ಅಗ್ಗದ ಬೆಲೆಯಲ್ಲಿ ಭಾರತಕ್ಕೆ ಕಾಲಿಟ್ಟ Redmi A3 ಸ್ಮಾರ್ಟ್‌ಫೋನ್: ಜಬರ್ದಸ್ತ್ ಫೀಚರ್ಸ್!
ಶಿಯೋಮಿ ಕಂಪೆನಿಯ ಸಬ್ ಬ್ರ್ಯಾಂಡ್ ರೆಡ್ಮಿ ಭಾರತದಲ್ಲಿ Redmi A3 ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಬಿಗ್ ಸೈಜ್ ಡಿಸ್‌ಪ್ಲೇಯನ್ನು ಹೊಂದಿದ್ದು, ಕೈಗೆಟಕುವ ಬೆಲೆಯಲ್ಲಿ ಎಂಟ್ರಿ ನೀಡಿದೆ. ಇದು ಆಕ್ಟಾ-ಕೋರ್ Helio G36 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, Redmi A3 ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಬರಲಿದ್ದು, ಅತ್ಯಾಕರ್ಷಕ ವಿನ್ಯಾಸದೊಂದಿಗೆ ಗಮನಸೆಳೆದಿದೆ. ಜೊತೆಗೆ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Redmi A3 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
Redmi A3 ಸ್ಮಾರ್ಟ್‌ಫೋನ್ 6.71 ಇಂಚಿನ ಹೆಚ್‌ಡಿ ಪ್ಲಸ್ ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1650 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ IPS LCD ಸ್ಕ್ರೀನ್ ಆಗಿದ್ದು, 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇದಲ್ಲದೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ.
Redmi A3 ಪ್ರೊಸೆಸರ್ ಯಾವುದು?
Redmi A3 ಸ್ಮಾರ್ಟ್‌ಫೋನ್ 2.2 GHz ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 64GB, 4GB RAM + 128GB 6GB RAM + 128GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೈಕ್ರೊ SD ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
Redmi A3 ಕ್ಯಾಮೆರಾ ಸೆಟಪ್ ಏನಿದೆ?
Redmi A3 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದ್ದು, 0.08MP ಸೆಕೆಂಡರಿ ಸೆನ್ಸಾರ್‌ನೊಂದಿಗೆ ಬರಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಿಂಭಾಗದ ಕ್ಯಾಮೆರಾದೊಂದಿಗೆ ಎಲ್‌ಇಡಿ ಫ್ಲ್ಯಾಷ್ ಅನ್ನು ಸಹ ನೀಡಲಾಗಿದೆ.

Redmi A3 ಬ್ಯಾಟರಿ ಮತ್ತು ಇತರೆ
Redmi A3 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, Wi-Fi 802.11 b/g/n, ಬ್ಲೂಟೂತ್ 5.0, GPS + GLONASS, USB ಟೈಪ್- C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ 3.5mm ಆಡಿಯೋ ಜಾಕ್, FM ರೇಡಿಯೋ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.
ಭಾರತದಲ್ಲಿ ಬೆಲೆ ಮತ್ತು ಲಭ್ಯತೆ
Redmi A3 ಸ್ಮಾರ್ಟ್‌ಫೋನ್ 3GB + 64GB ಮಾದರಿಗೆ 7,299ರೂ ಬೆಲೆಯನ್ನು ಹೊಂದಿದೆ. ಇನ್ನು 4GB + 128GB ಮಾದರಿಯ ಬೆಲೆ 8,299ರೂ ಆಗಿದೆ. ಇದರ ಟಾಪ್-ಎಂಡ್ ಮಾಡೆಲ್ 6GB + 128GB ಆಯ್ಕೆಯ ಬೆಲೆ 9,299ರೂ ಹೊಂದಿದೆ. ಈ ಫೋನ್ ಲೇಕ್ ಬ್ಲೂ, ಮಿಡ್ನೈಟ್ ಬ್ಲ್ಯಾಕ್ ಅಥವಾ ಆಲಿವ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಪಡೆಯಬಹುದು. ಇನ್ನು ಸ್ಮಾರ್ಟ್‌ಫೋನ್ ಫೆಬ್ರವರಿ 23ರಿಂದ Mi.com, Flipkart ಮೂಲಕ ಮಾರಾಟವಾಗಲಿದೆ. ಬಜೆಟ್ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಬಯಸುವವರಿಗೆ ಸೂಕ್ತ ಆಯ್ಕೆ ಆಗಿದೆ.


Click it and Unblock the Notifications








