ನಾಳೆ Redmi A4 5G ಫಸ್ಟ್ ಸೇಲ್ ಪ್ರಾರಂಭ; ಅಗ್ಗದ ಬೆಲೆ, ಸಖತ್ ಫೀಚರ್ಸ್!
ಶಿಯೋಮಿ ಸಂಸ್ಥೆಯು ಇತ್ತೀಚಿಗೆ ಲಾಂಚ್ ಮಾಡಿರುವ ರೆಡ್ಮಿ A4 5G (Redmi A4 5G) ಸ್ಮಾರ್ಟ್‌ಫೋನ್ ಮೊದಲ ಮಾರಾಟ ನಾಳೆ (ನವೆಂಬರ್ 27 ರಂದು) ಮಧ್ಯಾಹ್ನ 12 ಗಂಟೆಗೆ ಅಮೆಜಾನ್ ದೈತ್ಯ ಇ ಕಾಮರ್ಸ್ ತಾಣದ ಮೂಲಕ ಪ್ರಾರಂಭ ಆಗಲಿದೆ. ಈ ಫೋನ್ ಸ್ನ್ಯಾಪ್‌ಡ್ರಾಗನ್ 4s Gen 2 (Snapdragon 4s Gen 2) ಪ್ರೊಸೆಸರ್ ಸೌಲಭ್ಯವನ್ನು ಪಡೆದುಕೊಂಡಿದೆ.
ಹೌದು, ಶಿಯೋಮಿ ಕಂಪನಿಯ ರೆಡ್ಮಿ A4 5G ಮೊಬೈಲ್ ನಾಳೆ ಅಧಿಕೃತವಾಗಿ ಅಮೆಜಾನ್ ಇ ಕಾಮರ್ಸ್ ಮೂಲಕ ಮಾರಾಟ ಆರಂಭ ಮಾಡಲಿದೆ. ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯದಲ್ಲಿ ಇದೆ. ಹಾಗೆಯೇ 5 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ.

ರೆಡ್ಮಿ A4 5G ಮೊಬೈಲ್ 4GB RAM + 64GB ಹಾಗೂ 4GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಇದು 5,160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದರ ಆರಂಭಿಕ ಆಫರ್ ಬೆಲೆಯು 8,499ರೂ. ಗಳು ಆಗಿದೆ. ಹಾಗಾದರೇ ರೆಡ್ಮಿ A4 5G ಮೊಬೈಲ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಡಿಸ್‌ಪ್ಲೇ ವಿನ್ಯಾಸ ಹೇಗೆ
ರೆಡ್ಮಿ A4 5G ಮೊಬೈಲ್ 6.52 ಇಂಚಿನ HD+ ಡಿಸ್‌ಪ್ಲೇ ಜೊತೆಗೆ ಉತ್ತಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಇನ್ನು ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸೌಲಭ್ಯವನ್ನು ಸಪೋರ್ಟ್ ಮಾಡಲಿದೆ. ಈ ಡಿಸ್‌ಪ್ಲೇಯು 600 nits ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇದರೊಂದಿಗೆ ಗೇಮಿಂಗ್ ಮತ್ತು ವೀಡಿಯೊ ಪ್ಲೇಬ್ಯಾಕ್ಗಾಗಿ ಸುಗಮ ದೃಶ್ಯಗಳನ್ನು ಒದಗಿಸುತ್ತದೆ.
ಯಾವ ಪ್ರೊಸೆಸರ್ ಪವರ್ ಇದೆ
ರೆಡ್ಮಿ A4 5G ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4s Gen 2 (Snapdragon 4s Gen 2) ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದ ಪವರ್ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಇದೆ. ಅಲ್ಲದೇ ಈ ಫೋನ್ 4GB RAM + 64 GB ಹಾಗೂ 4GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.
ಡ್ಯುಯಲ್ ಕ್ಯಾಮೆರಾ ಸೆನ್ಸಾರ್
ರೆಡ್ಮಿ A4 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸಾಮರ್ಥ್ಯ ಪಡೆದಿದೆ. ಇದರ ಜೊತೆಗೆ ಮುಂಭಾಗದಲ್ಲಿ ಸೆಲ್ಫಿಗಾಗಿ ಹಾಗೂ ವಿಡಿಯೋ ಕರೆಗಾಗಿ 5 ಮೆಗಾ ಪಿಕ್ಸಲ್ ಸೆನ್ಸಾರ್‌ನ ಕ್ಯಾಮೆರಾ ಒದಗಿಸಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್
ರೆಡ್ಮಿ A4 5G ಮೊಬೈಲ್ 5,160 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಅನುಗುಣವಾಗಿ 33w ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಇನ್ನುಳಿದಂತೆ ಈ ಫೋನ್ ಬ್ಲೂಟೂತ್, ವೈ ಫೈ, NAVIC, 3.5mm ಆಡಿಯೋ ಜ್ಯಾಕ್ ಹಾಗೂ 150% ವ್ಯಾಲೂಮ್ ಬೂಸ್ಟ್ ಸೌಲಭ್ಯಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಬ್ಲ್ಯಾಕ್ ಹಾಗೂ ಪರ್ಪಲ್ ಕಲರ್ ಆಯ್ಕೆಯನ್ನು ಪಡೆದುಕೊಂಡಿದೆ.


Click it and Unblock the Notifications








