸುವ ಗ್ರಾಹಕರಿಗೆ ಖುಷಿ ಎನಿಸಿದೆ.

ಹೌದು, ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ A3 ಮೊಬೈಲ್‌ ಶೇ. 27% ರಷ್ಟು ನೇರ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಗ್ರಾಹಕರು ಡಿಸ್ಕೌಂಟ್‌ನಲ್ಲಿ ಈಗ 7,999ರೂ. ಗಳ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರೊಂದಿಗೆ ವೆಬ್‌ಸೈಟ್‌ನಲ್ಲಿ ಸಿಗುವ ಇತರೆ ಕೊಡುಗೆ ಪಡೆದುಕೊಂಡರೆ, ಮತ್ತಷ್ಟು ಆಫರ್‌ ಪಡೆಯಲು ಅವಕಾಶ ಸಿಗಲಿದೆ.

ರೆಡ್ಮಿ A3 ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ!..ಗ್ರಾಹಕರು ಖುಷ್‌!

ಅಂದಹಾಗೆ ರೆಡ್ಮಿ A3 ಫೋನ್‌ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ಪವರ್‌ ಪಡೆದಿದ್ದು, ಇದು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪ್ರಾಥಮಿಕ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಫೋನ್‌ 4 GB + 64GB ಹಾಗೂ 6GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಅಲ್ಲದೇ ಬ್ಲೂ, ಬ್ಲ್ಯಾಕ್‌ ಹಾಗೂ ಗ್ರೀನ್‌ ಕಲರ್‌ ಆಯ್ಕೆಯಲ್ಲಿ ಖರೀದಿಸಬಹುದು. ಹಾಗಾದರೆ ರೆಡ್ಮಿ A3 ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ A3 ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ!..ಗ್ರಾಹಕರು ಖುಷ್‌!

ರೆಡ್ಮಿ A3 - ಫೀಚರ್ಸ್‌

ರೆಡ್ಮಿ A3 ಮೊಬೈಲ್‌ 6.71 ಇಂಚಿನ ಹೆಚ್‌ಡಿ ಪ್ಲಸ್‌ ಐಪಿಎಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1650 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಡಿಸ್‌ಪ್ಲೇ IPS LCD ಸ್ಕ್ರೀನ್‌ ಸ್ಮಾರ್ಟ್‌ಫೋನ್‌ ಆಗಿದ್ದು, 90Hz ರಿಫ್ರೆಶ್ ರೇಟ್ ಸಪೋರ್ಟ್‌ ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ರೆಡ್ಮಿ A3 ಮೊಬೈಲ್‌ 2.2 GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 (ಗೋ ಆವೃತ್ತಿ) ಬೆಂಬಲ ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 3GB RAM + 64GB, 4GB RAM + 128GB ಹಾಗೂ 6GB RAM + 128GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಅಲ್ಲದೇ ಮೈಕ್ರೊ ಎಸ್‌ಡಿ ಮೂಲಕ 1TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಆಯ್ಕೆ ಇದೆ.

ರೆಡ್ಮಿ A3 ಮೊಬೈಲ್‌ ಹಿಂಭಾಗದಲ್ಲಿ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, 0.08ಎಂಪಿ ಎರಡನೇ ಕ್ಯಾಮೆರಾ ಸೆನ್ಸಾರ್‌ ಸಹ ಪಡೆದಿದೆ. ಅಲ್ಲದೇ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಇದರೊಂದಿಗೆ ಹಿಂಭಾಗದ ಕ್ಯಾಮೆರಾದೊಂದಿಗೆ ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ.

ರೆಡ್ಮಿ A3 ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುವುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳು ಡ್ಯುಯಲ್ 4G VoLTE, Wi-Fi 802.11 b/g/n, ಬ್ಲೂಟೂತ್ 5.0, GPS + GLONASS, USB ಟೈಪ್- C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ 3.5mm ಆಡಿಯೋ ಜಾಕ್, FM ರೇಡಿಯೋ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

Best Mobiles in India

English summary
REDMI A3 received big price drop in India. Check Offer Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+